Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:21 - ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರು ಪೆರಾಚೀಮ್ ಪರ್ವತದಲ್ಲಿ ಎದ್ದಂತೆ ಏಳುವರು. ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ, ಅಪರೂಪವಾದ ತಮ್ಮ ಕೆಲಸವನ್ನು ನಡಿಸಿ, ಅಪೂರ್ವವಾದ ತಮ್ಮ ಕಾರ್ಯವನ್ನು ನೆರವೇರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಒಮ್ಮೆ ಸರ್ವೇಶ್ವರ ಪೆರಾಚೀಮ್ ಬೆಟ್ಟದ ಮೇಲೆ ಎದ್ದಂತೆ ಏಳುವರು; ಗೊಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವರು. ಆಗ ಅಸಾಧಾರಣ ಕಾರ್ಯವೊಂದನ್ನು ನಡೆಸುವರು; ಅಪೂರ್ವವಾದ ತಮ್ಮ ಕೆಲಸವನ್ನು ನೆರವೇರಿಸುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡಿಸಬೇಕೆಂತಲೂ ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ತಗ್ಗಿನಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪೆರಾಚೀಮ್ ಬೆಟ್ಟದ ಮೇಲೆ ಯೆಹೋವನು ಯುದ್ಧ ಮಾಡಿದಂತೆಯೇ ಆತನು ಯುದ್ಧಮಾಡುವನು. ಗಿಬ್ಯೋನ್ ಕಣಿವೆಯಲ್ಲಿ ಯೆಹೋವನು ಕೋಪಗೊಂಡಿದ್ದಂತೆಯೇ ಕೋಪಗೊಳ್ಳುವನು. ಆಗ ಆತನು ಮಾಡಬೇಕಾದ ಕಾರ್ಯಗಳನ್ನು ಮಾಡುವನು. ಯೆಹೋವನು ಕೆಲವು ಅಪರಿಚಿತವಾದ ಸಂಗತಿಗಳನ್ನು ಮಾಡುವನು. ಆದರೆ ಆತನು ತನ್ನ ಕಾರ್ಯವನ್ನು ಮಾಡಿಮುಗಿಸುವನು. ಆ ಕೆಲಸವು ಒಬ್ಬ ಪರಿಚಯವಿಲ್ಲದವನ ಕೆಲಸವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:21
21 ತಿಳಿವುಗಳ ಹೋಲಿಕೆ  

ಹಾಗೆಯೇ ದಾವೀದನು ಮತ್ತು ಅವನ ಸಂಗಡಿಗರೂ ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾರೆ,” ಎಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಎಂದು ಹೆಸರಿಟ್ಟನು.


ಆದಕಾರಣ ದಾವೀದನು ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ಯೆಹೋವ ದೇವರು ನನ್ನ ಶತ್ರುಗಳನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ, ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಎಂದು ಹೆಸರಿಟ್ಟನು.


ಯೆಹೋವ ದೇವರು ಅಮೋರಿಯರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿದ ಆ ದಿನದಲ್ಲಿ ಯೆಹೋಶುವನು ಯೆಹೋವ ದೇವರ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ ಹೀಗೆ ಹೇಳಿದನು, “ಸೂರ್ಯನೇ ನೀನು ಗಿಬ್ಯೋನಿನ ಮೇಲೆ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲಿ ಸ್ಥಿರವಾಗಿ ನಿಲ್ಲು.”


ಆಗ ಯೆಹೋವ ದೇವರು ಅವರನ್ನು ಇಸ್ರಾಯೇಲಿನ ಮುಂದೆ ಕಳವಳಗೊಳಿಸಿದರು. ಯೆಹೋಶುವನು ಮತ್ತು ಇಸ್ರಾಯೇಲರು ಗಿಬ್ಯೋನಿನಲ್ಲಿ ಸಂಪೂರ್ಣವಾಗಿ ಸಂಹರಿಸಿ, ಬೇತ್ ಹೋರೋನಿಗೆ ಹೋಗುವ ಮಾರ್ಗದಲ್ಲಿ ಅವರನ್ನು ಹಿಂದಟ್ಟಿ, ಅಜೇಕ, ಮಕ್ಕೇದದ ಎಂಬ ಊರುಗಳವರೆಗೆ ಹೊಡೆದರು.


ದಾರಿಯಲ್ಲಿ ಹೋಗುವವರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ. ಅವರು ಯೆರೂಸಲೇಮಿನ ಪುತ್ರಿಯ ವಿಷಯದಲ್ಲಿ ಸಿಳ್ಳುಹಾಕಿ, ತಲೆಯಾಡಿಸಿ ಆ ಮನುಷ್ಯರು ಕರೆಯುತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ, ಸರ್ವಭೂಮಿಯ ಸಂತೋಷವೂ ಆಗಿರುವ ನಗರಿಯು ಇದೆಯೋ?


ಆಗ ದಾವೀದನು, ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗಿಬ್ಯೋನಿನಿಂದ ಗೆಜೆರಿನವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದರು.


ಆಗ ದಾವೀದನು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗೆಬದಿಂದ ಗೆಜೆರಿನವರೆಗೆ ಫಿಲಿಷ್ಟಿಯರನ್ನು ಹೊಡೆದನು.


ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು. ಅವರ ಜ್ಞಾನಿಗಳ ಜ್ಞಾನವು ಅಳಿಯುವುದು. ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.”


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು. ಏಕೆಂದರೆ ಅದು ಹೊತ್ತಾರೆಯಿಂದ ಹೊತ್ತಾರೆಗೆ, ಹಗಲು ರಾತ್ರಿಯೂ ಹಾದುಹೋಗುವುದು.” ಆಗ ದೇವರ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.


ನಿನ್ನ ಮಿತ್ರರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವುದಿಲ್ಲ. ನಿನ್ನ ಅಕ್ರಮಗಳು ಬಹಳವೂ, ನಿನ್ನ ಪಾಪಗಳು ಪ್ರಬಲವೂ ಆಗಿರುವುದರಿಂದ ಶತ್ರುವಿನ ಗಾಯದಿಂದಲೂ, ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ;


ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”


ನಮ್ಮ ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ನಾಶವಾಗಿದೆ,” ಎಂದು ಹೇಳಿದನು.


ಏಕೆಂದರೆ ಆತನು ಬೇಕೆಂದು ಮನುಷ್ಯರ ಮಕ್ಕಳಿಗೆ ಬಾಧೆಯನ್ನೂ, ದುಃಖವನ್ನೂ ಕೊಡುವುದಿಲ್ಲ.


ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧವಾಗಿ ಏಳುವವನ್ಯಾರು? ಅಪರಾಧ ಮಾಡುವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನ್ಯಾರು?


ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು, ಗುಡ್ಡಗಳ ಮೇಲೆ ನನ್ನನ್ನು ಪರಿಹಾಸ್ಯ ಮಾಡಿದರಲ್ಲಾ. ಹೀಗಿರುವುದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಮಡಿಲಲ್ಲಿ ಅಳೆದು ಸುರಿಸುವೆನು.”


ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ಕಾಣುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ, ಯಾಕೋಬಿನ ಪರಿಶುದ್ಧನನ್ನು ಪ್ರತಿಷ್ಠಿಸುವರು, ಇಸ್ರಾಯೇಲಿನ ದೇವರಿಗೆ ಭಯಪಡುವರು.


ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ, ಬೆಂಕಿ ನೀರನ್ನು ಉಕ್ಕಿಸುವಂತೆಯೂ, ನೀನು ಇಳಿದುಬಂದು ನಿನ್ನ ಹೆಸರನ್ನು ನಿನ್ನ ವೈರಿಗಳಿಗೆ ತಿಳಿಯುವಂತೆ ಮಾಡು!


“ಜನಾಂಗಗಳ ಕಡೆಗೆ ನೋಡಿ ಲಕ್ಷ್ಯಗೊಟ್ಟು ಬಹಳವಾಗಿ ಆಶ್ಚರ್ಯಪಡಿರಿ. ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ವಿವರಿಸಿ ಹೇಳಿದರೂ ನೀವದನ್ನು ನಂಬುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು