10 ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.
ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”
ಮೋವಾಬಿನ ಸ್ತೋತ್ರ ಇನ್ನು ಮೇಲೆ ಇರುವುದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ರಾಷ್ಟ್ರವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ; ಮದ್ಮೆನೇ, ನೀನು ಸಹ ಸುಮ್ಮನಾಗುವೆ; ಖಡ್ಗವು ನಿನ್ನನ್ನು ಹಿಂದಟ್ಟುವುದು.
ಸೇನಾಧೀಶ್ವರ ಯೆಹೋವ ದೇವರು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ ಕೊಬ್ಬಿದ ಔತಣವನ್ನೂ, ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸವನ್ನೂ ಸಿದ್ಧಮಾಡುವರು.
ಚೀಯೋನ್ ಪುತ್ರಿಯೇ, ಎದ್ದು ತುಳಿ. ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು.
ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ.
ಯೆಹೋವ ದೇವರು ನನಗೆ ಹೀಗೆ ಹೇಳಿದರು, “ನಾನು ನನ್ನ ವಿಶ್ರಾಂತಿಯನ್ನು ತೆಗೆದುಕೊಳ್ಳುವೆನು. ಬಿಸಿಹಗಲಿನ ಸೂರ್ಯನಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದಂತೆಯೂ ನಾನು ನನ್ನ ನಿವಾಸಸ್ಥಾನದಲ್ಲಿ ಸುಮ್ಮನೆ ನೋಡುತ್ತಿರುವೆನು.”
ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಟಿಯರ ಇಳಿಜಾರು ಪ್ರದೇಶದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆ ಮಾಡುವರು, ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ದಾಳಿಮಾಡುವರು ಮತ್ತು ಅಮ್ಮೋನಿಯರು ಅವರಿಗೆ ಅಧೀನರಾಗುವರು.
ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.
ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.
“ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.
ಆದರೆ ಈಗ ಯೆಹೋವ ದೇವರು ಮಾತನಾಡಿ, “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರುಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ದೊಡ್ಡ ಜನಸಂಖ್ಯೆಯಲ್ಲಿ ಅಳಿದುಉಳಿಯುವವರು ಬಲಹೀನರಾದ ಕೆಲವು ಜನರಾಗಿರುವರು,” ಎಂದು ಹೇಳಿದ್ದಾರೆ.
ಮೋವಾಬನ್ನು ಕುರಿತದ್ದು: ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೆಬೋ ಊರಿನವರಿಗೆ ಕಷ್ಟ! ಆ ಊರು ಸೂರೆಯಾಯಿತು; ಕಿರ್ಯಾತಯಿಮು ಶತ್ರುವಿನ ಕೈವಶವಾಗಿ ಅವಮಾನಕ್ಕೆ ಗುರಿಯಾಗಿದೆ; ಬಲವಾದ ಕೋಟೆಯು ಸಹ ಚದರಿ ನಾಚಿಕೆಗೆ ಈಡಾಗಿದೆ.