ಯೆಶಾಯ 23:1 - ಕನ್ನಡ ಸಮಕಾಲಿಕ ಅನುವಾದ1 ಟೈರಿನ ವಿಷಯವಾದ ಪ್ರವಾದನೆ: ತಾರ್ಷೀಷಿನ ಹಡಗುಗಳೇ, ಗೋಳಾಡಿರಿ, ಏಕೆಂದರೆ ಟೈರ್ ಹಾಳಾಗಿರುವುದರಿಂದ ನಿಮಗೆ ಮನೆಯಿಲ್ಲ ಮತ್ತು ಬಂದರವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಟೈರ್ ನಗರವನ್ನು ಕುರಿತ ದೈವೋಕ್ತಿ : “ಗೋಳಾಡಿರಿ ತಾರ್ಷಿಷಿನ ನಾವಿಕರೆಲ್ಲ, ಹಾಳಾಗಿವೆ ನಿಮ್ಮ ಬಂದರುಗಳೆಲ್ಲ; ಹಡಗುಗಳಿಗೆ ರೇವಿಲ್ಲ, ನೆಲೆಯಿಲ್ಲ, ಸೈಪ್ರಸ್ಸಿನಿಂದ ಬಂದ ನಾವಿಕರಿಂದ ಈ ಸುದ್ದಿ ನಿಮಗೆ ತಿಳಿಯುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ! [ನಿಮ್ಮ ಆಶ್ರಯವು] ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. (ಕಿತ್ತೀಮ್ ದೇಶೀಯರಿಂದ ಅವುಗಳಿಗೆ ತಿಳಿಯಿತು). ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತೂರಿನ ವಿಷಯವಾಗಿ ದುಃಖಕರವಾದ ಸಂದೇಶ: “ತಾರ್ಷೀಷಿನ ಹಡಗುಗಳೇ, ದುಃಖಿಸಿರಿ! ನಿಮ್ಮ ರೇವು ಕೆಡವಲ್ಪಟ್ಟಿದೆ.” ಕಿತ್ತಿಮಿನಿಂದ ಹೊರಟ ಹಡಗುಗಳಿಗೆ ಈ ವಾರ್ತೆಯು ತಲುಪಿತು. ಅಧ್ಯಾಯವನ್ನು ನೋಡಿ |