Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:11 - ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಅವರು ವ್ಯಾಪಾರದ ಪಟ್ಟಣವನ್ನು ಕಾನಾನಿನ ದುರ್ಗಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಅಪ್ಪಣೆಕೊಟ್ಟಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಸಮುದ್ರದ ಮೇಲೆ ತನ್ನ ಕೈಯನ್ನು ಚಾಚಿದ್ದಾನೆ. ಆತನು ತೂರಿಗೆ ವಿರುದ್ಧವಾಗಿ ಯುದ್ಧಮಾಡಲು ರಾಜ್ಯಗಳನ್ನು ಒಟ್ಟುಗೂಡಿಸುತ್ತಾನೆ. ಯೆಹೋವನು ಕಾನಾನಿಗೆ ತೂರಿನ ಆಶ್ರಯಸ್ಥಳಗಳನ್ನು ನಾಶಮಾಡಲು ಆಜ್ಞಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:11
30 ತಿಳಿವುಗಳ ಹೋಲಿಕೆ  

ಆಗ ಮೋಶೆಯು ಸಮುದ್ರದ ಮೇಲೆ ತನ್ನ ಬಲಗೈಯನ್ನು ಚಾಚಲಾಗಿ, ಯೆಹೋವ ದೇವರು ರಾತ್ರಿಯೆಲ್ಲಾ ಬಲವಾದ ಪೂರ್ವದಿಕ್ಕಿನ ಗಾಳಿಯಿಂದ ಸಮುದ್ರವನ್ನು ಹಿಂದಕ್ಕೆ ಹೋಗುವಂತೆ ಸಮುದ್ರವನ್ನು ಸರಿಸಿ, ಒಣ ನೆಲ ಕಾಣಿಸುವಂತೆ ಮಾಡಿದರು. ಆಗ ನೀರು ವಿಭಾಗವಾಯಿತು.


ಯೇಸು ಪಾರಿವಾಳ ಮಾರುವವರಿಗೆ, “ಇವುಗಳನ್ನು ತೆಗೆದುಕೊಂಡು ಹೋಗಿರಿ, ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯನ್ನಾಗಿ ಮಾಡಬೇಡಿರಿ,” ಎಂದರು.


ಯೇಸು ಅವರಿಗೆ ಬೋಧಿಸುತ್ತಾ, “ನನ್ನ ಮನೆಯು ಎಲ್ಲಾ ಜನಾಂಗಗಳಿಗೂ ‘ಪ್ರಾರ್ಥನೆಯ ಮನೆ’ ಎಂದು ಕರೆಯಿಸಿಕೊಳ್ಳುವುದೆಂದು ಬರೆದಿದೆಯಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ,” ಎಂದು ಹೇಳಿದರು.


ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಪ್ರತಿಯೊಂದು ಪಾತ್ರೆಯು ಸೇನಾಧೀಶ್ವರ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು. ಆ ದಿವಸದಲ್ಲಿ, ಕಾನಾನ್ಯನು ಸೇನಾಧೀಶ್ವರ ಯೆಹೋವ ದೇವರ ಆಲಯದಲ್ಲಿ ಇನ್ನು ಮೇಲೆ ಇರುವುದೇ ಇಲ್ಲ.


ಎಲ್ಲಾ ಜನಾಂಗಗಳನ್ನು ನಡುಗಿಸುವೆನು. ಎಲ್ಲಾ ಜನಾಂಗಗಳ ಇಷ್ಟ ವಸ್ತುಗಳು ಬಂದು ಒದಗಲು, ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ನಿನೆವೆಯೇ, ನಿನ್ನ ವಿಷಯವಾಗಿ ಯೆಹೋವ ದೇವರು ಆಜ್ಞಾಪಿಸುವುದೇನೆಂದರೆ: ಹೆಸರೆತ್ತಲು ನಿನಗೆ ಸಂತಾನವಿಲ್ಲದಂತೆ ಮಾಡುವೆನು. ನಿನ್ನ ದೇವರ ಮಂದಿರದಲ್ಲಿರುವ ಕೆತ್ತಿದ ವಿಗ್ರಹವನ್ನೂ, ಎರಕ ಬೊಂಬೆಯನ್ನೂ ನಾಶಮಾಡುವೆನು. ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.


ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು.


ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಸುಕುವದು, ಒಡಕು ಬಿದ್ದ ಕೋಟೆಯೊಳಗೆ ಶತ್ರುಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲುಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವುವು.


ಅದು ಹೇಗೆ ಸುಮ್ಮನಿರುವುದು? ಅಷ್ಕೆಲೋನಿಗೆ ವಿರೋಧವಾಗಿ ಮತ್ತು ಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ? ಅಲ್ಲಿ ಅದನ್ನು ನೇಮಿಸಿದ್ದಾನೆ.”


ಏಕೆಂದರೆ ನೀವು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳುದಿಬ್ಬವನ್ನಾಗಿಯೂ ವಿದೇಶಿಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀರಿ.


ಪ್ರವಾಹದಿಂದ ಶೀಹೋರಿನ ಧಾನ್ಯವೂ, ನೈಲ್ ನದಿಯ ಸುಗ್ಗಿಯೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.


ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.


ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರಿಗೂ ಅವರ ಮಹಿಮೆಗೂ, ಅವರ ಘನಕ್ಕೂ ಹೆದರಿ, ಬಂಡೆಗಳ ಸಂದುಗಳಿಗೂ, ಭೂಮಿಯ ಗವಿಗಳಿಗೂ ಜನರು ಸೇರಿಕೊಳ್ಳುವರು.


ನಾನು ಯಾವಾಗಲೂ ಆಶ್ರಯಿಸಿಕೊಳ್ಳುವ ಬಂಡೆಯಾಗಿರಿ. ನನ್ನನ್ನು ರಕ್ಷಿಸುವುದಕ್ಕೆ ಆಜ್ಞಾಪಿಸಿರಿ. ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ ಆಗಿದ್ದೀರಿ.


ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ. ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ.


ನಂತರ ಅವನು ಹೀಗೆಂದನು, “ಕಾನಾನನು ಶಾಪಗ್ರಸ್ತನಾಗಲಿ, ಅವನು ತನ್ನ ಸಹೋದರರಿಗೆ ದಾಸಾನುದಾಸನಾಗಿರಲಿ.”


ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರ ಕೋಪವೂ, ಅವರ ತೀಕ್ಷ್ಣರೋಷವೂ ಪ್ರಕಟವಾಗುವ ಆ ದಿನದಂದು, ಆಕಾಶಮಂಡಲ ನಡುಗುವುದು. ಭೂಮಂಡಲ ಅದರ ಸ್ಥಳದಿಂದ ಕದಲುವುದು.


ಇದೇ ಸಮಸ್ತ ಭೂಮಿಯ ವಿಷಯ ಆಲೋಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.


ನೈಲ್ ನದಿಯ ನೀರು ಬತ್ತಿಹೋಗುವುದು. ನದಿ ತೀರವೂ ಇಂಗಿ ಒಣಗಿಹೋಗುವುದು.


ತಾರ್ಷೀಷಿನ ಮಗಳೇ, ನೈಲ್ ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು. ಅಲ್ಲಿ ಇನ್ನು ನಿನ್ನನ್ನು ತಡೆಯುವವರು ಯಾರೂ ಇಲ್ಲ.


ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.


ಅವರು ಟೈರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ಧೂಳನ್ನು ಒರಸಿ ಅದನ್ನು ಬೋಳು ಬಂಡೆಯಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು