ಯೆಶಾಯ 26:1 - ಕನ್ನಡ ಸಮಕಾಲಿಕ ಅನುವಾದ1 ಆ ದಿವಸದಲ್ಲಿ ಯೆಹೂದ ದೇಶದಲ್ಲಿ ಈ ಹಾಡನ್ನು ಹಾಡುವರು: ನಮಗೆ ಬಲವಾದ ಪಟ್ಟಣವಿದೆ, ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ದೇವರು ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು : ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಗೀತವನ್ನು ಹಾಡುವರು - ನಮಗೆ ಬಲವಾದ ಪಟ್ಟಣವಿದೆ. [ಯೆಹೋವನು ತನ್ನ] ರಕ್ಷಣೆಯನ್ನು ಕೋಟೆಯನ್ನಾಗಿಯೂ ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಸಮಯದಲ್ಲಿ ಜನರು ಈ ಹಾಡನ್ನು ಯೆಹೂದದಲ್ಲಿ ಹಾಡುವರು: ಯೆಹೋವನು ನಮಗೆ ರಕ್ಷಣೆಯನ್ನು ಕೊಡುತ್ತಾನೆ. ನಮಗೆ ಬಲವಾದ ಪಟ್ಟಣವಿದೆ. ಅದಕ್ಕೆ ಬಲವಾದ ಗೋಡೆಗಳೂ ಕೋಟೆಗಳೂ ಇವೆ. ಅಧ್ಯಾಯವನ್ನು ನೋಡಿ |
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.