ಯೆಶಾಯ 22:25 - ಕನ್ನಡ ಸಮಕಾಲಿಕ ಅನುವಾದ25 “ಆ ದಿನದಲ್ಲಿ,” ಸೇನಾಧೀಶ್ವರ ಯೆಹೋವ ದೇವರು ಪ್ರಕಟಿಸುವುದು ಏನೆಂದರೆ, “ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಕುಸಿದುಬೀಳುವುದು. ಮೊಳೆಯ ಮೇಲೆ ಇದ್ದ ಭಾರವೂ ತೆಗೆದುಹಾಕಲಾಗುವುದು,” ಇದು ಯೆಹೋವ ದೇವರ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. “ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇದರಿಂದ ಬಿಗಿಯಾಗಿ ಹೊಡೆಯಲಾಗಿದ್ದ ಆ ಮೊಳೆ ಸಡಿಲವಾಗಿ ಕುಸಿದುಬೀಳುವುದು. ಅದಕ್ಕೆ ತಗಲುಹಾಕಿದ್ದ ವಸ್ತುಗಳೆಲ್ಲ ಕಳಚಿಬೀಳುವುವು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೇಳಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸೇನಾಧೀಶ್ವರನಾದ ಯೆಹೋವನು ಹೇಳುವದೇನಂದರೆ - ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದಕ್ಕೆ ತಗಲುಹಾಕಿದ ಭಾರವೂ ನಾಶವಾಗುವದು. ಇದೇ ಯೆಹೋವನಾದ ನನ್ನ ನುಡಿ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಹಲಗೆಗೆ ಬಲವಾಗಿ ಹೊಡೆಯಲ್ಪಟ್ಟ ಆ ಮೊಳೆಯು (ಶೆಬ್ನ) ಬಲಹೀನವಾಗಿ ತುಂಡಾಗುವದು. ಆ ಮೊಳೆಯು ನೆಲಕ್ಕೆ ಬಿದ್ದು ನಾಶವಾಗುವದು. ಆಗ ಆ ಮೊಳೆಗೆ ತೂಗುಹಾಕಿದ್ದೆಲ್ಲವೂ ಅದರೊಂದಿಗೆ ನೆಲಕ್ಕೆ ಬೀಳುವದು. ಆಗ ನಾನು ಈ ಸಂದೇಶದಲ್ಲಿ ಹೇಳಿದ್ದೆಲ್ಲವೂ ಸಂಭವಿಸುವದು. ಅವುಗಳು ನೆರವೇರುತ್ತವೆ ಯಾಕೆಂದರೆ ಅವುಗಳನ್ನು ಹೇಳಿದಾತನು ಯೆಹೋವನೇ.” ಅಧ್ಯಾಯವನ್ನು ನೋಡಿ |