Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:19 - ಕನ್ನಡ ಸಮಕಾಲಿಕ ಅನುವಾದ

19 ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು. ಏಕೆಂದರೆ ಅದು ಹೊತ್ತಾರೆಯಿಂದ ಹೊತ್ತಾರೆಗೆ, ಹಗಲು ರಾತ್ರಿಯೂ ಹಾದುಹೋಗುವುದು.” ಆಗ ದೇವರ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು; ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು; ಬೆಳಬೆಳಗೂ ಹಗಲುರಾತ್ರಿಯೂ ಅದು ಹಾದುಹೋಗುವದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವದು ಬರೀ ಭಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನು ಬಂದು ನಿಮ್ಮನ್ನು ತೆಗೆದುಕೊಂಡು ಹೋಗುವನು. ನಿಮಗೆ ದೊರಕುವ ಶಿಕ್ಷೆ ಬಹು ಭಯಂಕರವಾದದ್ದು. ಅದರ ಬಗ್ಗೆ ನೀವು ಕೇಳಿದ ಕೂಡಲೇ ಚಿಂತಿಸಲಾರಂಭಿಸುವಿರಿ. ಅದು ಮುಂಜಾನೆ ಬಂದು ರಾತ್ರಿ ಬಹು ಹೊತ್ತಿನ ತನಕ ಇರುವದು. “ಆಗ ನೀವು ಈ ಕಥೆಯನ್ನು ಅರ್ಥಮಾಡಿಕೊಳ್ಳುವಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:19
26 ತಿಳಿವುಗಳ ಹೋಲಿಕೆ  

ನಾನು ಕೇಳಿದಾಗ ನನ್ನ ಹೃದಯ ಬಡಿದುಕೊಂಡಿತು; ಆ ಶಬ್ದಕ್ಕೆ ನನ್ನ ತುಟಿಗಳು ಕದಲಿದವು; ನನ್ನ ಎಲುಬುಗಳು ಕ್ಷಯಗೊಂಡವು; ನನ್ನ ಕಾಲುಗಳು ನಡುಗಿದವು; ಆದರೂ ನಮ್ಮ ಮೇಲೆ ದಾಳಿಮಾಡುವ ಜನರ ಮೇಲೆ ನಾಶನ ಬರುವುದನ್ನು ನೋಡಲು ತಾಳ್ಮೆಯಿಂದ ಕಾದಿರುವೆನು.


ದಾನಿಯೇಲನಾದ ನಾನು ಬಳಲಿ ಕೆಲವು ದಿನಗಳವರೆಗೂ ಅಸ್ವಸ್ಥನಾದೆನು. ಅನಂತರ ನಾನು ಎದ್ದು, ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು. ನಾನು ಆ ದರ್ಶನದ ಬಗ್ಗೆ ಬೆಚ್ಚಿಬೆರಗಾದೆನು. ಅದರ ಅರ್ಥವನ್ನೇ ಗ್ರಹಿಸಿಕೊಳ್ಳಲಾಗಲಿಲ್ಲ.


“ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು. ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿದವು. ನನ್ನ ಮುಖವು ಕಳೆಗುಂದಿತು. ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.”


‘ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ. ಅದನ್ನು ಕೇಳುವವರೆಲ್ಲರ ಕಿವಿಗೆ ಜುಮ್ಮೆನ್ನುವುದು.


ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.


ಆಗ ಅವರು ಯೆಶಾಯನಿಗೆ, “ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.


ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.


ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.


ಯೆಹೋವ ದೇವರು ಬಾಬಿಲೋನಿಯರನ್ನೂ, ಅರಾಮ್ಯರನ್ನೂ, ಮೋವಾಬ್ಯರನ್ನೂ, ಅಮ್ಮೋನಿಯರನ್ನೂ ಅವನ ಮೇಲೆ ಕಳುಹಿಸಿದನು. ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ, ಯೆಹೂದವನ್ನು ನಾಶಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.


ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು.


ಇಸ್ರಾಯೇಲಿನ ಯೆಹೋವ ದೇವರಾದ ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವನ ಎರಡು ಕಿವಿಗಳು ಕಿರಗುಟ್ಟುವುವು.


ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.


ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಆಗ ಯೆಹೋವ ದೇವರು ಸಮುಯೇಲನಿಗೆ, “ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯವನ್ನು ಮಾಡುವೆನು. ಅದನ್ನು ಕೇಳುವವನ ಎರಡು ಕಿವಿಗಳೂ ಕಂಪಿಸುವುವು.


ಸರ್ವಶಕ್ತರ ಬಾಣಗಳು ನನ್ನಲ್ಲಿ ನಾಟಿವೆ; ಅವುಗಳ ವಿಷವನ್ನು ನನ್ನ ಆತ್ಮವು ಹೀರುತ್ತಿದೆ; ದೇವರ ವಿಷಯವಾದ ಹೆದರಿಕೆಗಳು ನನ್ನನ್ನು ಸುತ್ತುವರೆದಿವೆ.


ಅವರೆಲ್ಲರಿಗೂ ಕಾರ್ಗತ್ತಲು ಬೆಳಕಿನಂತಿರುವುದು; ಕತ್ತಲೆಯ ಭೀತಿಯೇ ಅವರಿಗೆ ಸ್ನೇಹಿತರು.


ನನ್ನ ಹೃದಯವು ನನ್ನ ಅಂತರಂಗದಲ್ಲಿ ನೊಂದುಕೊಳ್ಳುತ್ತದೆ. ಮರಣದ ಬೆದರಿಕೆಗಳು ನನ್ನ ಮೇಲೆ ಬಿದ್ದಿವೆ.


ಬಾಲ್ಯದಿಂದಲೂ ನಾನು ಬಾಧಿತನು ಸಾಯುವುದಕ್ಕೆ ಸಿದ್ಧನೂ ಆಗಿದ್ದೇನೆ. ನಿಮ್ಮ ದಂಡನೆಯನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.


ಅದರ ಕೀರ್ತಿಯನ್ನು ಕೇಳಿದ್ದೇವೆ; ನಮ್ಮ ಕೈಗಳು ಜೋಲಾಡುತ್ತವೆ, ಸಂಕಟವೂ, ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.


ಹಬ್ಬದ ದಿನಕ್ಕೆ ಕರೆಯುವಂತೆಯೇ ನನ್ನ ವಿರುದ್ಧವಾಗಿ ಪ್ರತಿಯೊಂದು ದಿಕ್ಕಿನಲ್ಲಿಯ ವಿರೋಧಿಗಳನ್ನು ಕರೆದಿದ್ದೀರಿ. ಯೆಹೋವ ದೇವರ ಕೋಪದ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಾರರು, ಉಳಿದುಕೊಳ್ಳಲಾರರು. ನಾನು ಬೆಳೆಸಿ ಸಾಕಿದವರನ್ನು ವೈರಿಯು ನಾಶಮಾಡಿದ್ದಾನೆ.


ಅದನ್ನು ಹಿಡಿಯಬಹುದೆಂಬ ನಿರೀಕ್ಷೆಯು ವ್ಯರ್ಥವಾದದ್ದು; ಹಿಡಿಯ ಬಂದವನು ನೋಡಿದ ಮಾತ್ರಕ್ಕೆ ಹೆದರಿ ಬಿದ್ದುಹೋಗುವನು.


“ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸಲೇಮಿನಲ್ಲಿ ಪ್ರಕಟಿಸಿರಿ, ‘ಇಡೀ ದೇಶದಲ್ಲಿ ತುತೂರಿ ಊದಿರಿ!’ ಎಂದು ಹೇಳಿರಿ. ಗಟ್ಟಿಯಾಗಿ ಹೀಗೆ ಕೂಗಿರಿ, ‘ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ!’ ಎಂದು ಹೇಳಿರಿ.


ಆ ದಿವಸದಲ್ಲಿ, “ಅರಸನ ಹೃದಯವೂ ಎದೆಗುಂದುವುದು. ಅಧಿಪತಿಯ ಹೃದಯವೂ ಕುಗ್ಗುವುದು. ಯಾಜಕರು ಭ್ರಮೆಗೊಳ್ಳುವರು. ಪ್ರವಾದಿಗಳು ಸ್ತಬ್ಧರಾಗುವರು,” ಎಂದು ಯೆಹೋವ ದೇವರು ನುಡಿಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು