ಯೆಶಾಯ 28:2 - ಕನ್ನಡ ಸಮಕಾಲಿಕ ಅನುವಾದ2 ಇಗೋ, ಕರ್ತರಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ಹೊಡೆದು ಬಿಡುವ ಬಿರುಗಾಳಿಯಂತೆಯೂ, ಪ್ರಳಯ ಮಾಡುವ ದೊಡ್ಡ ನೀರನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈಯಿಂದ ಬೀಳಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದೋ, ಸರ್ವೇಶ್ವರ ಸ್ವಾಮಿ ಬಳಿ ಮಹಾ ಬಲಿಷ್ಠನೊಬ್ಬನು ಇದ್ದಾನೆ. ಆತನು ರಭಸವಾಗಿರುವ ಕಲ್ಮಳೆಯಂತೆ, ವಿನಾಶಕರವಾದ ಬಿರುಗಾಳಿಯಂತೆ, ಕೊಚ್ಚಿ ಹರಿಯುವ ತುಂಬು ಪ್ರವಾಹದಂತೆ ಬರುವನು. ಆ ನಗರ ನೆಲಕ್ಕೆ ಕುಸಿದುಬಿದ್ದು ನೆಲಸಮವಾಗುವಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಹಾ, ಕರ್ತನು ಒಬ್ಬ ಮಹಾ ಬಲಿಷ್ಠನನ್ನು ನೇವಿುಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ನಾಶಕವಾದ ಬಿರುಗಾಳಿಯೋಪಾದಿಯಲ್ಲಿಯೂ ಮುಣುಗಿಸುವ ಅತಿಧಾರಾವೃಷ್ಟಿಯ ಹಾಗೂ ಬಲಾತ್ಕಾರದಿಂದ [ಆ ಪಟ್ಟಣವನ್ನು] ನೆಲಕ್ಕೆ ಬೀಳಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇಗೋ, ನನ್ನ ಒಡೆಯನಿಗೆ ಬಲಿಷ್ಠನೂ ಧೈರ್ಯವಂತನೂ ಆಗಿರುವ ಒಬ್ಬನಿದ್ದಾನೆ. ಅವನು ದೇಶದೊಳಗೆ ಆಲಿಕಲ್ಲಿನ ಮಳೆಯಿಂದ ಕೂಡಿದ ಬಿರುಗಾಳಿಯಂತೆಯೂ ನದಿಯ ಬಲವಾದ ಪ್ರವಾಹವು ದೇಶದೊಳಗೆ ನುಗ್ಗಿಬರುವಂತೆಯೂ ಅವನು ಬರುವನು. ಆ ಕಿರೀಟವನ್ನು (ಸಮಾರ್ಯ) ನೆಲದ ಮೇಲೆ ಬಿಸಾಡುವನು. ಅಧ್ಯಾಯವನ್ನು ನೋಡಿ |