Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:26 - ಕನ್ನಡ ಸಮಕಾಲಿಕ ಅನುವಾದ

26 ಏಕೆಂದರೆ ಅವನ ದೇವರು ಅವನಿಗೆ ಸೂಚಿಸುತ್ತಾರೆ. ಮತ್ತು ಸರಿಯಾದ ಮಾರ್ಗವನ್ನು ಕಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವನ ದೇವರು ಇದನ್ನೆಲ್ಲಾ ಸರಿಯಾಗಿ ತಿಳಿಸಿ ಕಲಿಸಿಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಮ್ಮ ದೇವರು ಈ ಉದಾಹರಣೆಯ ಮೂಲಕ ಒಂದು ಪಾಠವನ್ನು ಕಲಿಸುತ್ತಾನೆ. ಏನೆಂದರೆ ಆತನು ಜನರನ್ನು ಶಿಕ್ಷಿಸುವಾಗ ನ್ಯಾಯವಾಗಿ ಶಿಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:26
13 ತಿಳಿವುಗಳ ಹೋಲಿಕೆ  

ಬೆಚಲಯೇಲನನ್ನು, ಒಹೋಲಿಯಾಬನನ್ನು ಮತ್ತು ಯೆಹೋವ ದೇವರು ಜ್ಞಾನಕೊಟ್ಟಿದ್ದ ಪ್ರತಿಯೊಬ್ಬ ಶಿಲ್ಪಿಯನ್ನೂ ಆ ಕೆಲಸ ಮಾಡುವುದಕ್ಕೆ ಸಿದ್ಧ ಮನಸ್ಸಿದ್ದ ಪ್ರತಿಯೊಬ್ಬನನ್ನೂ ಮೋಶೆಯು ಕರೆದನು.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.


ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ದೇವರು ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ.


ಏಕೆಂದರೆ ದೇವರು ಉಷ್ಟ್ರಪಕ್ಷಿಗೆ ಜ್ಞಾನವನ್ನು ಮರೆಮಾಡಿ, ತಿಳುವಳಿಕೆಯನ್ನು ಅದಕ್ಕೆ ಕೊಡಲಿಲ್ಲವಷ್ಟೆ.


ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಬುದ್ಧಿಕಲಿಸಿಕೊಡುವ ದೇವರು ಎಲ್ಲಿ? ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುವ ದೇವರು ಎಲ್ಲಿ?’ ಎಂದು ಯಾರೂ ಹೇಳುವುದಿಲ್ಲ.


ಇದಲ್ಲದೆ ನಾನು ಜ್ಞಾನದ ಆತ್ಮದಿಂದ ತುಂಬಿದ ವಿವೇಕದ ಹೃದಯವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.


ರಾಷ್ಟ್ರಗಳಿಗೆ ಶಿಕ್ಷಣ ಕೊಡುವ ದೇವರು ಶಿಕ್ಷಿಸುವುದಿಲ್ಲವೋ? ಮಾನವನಿಗೆ ಕಲಿಸುವ ದೇವರಲ್ಲಿ ಜ್ಞಾನದ ಕೊರತೆಯಿದೆಯೋ?


ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಮತ್ತು ಯಾರಿಗೆ ಬೋಧನೆಯನ್ನು ತಿಳಿದುಕೊಳ್ಳುವ ಹಾಗೆ ಮಾಡುತ್ತಾನೆ? ಆಗತಾನೇ ಹಾಲು ಬಿಟ್ಟ ಕೂಸುಗಳಿಗೋ, ಎಳೆಯ ಮಕ್ಕಳಿಗೋ?


ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ, ಜೀರಿಗೆಯನ್ನು ಚದರಿಸಿ ಮತ್ತು ಗೋಧಿಯನ್ನು ಸಾಲುಸಾಲಾಗಿಯೂ, ಜವೆಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.


ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವುದಿಲ್ಲ. ಜೀರಿಗೆಯನ್ನು ಒಕ್ಕುವುದು ಬಂಡಿಯ ಚಕ್ರ ತಿರುಗಿಸುವುದರಿಂದ ಅಲ್ಲ. ಅಗಸೆಯು ಕೋಲಿನಿಂದಲೂ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದ ಆಗಿರುತ್ತದೆ.


ಆದರೆ ಮನುಷ್ಯನಲ್ಲಿ ಒಂದು ಆತ್ಮ ಉಂಟು; ಸರ್ವಶಕ್ತರ ಶ್ವಾಸವು ಅವನಿಗೆ ತಿಳುವಳಿಕೆಯನ್ನು ಕೊಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು