Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:7 - ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಉಲ್ಲಾಸದ ಪಟ್ಟಣವೂ, ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವುದಕ್ಕೆ ತೆಗೆದುಕೊಂಡು ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ; ಅವರ ಕಾಲುಗಳು ಅವರನ್ನು ದೂರ ದೇಶದಲ್ಲಿ ವಾಸಿಸುವುದಕ್ಕೆ ಕರೆದುಕೊಂಡು ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದು ತಾನೋ, ನಿಮ್ಮ ವಸಾಹತುಗಳನ್ನು ನಿರ್ಮಿಸಿಕೊಳ್ಳಲು ಜನರನ್ನು ಕಳುಹಿಸಿದ ನಗರ ! ಇದರ ವರ್ತಕರು ಪ್ರಭುಗಳು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ; ಅದರ ಜನರು ಮುಂದೆ ನಡೆದು ಅತಿ ದೂರದಲ್ಲಿಯೂ ನಿವಾಸಮಾಡಿಕೊಂಡಿದ್ದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹಿಂದಿನ ಕಾಲದಲ್ಲಿ ನೀವು ತೂರ್ ನಗರದಲ್ಲಿ ಉಲ್ಲಾಸಿಸಿದಿರಿ. ಪ್ರಾರಂಭದಿಂದಲೇ ಆ ನಗರವು ಅಭಿವೃದ್ಧಿಹೊಂದುತ್ತಿತ್ತು. ಆ ನಗರದ ಜನರು ಬಹುದೂರ ಪ್ರಯಾಣಮಾಡಿ ನೆಲೆಸಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:7
5 ತಿಳಿವುಗಳ ಹೋಲಿಕೆ  

ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಹತರಾದವರು ಖಡ್ಗದಿಂದ ಹತರಾದವರಲ್ಲ; ಯುದ್ಧದಲ್ಲಿ ಸತ್ತವರೂ ಅಲ್ಲ.


ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ.


ಕುದುರೆಗಳ ಮೇಲೆ ಸವಾರಿ ಮಾಡುವ ಸೇವಕರನ್ನೂ ಅಧಿಕಾರಿಗಳು ಸೇವಕರ ಹಾಗೆ ನಡೆದುಕೊಂಡು ಹೋಗುವುದನ್ನೂ ನಾನು ನೋಡಿದ್ದೇನೆ.


ಅಲ್ಲಿಂದ ರಾಮಾ, ಟೈರ್ ಎಂಬ ಕೋಟೆಪಟ್ಟಣದವರೆಗೂ ಹೋಗುತ್ತದೆ. ಅಲ್ಲಿಂದ ಹೋಸಾ ಕಡೆ ಹೊರಟು ಮೆಡಿಟೆರಿಯನ್ ಸಮುದ್ರದ ಬಳಿ ಅಕ್ಜೀಬ್ ಮೇರೆಯ ಅಂಚಿಗೆ ಮುಗಿಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು