Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:20 - ಕನ್ನಡ ಸಮಕಾಲಿಕ ಅನುವಾದ

20 ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ, ಬಾಗಿಲನ್ನು ಮುಚ್ಚಿಕೊಳ್ಳಿರಿ. ಸ್ವಲ್ಪ ಹೊತ್ತು ರೋಷವು ಹಾದುಹೋಗುವ ತನಕ ಅಡಗಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಿಲು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:20
34 ತಿಳಿವುಗಳ ಹೋಲಿಕೆ  

ಅವರ ಕೋಪವು ಕ್ಷಣಮಾತ್ರವೇ; ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ; ರಾತ್ರಿಯಲ್ಲಿ ದುಃಖ ಬಂದಿದ್ದರೂ; ಬೆಳಿಗ್ಗೆ ಆನಂದವು ಬರುವುದು.


ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು ತಮ್ಮ ಗುಡಾರದಲ್ಲಿ ಬಚ್ಚಿಡುವರು. ತಮ್ಮ ಪರಿಶುದ್ಧ ಗುಡಾರದಲ್ಲಿ ನನ್ನನ್ನು ಮರೆಮಾಡುವರು. ಎತ್ತರವಾದ ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವರು.


ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು.


ತಮ್ಮ ರೆಕ್ಕೆಗಳಿಂದ ನಿಮ್ಮನ್ನು ಹೊದಿಸುವರು. ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿರಿ. ದೇವರ ಸತ್ಯತೆಯು ನಿಮ್ಮ ಖೇಡ್ಯವೂ ಕೋಟೆಯೂ ಆಗಿರುವುದು.


ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.


ನಿಮ್ಮ ಕಣ್ಣುಗುಡ್ಡೆಯ ಹಾಗೆ ನನ್ನನ್ನು ಕಾಪಾಡಿರಿ, ನಿಮ್ಮ ರೆಕ್ಕೆಗಳ ನೆರಳಿನಲ್ಲಿ ನನ್ನನ್ನು ಮರೆಮಾಡಿರಿ.


ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.


ನನ್ನ ಕೋಪವು ಅವರ ದಂಡನೆಗಾಗುವುದು; ಆದ್ದರಿಂದ ಇನ್ನು ಸ್ವಲ್ಪಕಾಲದಲ್ಲಿ ಕೋಪವು ತೀರಿಹೋಗುವುದು.


ನೀವು ನನಗೆ ಮರೆಮಾಡುವ ಸ್ಥಳವಾಗಿರುವಿರಿ; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀರಿ; ವಿಮೋಚನಾ ಧ್ವನಿಗಳಿಂದ ನೀವು ನನ್ನನ್ನು ಸುತ್ತುವರಿಯುತ್ತೀರಿ.


ನನ್ನ ಜನರೇ, ಕೇಳಿರಿ. ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ. ಏಕೆಂದರೆ ನಿಯಮವು ನನ್ನಿಂದ ಹೊರಡುವುದು ಮತ್ತು ನನ್ನ ನ್ಯಾಯವನ್ನು ಜನಾಂಗಕ್ಕೆ ಬೆಳಕನ್ನಾಗಿ ಮಾಡುವೆನು.


ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.


ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ನೀವು ಅವರನ್ನು ನಿಮ್ಮ ಸಾನಿಧ್ಯದಲ್ಲಿಯೇ ಮರೆಮಾಡುತ್ತೀರಿ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ನಿಮ್ಮ ನಿವಾಸದಲ್ಲಿ ಅಡಗಿಸುತ್ತೀರಿ.


“ಆದ್ದರಿಂದ ನಾನು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರನ್ನು ಇತರ ಜನಾಂಗಗಳಿಂದ ದೂರ ಹಾಕಿದರೂ, ದೇಶಗಳಲ್ಲಿ ಚದರಿಸಿದರೂ, ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದವರೆಗೆ ಪರಿಶುದ್ಧ ಸ್ಥಳವಾಗಿರುವೆನು.’


ಆಕಾಶಗಳನ್ನು ನೆಡುವುದಕ್ಕೂ, ಭೂಮಿಯ ಅಸ್ತಿವಾರವನ್ನು ಹಾಕುವುದಕ್ಕೂ, ಚೀಯೋನಿಗೆ ನೀನು ನನ್ನ ಜನರೆಂದು ಹೇಳುವುದಕ್ಕೂ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು, ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.”


ಯೆಹೋವ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸಿರಿ; ನಾನು ನಿಮ್ಮಲ್ಲಿ ಅಡಗಿಕೊಳ್ಳುವಂತೆ ನಿಮ್ಮ ಬಳಿಗೆ ಬಂದಿದ್ದೇನೆ.


ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.


ಯೆಹೋವ ದೇವರು ನೋಹನಿಗೆ, “ನೀನೂ, ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಸೇರಿಕೊಳ್ಳಿರಿ. ಏಕೆಂದರೆ ಈ ಕಾಲದವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವುದನ್ನು ನಾನು ನೋಡಿದ್ದೇನೆ.


ಇದಲ್ಲದೆ ಯಾಜಕರನ್ನು ಹೇರಳವಾಗಿ ತೃಪ್ತಿಗೊಳಿಸುವೆನು. ನನ್ನ ಜನರು ನನ್ನ ಒಳ್ಳೆಯತನದಿಂದ ತೃಪ್ತಿಪಡುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ದೇವರು ನೋಹನಿಗೆ ಆಜ್ಞಾಪಿಸಿದಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು, ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವ ದೇವರು ನೋಹನನ್ನು ಒಳಗೆ ಬಿಟ್ಟು ಬಾಗಿಲನ್ನು ಮುಚ್ಚಿದರು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.


“ದೇವರೇ, ನೀವು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿಮ್ಮ ಶಿಕ್ಷೆ ಮುಗಿಯುವವರೆಗೂ ನನ್ನನ್ನು ಅಡಗಿಸಿರಿ! ನೀವು ನನಗೆ ಒಂದು ಕಾಲವನ್ನು ನಿಗದಿಪಡಿಸಿ, ಅನಂತರ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು!


ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.


“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.


ಯೆಹೋವ ದೇವರು ಮತ್ತು ಅವರ ರೋಷಕ್ಕೆ ಆಯುಧಗಳಾದವರು ದೂರದೇಶದಿಂದ ಎಂದರೆ, ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ.


ಯೆಹೋವ ದೇವರ ಕೋಪವು ಸಕಲ ರಾಷ್ಟ್ರಗಳ ಮೇಲೂ, ಅವುಗಳ ಎಲ್ಲಾ ಸೈನ್ಯಗಳ ಮೇಲೂ ರೋಷಗೊಂಡು, ಅವರನ್ನು ಕೊಲೆಗೆ ಗುರಿಮಾಡಿ, ಸಂಪೂರ್ಣವಾಗಿ ನಾಶಮಾಡಿದ್ದಾನೆ.


ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ.


ಮಹೋನ್ನತನಾದ ದೇವರಿಗೆ, ಮೊರೆಯಿಡುತ್ತೇನೆ. ನನಗಾಗಿ ಕಾರ್ಯಗಳಿಗೆ ನ್ಯಾಯ ನೀಡುವ ದೇವರಿಗೆ ಮೊರೆಯಿಡುತ್ತೇನೆ.


ದುಷ್ಟನಿಗಾಗಿ ಕುಣಿಯು ಅಗಿಯುವವರೆಗೆ ಅಂಥವನಿಗೆ ವಿಶ್ರಾಂತಿಯನ್ನು ಕೊಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು