Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:13 - ಕನ್ನಡ ಸಮಕಾಲಿಕ ಅನುವಾದ

13 ಕಸ್ದೀಯರ ದೇಶವು! ಅಸ್ಸೀರಿಯದವರು ಅದನ್ನು ಕಾಡುಮೃಗಗಳಿಗೆ ಈಡು ಮಾಡುವ ತನಕ ಈ ಜನರು ಇರಲಿಲ್ಲ. ಗೋಪುರಗಳನ್ನು ಕಟ್ಟಿಸಿಕೊಂಡು ಅವರು ಅದರ ಅರಮನೆಗಳನ್ನು ಕಟ್ಟಿಸಿಕೊಂಡು ಅದನ್ನು ನಾಶಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು. ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಾಬಿಲೋನಿನ ನಾಡನ್ನು ನೋಡು. ಅದರ ಜನಾಂಗ ನಿರ್ನಾಮವಾಯಿತು. ಅಸ್ಸೀರಿಯದವರು ಆ ನಾಡನ್ನು ಕಾಡುಮೃಗಗಳಿಗೆ ಈಡುಮಾಡಿದರು. ಅಲ್ಲಿ ಬುರುಜುಗಳನ್ನು ಕಟ್ಟಿಕೊಂಡರು. ಇದರ ಕೋಟೆಗಳನ್ನಾದರೋ ಕೆಡವಿ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು; ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು; ಬುರುಜುಗಳನ್ನು ಕಟ್ಟಿಕೊಂಡು ಇದರ ಕೋಟೆಗಳನ್ನು ಕೆಡವಿ ಇದನ್ನು ನಾಶಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ತೂರಿನ ಜನರು ಹೀಗೆನ್ನುವರು: “ಬಾಬಿಲೋನಿನವರು ನಮಗೆ ಸಹಾಯಮಾಡುವರು.” ಆದರೆ ಕಸ್ದೀಯರ ದೇಶವನ್ನು ನೋಡಿ. ಬಾಬಿಲೋನ್ ಈಗ ದೇಶವಲ್ಲ. ಬಾಬಿಲೋನನ್ನು ಅಶ್ಶೂರವು ವಶಪಡಿಸಿಕೊಂಡು ಅದರ ಸುತ್ತಲೂ ಕಾವಲು ಬುರುಜುಗಳನ್ನು ಕಟ್ಟಿಸಿದೆ. ಅಲ್ಲಿದ್ದ ಸುಂದರ ಮನೆಗಳಿಂದ ಸೈನಿಕರು ಎಲ್ಲವನ್ನು ದೋಚಿರುತ್ತಾರೆ. ಅಶ್ಶೂರ ಬಾಬಿಲೋನನ್ನು ಕಾಡುಪ್ರಾಣಿಗಳ ವಾಸಸ್ಥಳವನ್ನಾಗಿ ಮಾಡಿದೆ. ಅವರು ಬಾಬಿಲೋನನ್ನು ಪಾಳುಬಿದ್ದ ಅವಶೇಷವನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:13
23 ತಿಳಿವುಗಳ ಹೋಲಿಕೆ  

“ಅದರಂತೆ ಅಬ್ರಹಾಮನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ಬಂದು ನೆಲೆಸಿದನು. ಅವನ ತಂದೆಯ ಮರಣದ ನಂತರ ನೀವು ಈಗ ವಾಸಿಸುತ್ತಿರುವ ಈ ನಾಡಿಗೆ ದೇವರು ಅವನನ್ನು ಬರಮಾಡಿದರು.


ನಾನು ಬಾಬಿಲೋನಿಯರನ್ನು ಎಬ್ಬಿಸುತ್ತೇನೆ. ಅವರು ಉಗ್ರ ಮತ್ತು ಸಾಹಸಿ ಜನರು. ತಮ್ಮದಲ್ಲದ ನಿವಾಸಗಳನ್ನು ವಶಮಾಡಿಕೊಳ್ಳುವುದಕ್ಕೆ ವಿಶಾಲವಾದ ದೇಶದಲ್ಲಿ ಹಾದುಹೋಗುವರು.


ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.


“ಮನುಷ್ಯಪುತ್ರನೇ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರನಿಂದ ಪ್ರತಿಫಲವೇನೂ ದೊರೆಯಲಿಲ್ಲ.


ರಾಜ್ಯಗಳ ಘನತೆಯೂ, ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬಿಲೋನನ್ನು ದೇವರು ಸೊದೋಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಕೆಡವಿಬಿಡುವನು.


ಅದರ ಅಭಿಪ್ರಾಯವೋ ಹಾಗಲ್ಲ. ಅದರ ಹೃದಯವು ಈ ಪ್ರಕಾರ ಆಲೋಚಿಸುವುದಿಲ್ಲ. ಜನಾಂಗಗಳನ್ನು ಕಡಿದುಬಿಡುವುದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವುದು ಅದರ ಹೃದಯದ ಉದ್ದೇಶವು.


“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.


ಅರಸನ ಮುಂದೆ ಮರುಭೂಮಿಯ ನಿವಾಸಿಗಳು ಎರಗಲಿ. ಅರಸನ ಶತ್ರುಗಳು ಧೂಳನ್ನು ನೆಕ್ಕಲಿ.


ಇವನು ಇನ್ನೂ ಮಾತನಾಡುತ್ತಿರಲು, ಇನ್ನೊಬ್ಬ ದೂತನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಒಂಟೆಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಆಳುಗಳನ್ನು ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.


ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.


ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗುವುದಕ್ಕಾಗಿ ಕಸ್ದೀಯರ ಊರ್ ಪಟ್ಟಣವನ್ನು ಬಿಟ್ಟು, ಹಾರಾನ್ ಎಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸವಾಗಿದ್ದನು.


ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಸ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆ ತೆರಹನಿಗಿಂತ ಮೊದಲು ಸತ್ತನು.


ಆದಕಾರಣ ಅದಕ್ಕೆ, ಬಾಬೆಲ್ ಎಂದು ಹೆಸರಾಯಿತು. ಏಕೆಂದರೆ ಅಲ್ಲಿ ಯೆಹೋವ ದೇವರು ಇಡೀ ಜಗತ್ತಿನ ಭಾಷೆಗಳನ್ನು ಗಲಿಬಿಲಿ ಮಾಡಿದರು. ಅಲ್ಲಿಂದ ಯೆಹೋವ ದೇವರು ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿಬಿಟ್ಟರು.


ಮೂರನೆಯ ನದಿಯ ಹೆಸರು ಟೈಗ್ರಿಸ್; ಅದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತಿತ್ತು. ನಾಲ್ಕನೆಯ ನದಿಯು ಯೂಫ್ರೇಟೀಸ್.


ಆದರೆ ಕಾಡುಮೃಗಗಳು ಅಲ್ಲಿ ಮಲಗುವುವು. ಅವರ ಮನೆಗಳು ನರಿಗಳಿಂದ ತುಂಬಿರುವುವು, ಅಲ್ಲಿ ಗೂಬೆಗಳು ವಾಸಿಸುವುವು ಮತ್ತು ಕಾಡುಮೇಕೆಗಳು ಅಲ್ಲಿ ಕುಣಿದಾಡುವುವು.


ಅವುಗಳೆಲ್ಲ ಬೆಟ್ಟದ ಹದ್ದುಗಳಿಗೂ, ಭೂಮಿಯ ಮೃಗಗಳಿಗೂ ಆಹಾರವಾಗುವುವು. ಅದು ಪಕ್ಷಿಗಳಿಗೆ ಬೇಸಿಗೆ ಕಾಲದಲ್ಲಿಯೂ, ಕಾಡುಮೃಗಗಳಿಗೆ ಚಳಿಗಾಲದಲ್ಲಿಯೂ ಆಹಾರವಾಗುವುದು.


ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿಮಗೋಸ್ಕರ ಬಾಬಿಲೋನಿಗೆ ಕಳುಹಿಸಿ, ಅವರ ಘನವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.


ಬಾಬಿಲೋನಿನವರು ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಎಲ್ಲಾ ಅಸ್ಸೀರಿಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿ ಹೊಂದಿದವರೂ ಎಲ್ಲರೂ ಕುದುರೆಗಳ ಮೇಲೆ ಬೀಳುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು