ಯೆಶಾಯ 28:1 - ಕನ್ನಡ ಸಮಕಾಲಿಕ ಅನುವಾದ1 ಕುಡುಕರಿಂದ ಕೂಡಿದ ಎಫ್ರಾಯೀಮಿನ ಕಿರೀಟದಂತಿರುವ ನಗರಕ್ಕೆ ಕಷ್ಟ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಕಷ್ಟ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕುಡುಕರಿಂದ ಕೂಡಿದ ಎಫ್ರಯಿಮಿನ ಕಿರೀಟದಂತಿರುವ ನಗರಕ್ಕೆ ಧಿಕ್ಕಾರ ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಧಿಕ್ಕಾರ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತುಹೋದವರ ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವಿನ ಪಾಡೇ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಮಾರ್ಯದ ಕಡೆಗೆ ನೋಡು! ಎಫ್ರಾಯೀಮಿನ ಮತ್ತರಾದ ಜನರು ಆ ಪಟ್ಟಣದ ಬಗ್ಗೆ ಬಹಳ ಅಭಿಮಾನಪಡುತ್ತಿದ್ದಾರೆ. ಆ ನಗರವು ಪರ್ವತದ ಮೇಲಿರುವುದು; ಅದರ ಸುತ್ತಲೂ ಫಲವತ್ತಾದ ಕಣಿವೆ ಇರುವುದು. ಸಮಾರ್ಯದ ಜನರು ತಮ್ಮ ನಗರವು ಸುಂದರವಾದ ಕಿರೀಟವೆಂದು ನೆನಸುತ್ತಾರೆ. ಆದರೆ ಅವರು ಕುಡಿದು ಮತ್ತರಾಗಿದ್ದಾರೆ. ಅವರ “ಸುಂದರ ಕಿರೀಟವು” ಒಣಗಿದ ತರಗೆಲೆಯಾಗಿದೆ. ಅಧ್ಯಾಯವನ್ನು ನೋಡಿ |