Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:7 - ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿರುವುವು. ರಾಹುತರು ಪಟ್ಟಣದ ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿದವು, ರಾಹುತರು ಬಾಗಿಲಿನ ಹತ್ತಿರ ವ್ಯೂಹಕಟ್ಟಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ಫಲವತ್ತಾದ ತಗ್ಗುಪ್ರದೇಶಗಳು ರಥಗಳಿಂದ ತುಂಬಿರುವುವು. ಅಶ್ವದಳಗಳು ಪುರದ್ವಾರದ ಬಳಿ ಕಾವಲು ನಿಂತಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿದವು, ರಾಹುತರು ಬಾಗಿಲೆದುರಿಗೆ ವ್ಯೂಹಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೈನ್ಯಗಳು ನಿಮ್ಮ ವಿಶೇಷವಾದ ಕಣಿವೆಯಲ್ಲಿ ಎದುರುಬದುರಾಗಿ ಭೇಟಿಯಾಗುವರು. ಕಣಿವೆಯು ರಥಗಳಿಂದ ತುಂಬಿಹೋಗುವದು. ಅಶ್ವದಳದವರನ್ನು ದ್ವಾರದ ಮುಂದೆ ನಿಲ್ಲಿಸಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:7
9 ತಿಳಿವುಗಳ ಹೋಲಿಕೆ  

ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಏಲಾಮಿನವರು ಕುದುರೆಗಳ, ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆರೆದರು.


ಕರ್ತರು ಯೆಹೂದದ ಸಂರಕ್ಷಣೆಯ ಮುಸುಕನ್ನು ತೆಗೆದಿದ್ದಾರೆ. ಆ ದಿವಸದಲ್ಲಿ ಅಡವಿ ಅರಮನೆಯ ಯುದ್ಧ ಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತೀಯೆ.


ಏಕೆಂದರೆ ನಾನು ಉತ್ತರದಲ್ಲಿರುವ ರಾಜ್ಯಗಳ ಕುಲಗಳನ್ನೆಲ್ಲಾ ಕರೆಯುತ್ತೇನೆ. “ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ, ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.


ಆ ನಕ್ಷೆಯ ಸುತ್ತಲು ದಿಬ್ಬ ಹಾಕಿ, ಒಡ್ಡು ಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತಿಗೆ ಹಾಕು.


ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು, ಅದನ್ನು ನಿನಗೂ, ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ, ಆ ಪಟ್ಟಣದ ಮೇಲೆ ದೃಷ್ಟಿಯಿಡು, ಅದು ಮುತ್ತಲಾಗುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಾಯೇಲಿನ ಜನರಿಗೆ ಒಂದು ಸಂಕೇತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು