Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:23 - ಕನ್ನಡ ಸಮಕಾಲಿಕ ಅನುವಾದ

23 ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾಸನವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ವಂಶದವರಿಗೆ ವೈಭವವುಳ್ಳ ಸಿಂಹಾಸನವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ವಸ್ತುಗಳನ್ನು ತಗುಲಿಹಾಕುವ ಮೊಳೆಯಂತೆ ಗಟ್ಟಿಯಾದ ಸ್ಥಳದಲ್ಲಿ ಅವನನ್ನು ಬಿಗಿಯಾಗಿ ನಿಲ್ಲಿಸುವೆನು. ಅಲ್ಲದೆ, ಅವನು ತನ್ನ ವಂಶದವರಿಗೆ ಗೌರವಪೀಠವಾಗಿರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ವಂಶದವರಿಗೆ ಗೌರವಪೀಠವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಒಂದು ಗಟ್ಟಿಯಾದ ಹಲಗೆಯಲ್ಲಿ ಮೊಳೆಯನ್ನು ಹೊಡೆದು ಗಟ್ಟಿಯಾಗಿರಿಸುವಂತೆ ಅವನನ್ನು ನಾನು ಬಲಪಡಿಸುವೆನು. ಆ ಸೇವಕನು ತನ್ನ ಕುಟುಂಬದವರಿಗೆ ಗೌರವಪೀಠದಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:23
12 ತಿಳಿವುಗಳ ಹೋಲಿಕೆ  

ದೇವರು ನೀತಿವಂತರಿಂದ ತಮ್ಮ ಕಣ್ಣುಗಳನ್ನು ತೊಲಗಿಸುವುದಿಲ್ಲ; ದೇವರು ನೀತಿವಂತರನ್ನು ಅರಸುಗಳ ಸಂಗಡ ಸಿಂಹಾಸನದಲ್ಲಿ ಕುಳ್ಳಿರಿಸುವರು; ಹೌದು, ದೇವರು ಅವರನ್ನು ಎಂದೆಂದಿಗೂ ಉನ್ನತಕ್ಕೇರಿಸುವರು.


“ಈಗ ನಮ್ಮ ಯೆಹೋವ ದೇವರೇ, ಸ್ವಲ್ಪ ಹೊತ್ತು ನಮಗೆ ದಯೆತೋರಿ ನಮ್ಮ ದಾಸತ್ವದಿಂದ ನಮಗೆ ಬಿಡುಗಡೆ ಕೊಟ್ಟಿದ್ದೀರಿ. ನಮ್ಮ ಕಣ್ಣುಗಳನ್ನು ಬೆಳಗಿಸಿ, ತಮ್ಮ ಪರಿಶುದ್ಧ ಸ್ಥಾನದಲ್ಲಿ ನೆಲೆಗೊಳಿಸುವಂತೆ ಮಾಡಿದ್ದೀರಿ


ಆ ಕುಲದಿಂದಲೇ ಮೂಲೆಗಲ್ಲೂ, ಗುಡಾರದ ಮೊಳೆಯೂ, ಯುದ್ಧದ ಬಿಲ್ಲೂ, ಸಕಲ ಅಧಿಕಾರಿಗಳೂ ಕೂಡಿಕೊಂಡು ಹೊರಬರುವರು.


ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ.


ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗಿರುತ್ತವೆ. ಅವರು ಸಂಗ್ರಹಿಸಿದ ವಚನಗಳು ಒಬ್ಬ ಆತ್ಮಿಕ ಕುರುಬನಿಂದ ನೆಟ್ಟ ಮೊಳೆಗಳ ಹಾಗೆ ಕೊಡಲಾಗಿವೆ.


ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.


ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು.


ಬಟ್ಟಲು ಮೊದಲುಗೊಂಡು ಕೊಡದ ತನಕ, ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿಸುವರು.


“ಆ ದಿನದಲ್ಲಿ,” ಸೇನಾಧೀಶ್ವರ ಯೆಹೋವ ದೇವರು ಪ್ರಕಟಿಸುವುದು ಏನೆಂದರೆ, “ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಕುಸಿದುಬೀಳುವುದು. ಮೊಳೆಯ ಮೇಲೆ ಇದ್ದ ಭಾರವೂ ತೆಗೆದುಹಾಕಲಾಗುವುದು,” ಇದು ಯೆಹೋವ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು