ಯೆಶಾಯ 28:4 - ಕನ್ನಡ ಸಮಕಾಲಿಕ ಅನುವಾದ4 ಫಲವತ್ತಾದ ಕಣಿವೆಗೆ ತಲೆಯ ಮೇಲಿರುವ ಅಲಂಕಾರದ ಶೃಂಗಾರವಾಗಿದ್ದು, ಬೇಸಿಗೆ ಮುಂಚೆ ಮಾಗಿದ ಅಂಜೂರದ ಹಣ್ಣಿನ ಹಾಗೆ ಇರುವುದು. ಜನರು ಅವರನ್ನು ನೋಡಿ ಕೈಗೆ ತೆಗೆದುಕೊಂಡ ತಕ್ಷಣ ಅವರು ನುಂಗುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ, ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು, ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಫಲವತ್ತಾದ ಕಣಿವೆಗೆ ಶ್ರೇಷ್ಠಶಿರೋಭೂಷಣವಾಗಿದ್ದು, ಈಗ ಬಾಡುತ್ತಿರುವ ಆ ನಗರ, ಹೂ ಕಾಲಕ್ಕೆ ಮುಂಚೆ ಮಾಗಿದ ಅಂಜೂರಕ್ಕೆ ಸಮಾನವಾಗುವುದು. ಆ ಹಣ್ಣನ್ನು ಕಂಡವರು ಕಿತ್ತ ಕೂಡಲೆ ತಿಂದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕಾಲಕ್ಕೆ ಮುಂಚೆ ಮಾಗಿದ ಅಂಜೂರಕ್ಕೆ ಸಮಾನವಾಗುವದು; ಆ ಹಣ್ಣನ್ನು ಕಂಡವನು ಕಿತ್ತ ಕೂಡಲೆ ನುಂಗಿಬಿಡುವನಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ನಗರವು ಬೆಟ್ಟದ ಮೇಲೆ ಕುಳಿತಿದೆ; ಸುತ್ತಲೂ ಫಲವತ್ತಾದ ಕಣಿವೆ ಇದೆ. ಆ ಸುಂದರವಾದ ಪುಷ್ಪ ಕಿರೀಟವು ಕೇವಲ ಒಣಗಿದ ತರಗೆಲೆ. ಆ ನಗರವು ಬೇಸಿಗೆಯ ಮೊದಲಿನ (ಅಂಜೂರದ) ಹಣ್ಣುಗಳಂತೆ ಇದೆ. ಅದನ್ನು ನೋಡಿದವರು ಕೂಡಲೇ ತೆಗೆದುಕೊಂಡು ಬಾಯಿಗೆ ಹಾಕಿಕೊಳ್ಳುವರು. ಅಧ್ಯಾಯವನ್ನು ನೋಡಿ |