ಯೆಶಾಯ 24:2 - ಕನ್ನಡ ಸಮಕಾಲಿಕ ಅನುವಾದ2 ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೆ; ದಾಸನಿಗೆ ಹೇಗೋ ಹಾಗೆಯೇ ಯಜಮಾನನಿಗೆ; ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ಸಾಲ ಪಡೆಯುವವನಿಗೆ; ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆಯೇ ಬಡ್ಡಿ ತರುವವನಿಗೆ ಆಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ, ಕೊಳ್ಳುವವನು, ಮಾರುವವನು, ಸಾಲ ಕೊಡುವವನು ಸಾಲ ಪಡೆಯುವವನು, ಬಡ್ಡಿ ಪಡೆಯುವವನು ಬಡ್ಡಿ ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರಜೆಗೆ ಹೇಗೋ ಹಾಗೆ ಯಾಜಕನಿಗೆ, ದಾಸನಿಗೆ ಹೇಗೋ ಹಾಗೆ ದಣಿಗೆ , ದಾಸಿಗೆ ಹೇಗೋ ಹಾಗೆ ಯಜಮಾನಿಗೆ, ಕೊಳ್ಳುವವನಿಗೆ ಹೇಗೋ ಹಾಗೆ ಕೊಡುವವನಿಗೆ, ಸಾಲ ಕೊಡುವವನಿಗೆ ಹೇಗೋ ಹಾಗೆ ಸಾಲ ಪಡೆಯುವವನಿಗೆ, ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆ ಬಡ್ಡಿ ತೆರುವವನಿಗೆ, ಬರುವುದು ಒಂದೇ ಗತಿ ಇವರೆಲ್ಲರಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪ್ರಜೆ ಯಾಜಕ, ದಾಸ ದಣಿ, ತೊತ್ತು ಯಜಮಾನಿ, ಕೊಳ್ಳುವವನು ಮಾರುವವನು, ಸಾಲಕೊಡುವವನು ತರುವವನು, ಬಡ್ಡಿ ತೆಗೆಯುವವನು ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ಸಮಯದಲ್ಲಿ ಸಾಧಾರಣ ಜನರಿಗೂ ಯಾಜಕವರ್ಗದವರಿಗೂ ವ್ಯತ್ಯಾಸವಿರದು. ಸೇವಕರಿಗೂ ಅವರ ಯಜಮಾನರಿಗೂ ವ್ಯತ್ಯಾಸವಿರದು. ದಾಸಿಯರಿಗೂ ಅವರ ಯಜಮಾನಿಯರಿಗೂ ವ್ಯತ್ಯಾಸವಿರದು. ಮಾರುವವರಿಗೂ ಕೊಳ್ಳುವವರಿಗೂ ವ್ಯತ್ಯಾಸವಿರದು. ಸಾಲಕೊಡುವವರಿಗೂ ಸಾಲ ತೆಗೆದುಕೊಳ್ಳುವವರಿಗೂ ವ್ಯತ್ಯಾಸವಿರದು. ಬಡ್ಡಿಹಾಕುವವನಿಗೂ ಬಡ್ಡಿಕೊಡುವವನಿಗೂ ವ್ಯತ್ಯಾಸವಿರದು. ಅಧ್ಯಾಯವನ್ನು ನೋಡಿ |