ಯೆಶಾಯ 22:3 - ಕನ್ನಡ ಸಮಕಾಲಿಕ ಅನುವಾದ3 ನಿನ್ನ ಅಧಿಕಾರಸ್ಥರೆಲ್ಲ ಒಟ್ಟಿಗೆ ಓಡಿದರೂ ಬಿಲ್ಲುಗಾರರಿಲ್ಲದೆಯೇ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದರೂ ನಿನ್ನ ಜನರು ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ; ದೂರದಿಂದ ಓಡುತ್ತಾ ಶತ್ರುವಿಗೆ ಸಿಕ್ಕಿದ ನಿನ್ನ ಜನರೆಲ್ಲರೊಂದಿಗೆ ಕಟ್ಟುಬಿದ್ದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿಮ್ಮ ಮುಖಂಡರೆಲ್ಲ ಒಟ್ಟಿಗೆ ಪಲಾಯನಗೈದರು; ಒಂದೇ ಒಂದು ಬಾಣವನ್ನು ಬಿಡುವುದಕ್ಕೆ ಮುಂಚೆ ಸೆರೆಹೋದರು. ದೂರಕ್ಕೆ ಪಲಾಯನಗೈದಿದ್ದರೂ ಅವರೆಲ್ಲರೂ ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲಿಲ್ಲದೆ ಸೆರೆಯಾಗಿದ್ದಾರೆ; ದೂರ ಓಡುತ್ತಾ [ಶತ್ರುವಿಗೆ] ಸಿಕ್ಕಿದ ನಿನ್ನ ಜನರೆಲ್ಲರೂ ಒಂದಿಗೆ ಕಟ್ಟುಬಿದ್ದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಧಿಪತಿಗಳೆಲ್ಲಾ ಒಟ್ಟಾಗಿ ಪಲಾಯನಗೈದರು. ಆದರೆ ಅವರೆಲ್ಲಾ ಬಿಲ್ಲುಗಳಿಲ್ಲದೆ ಹಿಡಿಯಲ್ಪಟ್ಟರು. ನಿಮ್ಮ ಎಲ್ಲಾ ಅಧಿಕಾರಿಗಳು ಒಟ್ಟಾಗಿ ಬಹು ದೂರಪ್ರದೇಶಗಳಿಗೆ ಓಡಿದರು. ಆದರೆ ಅವರೆಲ್ಲಾ ಹಿಡಿಯಲ್ಪಟ್ಟರು. ಅಧ್ಯಾಯವನ್ನು ನೋಡಿ |