ಯೆಶಾಯ 22:9 - ಕನ್ನಡ ಸಮಕಾಲಿಕ ಅನುವಾದ9 ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ. ಕೆಳಗಿನ ಕೊಳಕ್ಕೆ ನೀರನ್ನು ತುಂಬಿಸುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದಾವೀದನ ಪಟ್ಟಣದ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ; ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದಾವೀದನ ಕೋಟೆಯ ಬಿರುಕುಗಳು ಬಹಳವೆಂಬುದನ್ನು ಗಮನಿಸಿದಿರಿ. ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದಾವೀದನ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ; ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9-11 ದಾವೀದ ನಗರದ ಕೋಟೆಗೋಡೆಗಳಲ್ಲಿ ಬಿರುಕುಗಳು ಉಂಟಾಗುವವು. ಆ ಬಿರುಕುಗಳನ್ನು ನೀವು ಸ್ಪಷ್ಟವಾಗಿ ಕಾಣಬಹುದು. ಅದರೊಳಗಿರುವ ಮನೆಗಳನ್ನು ಲೆಕ್ಕ ಮಾಡಬಹುದು. ಆ ಮನೆಗಳ ಕಲ್ಲುಗಳನ್ನು ತೆಗೆದು ಬಿರುಕು ಮುಚ್ಚಲಾಗುವದು. ಎರಡು ಸಾಲು ಕೋಟೆಗೋಡೆಗಳ ಮಧ್ಯದಲ್ಲಿ ಹಳೆಯ ಕಾಲುವೆಯ ಮೂಲಕ ನೀರನ್ನು ತರಿಸಿ ಆ ನೀರನ್ನು ಉಳಿತಾಯ ಮಾಡುವಿರಿ. ಇವೆಲ್ಲವನ್ನು ನೀವು ನಿಮ್ಮನ್ನು ಸಂರಕ್ಷಿಸಿಕೊಳ್ಳುವದಕ್ಕೋಸ್ಕರ ಮಾಡುವಿರಿ. ಆದರೆ ಇವೆಲ್ಲವನ್ನು ನಿರ್ಮಿಸಿದ ದೇವರ ಮೇಲೆ ನೀವು ನಂಬಿಕೆ ಇಡುವದಿಲ್ಲ. ಇದನ್ನು ಬಹಳ ಕಾಲದ ಹಿಂದೆ ನಿರ್ಮಿಸಿದ ದೇವರನ್ನು ನೀವು ನೋಡುವದಿಲ್ಲ. ಅಧ್ಯಾಯವನ್ನು ನೋಡಿ |