Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:6 - ಕನ್ನಡ ಸಮಕಾಲಿಕ ಅನುವಾದ

6 ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ. ಅದರಲ್ಲಿ ವಾಸವಾಗಿರುವವರು ದಂಡನೆಗೆ ಒಳಗಾಗಿದ್ದಾರೆ. ಆದ್ದರಿಂದ ಭೂನಿವಾಸಿಗಳು ಸುಟ್ಟು ಹೋಗಿ, ಕೆಲವರು ಮಾತ್ರ ಉಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ; ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ದೇಶದಲ್ಲಿ ವಾಸಿಸುವ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಆದ್ದರಿಂದ ದೇವರು ಈ ದೇಶವನ್ನು ನಾಶಮಾಡಲು ತೀರ್ಮಾನಿಸಿದನು. ಜನರು ಶಿಕ್ಷಿಸಲ್ಪಡುವರು. ಕೆಲವೇ ಮಂದಿ ಮಾತ್ರ ಉಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:6
28 ತಿಳಿವುಗಳ ಹೋಲಿಕೆ  

“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಜೀವಕ್ಕೆ ಒಯ್ಯುವ ಬಾಗಿಲು ಇಕ್ಕಟ್ಟಾದದ್ದೂ ದಾರಿಯು ಕಷ್ಟಕರವಾದದ್ದೂ ಆಗಿದೆ; ಅದನ್ನು ಕಂಡು ಹಿಡಿಯುವವರು ಕೆಲವರು ಮಾತ್ರ.


ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.


ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಯರ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಯರ ಕಡೆಗೂ ತಿರುಗಿಸುವನು.”


ಕಾಡುಮೃಗಗಳು ನಿಮ್ಮ ಮೇಲೆ ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದವರನ್ನಾಗಿ ಮಾಡಿ, ನಿಮ್ಮ ದನಗಳನ್ನು ತಿಂದುಬಿಡುವವು. ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವುವು. ನಿಮ್ಮ ಮಾರ್ಗಗಳು ಹಾಳಾಗಿ ಹೋಗುವುವು.


ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ಇದರಿಂದ ಶಾಪವು ನಿಮಗಾಯಿತು, ಏಕೆಂದರೆ ನೀವು, ಈ ಸಮಸ್ತ ಜನಾಂಗವೇ ನನ್ನಲ್ಲಿ ಕಳ್ಳತನ ಮಾಡುತ್ತಿದ್ದಿರಿ.


ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ,” ನೀವು ಕಿವಿಗೊಡದೆ ನನ್ನ ಹೆಸರಿಗೆ ಮಹಿಮೆಯನ್ನು ಸಲ್ಲಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳದೆ ಹೋದರೆ, “ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು. ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು. ಹೌದು, ಅವುಗಳನ್ನು ಆಗಲೇ ಶಪಿಸಿದ್ದಾಯಿತು, ಏಕೆಂದರೆ ನೀವು ನನ್ನನ್ನು ಘನಪಡಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಲಿಲ್ಲ.


ನೀನು ಅವುಗಳೊಳಗಿಂದ ಕೆಲವು ಕೂದಲನ್ನು ಲೆಕ್ಕದಲ್ಲಿ ತೆಗೆದು, ನಿನ್ನ ಸೆರಗುಗಳಲ್ಲಿ ಕಟ್ಟು,” ಎಂದನು.


ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕೆಲಸ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವುವು.”


ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೇ ಹೋದದ್ದರಿಂದ, ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯಾತರಾಗಿರುವ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.


ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.


ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.


ಏಕೆಂದರೆ ಅವರು ಸೇನಾಧೀಶ್ವರ ಯೆಹೋವ ದೇವರ ನಿಯಮವನ್ನು ನಿರಾಕರಿಸಿದ್ದರಿಂದಲೂ, ಇಸ್ರಾಯೇಲಿನ ಪರಿಶುದ್ಧರ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿ ಬಿಡುವ ಹಾಗೆಯೂ, ಜ್ವಾಲೆಯು ಒಣಹುಲ್ಲನ್ನು ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆಯುವಂತೆಯೂ, ಚಿಗುರು ಅದರ ಧೂಳಿನಂತೆಯೂ ಏರಿ ಹೋಗುವುವು.


ಸೇನಾಧೀಶ್ವರ ಯೆಹೋವ ದೇವರ ಕೋಪದಿಂದ ದೇಶವು ಒಣಗಿಹೋಗಿದೆ, ಜನರು ಉರಿಯುವ ಸೌದೆಯಂತಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.


ನನ್ನ ಖಡ್ಗವು ಪರಲೋಕದಲ್ಲಿ ರೋಷಪಾನ ಮಾಡುವುದು. ಇಗೋ, ಅದು ಎದೋಮಿನ ಮತ್ತು ನಾನು ಶಪಿಸಿದ ಜನರ ಮೇಲೆಯೂ, ನ್ಯಾಯತೀರಿಸುವುದಕ್ಕಾಗಿ ಕೆಳಗೆ ಇಳಿದು ಬರುವುದು.


ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ, ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು, ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು.”


ಆಗ ಯೆಹೂದದ ಅರಸನಾದ ಯೆಹೋಯಾಖೀನನೂ, ಅವನ ತಾಯಿಯೂ, ಅವನ ಸೇವಕರೂ, ಅವನ ಪ್ರಧಾನರೂ, ಅವನ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಶರಣಾದರು. ಬಾಬಿಲೋನಿನ ಅರಸನು ತನ್ನ ಆಳಿಕೆಯ ಎಂಟನೆಯ ವರ್ಷದಲ್ಲಿ ಯೆಹೋಯಾಕೀನನನ್ನು ಸೆರೆಹಿಡಿದನು.


ಆದರೆ ಕಾವಲಿನ ಅಧಿಪತಿಯು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯ ಗತಿಯನ್ನು ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು