Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 25:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನೀವೇ ನನ್ನ ದೇವರು. ನೀವು ಸತ್ಯ ಪ್ರಾಮಾಣಿಕತೆಗಳನ್ನು ಆಲೋಚಿಸಿ, ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಕಾರ್ಯಗಳನ್ನು ನಡೆಸಿದ ಕಾರಣ ನಿಮ್ಮನ್ನು ಉನ್ನತಪಡಿಸಿ, ನಿಮ್ಮ ನಾಮವನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯಪ್ರಾಮಾಣಿಕತೆಗಳನ್ನು ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನೀನೇ ನನ್ನ ದೇವರು. ನಿನ್ನನ್ನು ಗೌರವಿಸಿ ನಿನ್ನ ನಾಮವನ್ನು ಸ್ತುತಿಸುವೆನು. ನೀನು ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ಬಹಳ ಕಾಲದ ಹಿಂದೆ ನೀನು ಹೇಳಿರುವ ವಿಷಯಗಳು ಸತ್ಯವೇ ಸರಿ. ನೀನು ಮುಂತಿಳಿಸಿದಂತೆಯೇ ಎಲ್ಲವೂ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 25:1
41 ತಿಳಿವುಗಳ ಹೋಲಿಕೆ  

“ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ; ಅವರು ನನ್ನ ರಕ್ಷಣೆಯಾದರು; ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು; ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು.


ನೀವು ನನ್ನ ದೇವರಾಗಿದ್ದೀರಿ, ನಿಮಗೆ ಉಪಕಾರ ಸಲ್ಲಿಸುವೆನು; ನೀವು ನನ್ನ ದೇವರು; ನಿಮ್ಮನ್ನು ನಾನು ಉನ್ನತಪಡಿಸುವೆನು.


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಏಕೆಂದರೆ ಅವರು ಅದ್ಭುತಗಳನ್ನು ಮಾಡಿದ್ದಾರೆ; ಅವರ ಬಲಗೈಯೂ, ಅವರ ಪರಿಶುದ್ಧ ಭುಜವು ಅವರಿಗೆ ಜಯವನ್ನು ತಂದಿವೆ.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಈ ವಿವೇಕವು ಸಹ ಅತಿಶಯ ಆಲೋಚನಾಪರರೂ, ಕಾರ್ಯಸಾಧಕ ಜ್ಞಾನ ಶ್ರೇಷ್ಠರೂ ಆಗಿರುವ ಸೇನಾಧೀಶ್ವರ ಯೆಹೋವ ದೇವರಿಂದಲೇ ಹೊರಡುತ್ತದೆ.


ನನ್ನ ದೇವರಾದ ಯೆಹೋವ ದೇವರೇ, ನೀವು ಮಾಡಿದ ನಿಮ್ಮ ಅದ್ಭುತಕಾರ್ಯಗಳು ಎಷ್ಟೋ! ನಮ್ಮ ಕಡೆ ನಿಮಗಿರುವ ಯೋಜನೆಗಳೂ ಬಹಳ, ನಿಮಗೆ ಸರಿಸಾಟಿ ಯಾರೂ ಇಲ್ಲ. ನಿಮ್ಮ ಕೃತ್ಯಗಳನ್ನು ನಾನು ತಿಳಿಸಿ ಹೇಳಬೇಕಾದರೆ, ಅವು ಎಣಿಸಲು ಅಸಾಧ್ಯ.


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.


ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.


“ಆಮೆನ್! ಸ್ತೋತ್ರ, ಮಹಿಮೆ, ಜ್ಞಾನ, ಕೃತಜ್ಞತೆ, ಗೌರವ, ಶಕ್ತಿ, ಬಲ ನಮ್ಮ ದೇವರಿಗೆ ಯುಗಯುಗಾಂತರಕ್ಕೂ ಉಂಟಾಗಲಿ. ಆಮೆನ್!” ಎಂದು ಹೇಳುತ್ತಿದ್ದರು.


ಯೆಹೋವ ದೇವರೇ, ನಮ್ಮ ದೇವರೇ, ನಿಮ್ಮ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿಮ್ಮ ನಾಮವನ್ನು ಮಾತ್ರವೇ ನಾವು ಗೌರವಿಸುವೆವು.


ನಾನು ಬದುಕುವವರೆಗೂ ಯೆಹೋವ ದೇವರನ್ನು ಸ್ತುತಿಸುವೆನು; ನಾನು ಇರುವವರೆಗೂ ನನ್ನ ದೇವರನ್ನು ಸ್ತುತಿಸುವೆನು.


ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ಅವರ ಪಾದಪೀಠದಲ್ಲಿ ಆರಾಧಿಸಿರಿ. ಏಕೆಂದರೆ ಅವರು ಪರಿಶುದ್ಧರಾಗಿದ್ದಾರೆ.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು. ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.


ಅರಸರಾಗಿರುವ ನನ್ನ ದೇವರೇ, ನಿಮ್ಮನ್ನು ಘನಪಡಿಸುವೆನು; ನಿಮ್ಮ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.


ದೇವರು ತಮ್ಮ ಅದ್ಭುತಗಳ ಜ್ಞಾಪಕವನ್ನು ಉಳಿದಿರುವಂತೆ ಮಾಡಿದ್ದಾರೆ; ಯೆಹೋವ ದೇವರು ಕೃಪೆಯೂ, ಅನುಕಂಪವೂ ಉಳ್ಳವರು.


ಯೆಹೋವ ದೇವರ ಮಹಾ ಪ್ರೀತಿಯನ್ನು ಯುಗಯುಗಕ್ಕೂ ಹಾಡುವೆನು. ತಲತಲಾಂತರಕ್ಕೂ ನಿಮ್ಮ ನಂಬಿಗಸ್ತಿಕೆಯನ್ನು ನನ್ನ ಬಾಯಿ ತಿಳಿಯಪಡಿಸುವುದು.


ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?


ನೀತಿಯೇ ಅವರಿಗೆ ನಡುಕಟ್ಟು, ನಂಬಿಗಸ್ತಿಕೆಯೇ ಅವರ ಸೊಂಟದ ಪಟ್ಟಿ.


ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?


ಹೌದು, ಯೆಹೋವ ದೇವರೇ, ನಿಮ್ಮ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಾವು ನಿಮಗೋಸ್ಕರ ಕಾದುಕೊಂಡಿದ್ದೇವೆ, ನಿಮ್ಮ ನಾಮಸ್ಮರಣೆಯೇ ನಮ್ಮ ಹೃದಯದ ಬಯಕೆ.


ನನ್ನ ಮಾರ್ಗವು ಯೆಹೋವ ದೇವರಿಗೆ ಮರೆಯಾಗಿದೆ. ನನ್ನ ನ್ಯಾಯವು ನನ್ನ ದೇವರಿಂದ ದಾಟಿಹೋಯಿತಲ್ಲಾ! ಎಂದು ಯಾಕೋಬೇ ಏಕೆ ಹೇಳುತ್ತೀ? ಇಸ್ರಾಯೇಲೇ ಏಕೆ ಮಾತನಾಡುತ್ತೀ?


ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ. ನನ್ನ ಶಕ್ತಿಯೆಲ್ಲ ಶೂನ್ಯವಾಯಿತು, ನನ್ನ ಸಾಮರ್ಥ್ಯವೆಲ್ಲ ವ್ಯರ್ಥವಾಯಿತು,” ಎಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಯೆಹೋವ ದೇವರ ಬಳಿಯಲ್ಲಿಯೂ, ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.


ಈಗ ಯೆಹೋವ ದೇವರು ಹೀಗೆ ಹೇಳುತ್ತಾರೆ, ಯಾಕೋಬ್ಯರನ್ನು ತನ್ನ ಬಳಿಗೆ ಕರೆತರುವಂತೆಯೂ, ಇಸ್ರಾಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳುವಂತೆಯೂ ದೇವರು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಯೆಹೋವ ದೇವರ ದೃಷ್ಟಿಯಲ್ಲಿ ಮಾನ್ಯನಾಗಿರುವೆನು. ನನ್ನ ದೇವರೇ ನನಗೆ ಬಲವು.


ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು, ನಿಮ್ಮನ್ನು ಅದ್ಭುತವಾಗಿ ನಡೆಸಿದ ನಿಮ್ಮ ದೇವರಾದ ಯೆಹೋವ ದೇವರ ಹೆಸರನ್ನು ಸ್ತುತಿಸುವಿರಿ. ನನ್ನ ಜನರು ಎಂದೆಂದಿಗೂ ನಾಚಿಕೆಪಡರು.


ನನ್ನ ಸಮಯವು ನಿಮ್ಮ ಕೈಯಲ್ಲಿ ಇವೆ; ನನ್ನ ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸಿರಿ.


ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.


“ನಿಯಮಿತ ಸಮಯವನ್ನು ಆಯ್ದುಕೊಳ್ಳುವೆನು. ನ್ಯಾಯಕ್ಕೆ ಸರಿಯಾಗಿ ನ್ಯಾಯತೀರಿಸುವೆನು,


ಪೂರ್ವದಿಂದ ಒಂದು ಕ್ರೂರವಾದ ಪಕ್ಷಿಯೂ, ದೂರದೇಶದಿಂದ ನನ್ನ ಆಜ್ಞೆಯನ್ನು ನಡೆಸುವ ಮನುಷ್ಯನೂ ಬರಲಿ, ಎಂದು ಕರೆದಿದ್ದೇನೆ. ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು