Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:9 - ಕನ್ನಡ ಸಮಕಾಲಿಕ ಅನುವಾದ

9 ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಮದ್ಯವು ಕುಡಿಯುವವರಿಗೆ ಕಹಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇನ್ನಿಲ್ಲ ಮದ್ಯಪಾನ ಗೀತಾಗಾನ, ಕಹಿಪಾನವಾಯಿತು ಕುಡುಕನಿಗೆ ಸುರಾಪಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಮದ್ಯವು ಕುಡಿಯುವವರಿಗೆ ಕಹಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನರು ದ್ರಾಕ್ಷಾರಸ ಕುಡಿಯುತ್ತಿರುವಾಗ ಹಾಡು ಹಾಡುವುದಿಲ್ಲ. ಅವರು ಕುಡಿಯುವ ಮದ್ಯವು ಅವರಿಗೆ ಕಹಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:9
11 ತಿಳಿವುಗಳ ಹೋಲಿಕೆ  

ಅಯ್ಯೋ, ದ್ರಾಕ್ಷಾರಸ ಕುಡಿಯುವುದರಲ್ಲಿ ಶೂರರೂ, ಮದ್ಯ ಸಾಹಸಿಗಳೂ,


ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ನಿಮ್ಮ ಹಬ್ಬಗಳನ್ನು ದುಃಖಕ್ಕೂ, ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು. ಎಲ್ಲರೂ ಸೊಂಟಗಳಿಗೆ ಗೋಣಿತಟ್ಟನ್ನು ಕಟ್ಟಿಕೊಂಡು, ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು. ಒಬ್ಬನೇ ಮಗನಿಗಾಗಿ ಗೋಳಾಡುವ ಸಮಯದಂತೆ ಮಾಡುವೆನು. ಅದರ ಅಂತ್ಯವು ಕಹಿಯಾದ ದಿನದಂತಿರುವುದು.


“ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!”


ಕೇಡಿಗೆ ಮೇಲೆಂದೂ, ಮೇಲಿಗೆ ಕೇಡೆಂದೂ ಕರೆದು, ಕತ್ತಲೆಯನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಯೆಂದೂ; ಕಹಿಯನ್ನು ಸಿಹಿ ಎಂದೂ, ಸಿಹಿಯನ್ನು ಕಹಿ ಎಂದೂ ಎಣಿಸುವವರಿಗೆ ಕಷ್ಟ!


ಊರುಬಾಗಿಲಲ್ಲಿ ಕೂತುಕೊಳ್ಳುವವರು ಪರಿಹಾಸ್ಯ ಮಾಡುತ್ತಾರೆ. ನಾನು ಮದ್ಯಪಾನಿಗಳಿಗೆ ಗಾಯನ ವಿಷಯವಾಗಿದ್ದೇನೆ.


ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.


ಆಗ ನಿನ್ನ ಹಾಡುಗಳ ಶಬ್ದವನ್ನು ನಿಲ್ಲಿಸುವೆನು. ನಿನ್ನ ಕಿನ್ನರಿಗಳ ಧ್ವನಿ ಇನ್ನು ಕೇಳಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು