Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:21 - ಕನ್ನಡ ಸಮಕಾಲಿಕ ಅನುವಾದ

21 ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟಿನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಜನರಿಗೂ ತಂದೆಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಿನ್ನ ವಸ್ತ್ರವನ್ನು ಅವನಿಗೆ ತೊಡಿಸುವೆನು. ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟುವೆನು. ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಜೆರುಸಲೇಮಿನ ನಿವಾಸಿಗಳಿಗೂ ಜುದೇಯದ ಮನೆತನಕ್ಕೂ ತಂದೆಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇವಿುನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಿನ್ನ ಬಟ್ಟೆಯನ್ನು ತೆಗೆದು ಆ ಸೇವಕನಿಗೆ ಕೊಡುವೆನು. ನಿನ್ನ ರಾಜದಂಡವನ್ನು ಅವನಿಗೆ ಕೊಡುವೆನು. ನಿನ್ನ ವಿಶೇಷ ಹುದ್ದೆಯನ್ನು ಅವನಿಗೆ ಕೊಡುವೆನು. ಆ ಸೇವಕನು ಯೆಹೂದದ ಜನರಿಗೂ ಜೆರುಸಲೇಮಿನ ಜನರಿಗೂ ತಂದೆಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:21
8 ತಿಳಿವುಗಳ ಹೋಲಿಕೆ  

“ಆದ್ದರಿಂದ ಈಗ ನೀವಲ್ಲ, ದೇವರು ತಾವೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ. ದೇವರು ನನ್ನನ್ನು ಫರೋಹನಿಗೆ ತಂದೆಯಾಗಿಯೂ, ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಈಜಿಪ್ಟ್ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾರೆ.


ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.


ಆಗ ಅರಸನು ತಾನು ಹಾಮಾನನಿಂದ ತೆಗೆದುಕೊಂಡ ತನ್ನ ಮುದ್ರೆಉಂಗುರವನ್ನು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆಕೈಯನ್ನು ಹಾಮಾನನ ಸೊತ್ತಿಗೆ ಅಧಿಕಾರಿಯಾಗಿ ನೇಮಿಸಿದಳು.


ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ, ತನ್ನ ವಸ್ತ್ರಗಳನ್ನೂ, ಖಡ್ಗವನ್ನೂ, ಬಿಲ್ಲನ್ನೂ, ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.


ದರಿದ್ರರಿಗೆ ನಾನು ತಂದೆಯಾಗಿದ್ದೆನು; ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.


ಚಿತ್ರದಲ್ಲಿನ ಪುರುಷರು ತಮ್ಮ ಸೊಂಟದ ಸುತ್ತಲೂ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು ಮತ್ತು ತಲೆಯ ಮೇಲೆ ಬೀಸುವ ಪೇಟಗಳನ್ನು ಹೊಂದಿದ್ದರು; ಅವರೆಲ್ಲರೂ ಬಾಬಿಲೋನ್ ನಿವಾಸಿಗಳಂತೆ, ಬಾಬಿಲೋನಿನ ರಥದ ಅಧಿಕಾರಿಗಳಂತೆ ಕಾಣುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು