ಯೆಶಾಯ 26:14 - ಕನ್ನಡ ಸಮಕಾಲಿಕ ಅನುವಾದ14 ಈಗ ಅವರು ಸತ್ತಿದ್ದಾರೆ, ಅವರು ಬದುಕುವುದಿಲ್ಲ. ತೀರಿಹೋದ ಆ ಆತ್ಮಗಳು ಎದ್ದು ಬರುವುದಿಲ್ಲ. ನೀವು ಅವರನ್ನು ದಂಡಿಸಿ ಅಳಿಸಿಬಿಟ್ಟಿದ್ದೀರಿ. ಅವರ ನೆನಪೇ ಉಳಿಯದ ಹಾಗೆ ಮಾಡಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮಡಿದುಹೋದರು ಆ ಒಡೆಯರೆಲ್ಲ ಮರಳಿ ಅವರ ಪ್ರೇತಗಳು ಎದ್ದುಬರುವಂತಿಲ್ಲ. ನೀನವರನು ಬಡಿದು ನಸುಕಿಹಾಕಿರುವೆ ಅವರ ನೆನಪನೆ ಅಳಿಸಿಹಾಕಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀನು ಆ ಒಡೆಯರ ಮೇಲೆ ಕೈಮಾಡಿ ನಿರ್ಮೂಲಪಡಿಸಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದೀ; ಸತ್ತವರು ಪುನಃ ಬದುಕುವದಿಲ್ಲ, ಪ್ರೇತಗಳು ಎದ್ದು ಬರುವದಿಲ್ಲವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇತರ ದೇವರುಗಳಿಗೆ ಜೀವವಿಲ್ಲ. ಪ್ರೇತಗಳು ಸತ್ತವರೊಳಗಿಂದ ಏಳುವದಿಲ್ಲ. ನೀನು ಅವುಗಳನ್ನು ನಾಶಮಾಡಲು ತೀರ್ಮಾನಿಸಿದೆ. ಅದರ ಬಗ್ಗೆ ನಮಗೆ ನೆನಪು ಹುಟ್ಟಿಸುವ ಎಲ್ಲಾ ವಿಚಾರಗಳನ್ನು ನೀನು ನಾಶಮಾಡಿದೆ. ಅಧ್ಯಾಯವನ್ನು ನೋಡಿ |