Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:15 - ಕನ್ನಡ ಸಮಕಾಲಿಕ ಅನುವಾದ

15 ಸೇನಾಧೀಶ್ವರ ಯೆಹೋವ ದೇವರು ಪುನಃ ಹೀಗೆ ನುಡಿದಿದ್ದಾರೆ: “ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನ ಎಂಬ ಖಜಾಂಚಿಯ ಬಳಿಗೆ ಹೋಗಿ ಹೀಗೆ ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ, “ಹೋಗು, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೀಗೆ ನುಡಿದಿದ್ದಾರೆ : “ಹೋಗು, ಅರಮನೆಯ ಮೇಲ್ವಿಚಾರಕ ಶೆಬ್ನ ಎಂಬ ಅಧ್ಯಕ್ಷನಿಗೆ ಹೀಗೆಂದು ಹೇಳು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ - ನಡೆ, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು, “ಸೇವಕನಾದ ಶೆಬ್ನನ ಬಳಿಗೆ ಹೋಗು. ಅವನು ಅರಮನೆಯ ಮೇಲ್ವಿಚಾರಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:15
12 ತಿಳಿವುಗಳ ಹೋಲಿಕೆ  

ಆಗ ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವನ ಬಳಿಗೆ ಬಂದರು.


ಅವರು ಅರಸನನ್ನು ಕರೆಕಳುಹಿಸಿದರು. ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವರ ಬಳಿಗೆ ಬಂದರು.


ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.


ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.


ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ, ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.


ಅದರಂತೆ ಅವನು ಹೋಗುತ್ತಿದ್ದಾಗ, ಮಾರ್ಗದಲ್ಲಿ ಐಥಿಯೋಪ್ಯದ ರಾಣಿ ಕಂದಾಕೆಯ ಹಣಕಾಸಿನ ಮುಖ್ಯ ಅಧಿಕಾರಿಯಾಗಿದ್ದ ಕಂಚುಕಿಯನ್ನು ಭೇಟಿಯಾದನು. ಈ ಮನುಷ್ಯನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿದ್ದನು.


ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.


ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.


ಅರಸನ ಬೊಕ್ಕಸಗಳ ಮೇಲೆ ಅದೀಯೇಲನ ಮಗ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಗ್ರಾಮಗಳಲ್ಲಿಯೂ, ಬುರುಜುಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನನು ಇದ್ದನು.


ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.


ಆಗ ಅರಮನೆಯ ಆಡಳಿತಾಧಿಕಾರಿ, ಪಟ್ಟಣದ ರಾಜ್ಯಪಾಲರು, ಹಿರಿಯರು ಮತ್ತು ಪಾಲಕರು ಈ ಸಂದೇಶವನ್ನು ಯೇಹುವಿನ ಬಳಿಗೆ ಕಳುಹಿಸಿ, “ನಾವು ನಿಮ್ಮ ಸೇವಕರು ನೀವು ನಮಗೆ ಹೇಳುವುದನ್ನೆಲ್ಲಾ ಮಾಡುತ್ತೇವೆ. ನಾವು ಯಾರನ್ನೂ ಅರಸನನ್ನಾಗಿ ನೇಮಿಸುವುದಿಲ್ಲ. ನಿಮ್ಮ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನೀವು ಮಾಡಿರಿ,” ಎಂದರು.


ಅಹಿಷಾರನು ರಾಜ್ಯ ಗೃಹಾಧಿಪತಿ. ಅಬ್ದನ ಮಗ ಅದೋನೀರಾಮನು ದಾಸರ ಮೇಲೆ ಉಸ್ತುವಾರಿಮಾಡಿಸುವವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು