ಯೆಶಾಯ 28:25 - ಕನ್ನಡ ಸಮಕಾಲಿಕ ಅನುವಾದ25 ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ, ಜೀರಿಗೆಯನ್ನು ಚದರಿಸಿ ಮತ್ತು ಗೋಧಿಯನ್ನು ಸಾಲುಸಾಲಾಗಿಯೂ, ಜವೆಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು, ಜೀರಿಗೆಯನ್ನು ಬಿತ್ತಿ, ಗೋದಿಯನ್ನು ಸಾಲು ಸಾಲಾಗಿ ತಕ್ಕ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಒಮ್ಮೆ ಭೂಮಿಯನ್ನು ಹಸನುಮಾಡಿದ ಮೇಲೆ ಜೀರಿಗೆಯನ್ನು ಚೆಲ್ಲಿ, ಸದಾಪನ್ನು ಬಿತ್ತುವವನಲ್ಲವೆ? ಗೋದಿಯನ್ನು ಸಾಲುಸಾಲಾಗಿಯೂ ಬಾರ್ಲಿಯನ್ನು ತಕ್ಕ ಸ್ಥಳದಲ್ಲಿ ಬಿತ್ತಿ, ಕಡಲೆಯನ್ನು ಅಂಚಿನಲ್ಲಿ ಹಾಕುವವನಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅಂತು ಭೂವಿುಯನ್ನು ಹಸನುಮಾಡಿದ ಮೇಲೆ ಕರಿಯ ಜೀರಿಗೆಯನ್ನು ಚೆಲ್ಲಿ ಜೀರಿಗೆಯನ್ನು ಬಿತ್ತಿ ಗೋದಿಯನ್ನು ಸಾಲು ಸಾಲಾಗಿಯೂ ಜವೆಗೋದಿಯನ್ನು ತಕ್ಕ ಸ್ಥಳದಲ್ಲಿಯೂ ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ವ್ಯವಸಾಯಗಾರನು ಮಣ್ಣನ್ನು ಹಸನುಮಾಡಿ ನಂತರ ಬೀಜ ಬಿತ್ತುವನು. ಬೇರೆಬೇರೆ ತರದ ಬೀಜಗಳನ್ನು ಬೇರೆಬೇರೆ ರೀತಿಯಲ್ಲಿ ಬಿತ್ತುವನು. ಅವನು ಗೋಧಿಯನ್ನಾಗಲಿ ಬಾರ್ಲಿಯನ್ನಾಗಲಿ ನೆಲದ ಮೇಲೆ ಬಿಸಾಡುವನು. ಗೋಧಿಯನ್ನು ಸಾಲಾಗಿ ಬಿತ್ತುವನು. ಬೇರೆಬೇರೆ ಗಿಡಗಳ ಬೀಜವನ್ನು ಬೇರೆಬೇರೆ ಸ್ಥಳಗಳಲ್ಲಿಯೂ ಬೇರೆಬೇರೆ ವಿಧಾನದಲ್ಲಿಯೂ ಬಿತ್ತುವನು. ಅಧ್ಯಾಯವನ್ನು ನೋಡಿ |