Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:3 - ಕನ್ನಡ ಸಮಕಾಲಿಕ ಅನುವಾದ

3 ಕುಡುಕರಾದ ಎಫ್ರಾಯೀಮ್ಯರ ಗರ್ವದ ಕಿರೀಟವು ಕಾಲಿನ ತುಳಿತಕ್ಕೆ ಈಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಫ್ರಯಿಮಿನ ಕುಡುಕರ ಮಹಾಮುಕುಟದಂತಿರುವ ಆ ನಗರ ಕಾಲಿನ ತುಳಿತಕ್ಕೆ ಈಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕುಡಿದು ಮತ್ತರಾದ ಎಫ್ರಾಯೀಮ್ಯರಿಗೆ ಸುಂದರವಾದ ಕಿರೀಟದ ಮೇಲೆ ಹೆಚ್ಚಳ. ಆದರೆ ಆ ನಗರವು ತುಳಿಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:3
12 ತಿಳಿವುಗಳ ಹೋಲಿಕೆ  

ಕಾಲು, ಬಡವರ ಕಾಲುಗಳೂ, ದೀನರ ಪಾದಗಳೂ ಅದನ್ನು ತುಳಿಯುವುವು.


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು. ಏಕೆಂದರೆ ಅದು ಯೆಹೂದ್ಯರಲ್ಲದವರಿಗಾಗಿ ಬಿಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ಆಮೇಲೆ ಒಬ್ಬ ಪರಿಶುದ್ಧನು ಮಾತನಾಡುವುದನ್ನು ಕೇಳಿದೆನು. ಮಾತನಾಡಿದ ಆತನಿಗೆ ಮತ್ತೊಬ್ಬ ಪರಿಶುದ್ಧನು, “ನಿತ್ಯ ಯಜ್ಞವನ್ನು ನಿಲ್ಲಿಸುವುದೂ, ಹಾಳುಮಾಡುವ ಅಪರಾಧವನ್ನು ತಡೆಯುವುದೂ, ಪರಿಶುದ್ಧ ಸ್ಥಳವನ್ನೂ, ಯೆಹೋವ ದೇವರ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವ ಈ ದರ್ಶನ ನೆರವೇರಲು ಎಷ್ಟು ಕಾಲ ಬೇಕಾಗುವುದು?” ಎಂದು ಕೇಳಿದನು.


ಕುಡುಕರಿಂದ ಕೂಡಿದ ಎಫ್ರಾಯೀಮಿನ ಕಿರೀಟದಂತಿರುವ ನಗರಕ್ಕೆ ಕಷ್ಟ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಕಷ್ಟ!


ಯೇಹುವು, “ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ,” ಎಂದನು. ಅವರು ಅವಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ, ಕುದುರೆಗಳ ಮೇಲೆಯೂ ಸಿಡಿಯಿತು. ಯೇಹುವು ರಥವನ್ನು ಅವಳ ಮೇಲೆ ಓಡಿಸಿದನು.


ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ.


ಈ ಪರ್ವತದಲ್ಲಿ ಯೆಹೋವ ದೇವರ ಕೈ ವಿಶ್ರಮಿಸಿಕೊಳ್ಳುವುದು. ಒಣಹುಲ್ಲನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ತುಳಿತಕ್ಕೆ ಈಡಾಗುವುದು.


ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳಗಿನ ಜಾವದಲ್ಲಿ ಎದ್ದು ರಾತ್ರಿವರೆಗೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲಕಳೆಯುವವರಿಗೆ ಕಷ್ಟ!


ಗರ್ವದಿಂದಲೂ, ಹೆಮ್ಮೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯೀಮ್ಯರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಈ ಮಾತು ಗೊತ್ತಾಗುವುದು. ಅದೇನೆಂದರೆ,


ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವುದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವುದಿಲ್ಲ. ವಿಪರೀತ ಬಾಧೆಯು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು.


“ದ್ರಾಕ್ಷಿಯನ್ನು ತೊಟ್ಟಿಯಲ್ಲಿ ನಾನೊಬ್ಬನೇ ತುಳಿದಿದ್ದೇನೆ. ಜನಾಂಗಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ. ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ್ನ ಉರಿಯಲ್ಲಿ ಅವರನ್ನು ಜಜ್ಜಿದ್ದೇನೆ. ಆದ್ದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಸಿಡಿದು, ನನ್ನ ವಸ್ತ್ರಕ್ಕೆ ಮೆತ್ತಿಕೊಂಡಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು