ಯೆಶಾಯ 28:9 - ಕನ್ನಡ ಸಮಕಾಲಿಕ ಅನುವಾದ9 ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಮತ್ತು ಯಾರಿಗೆ ಬೋಧನೆಯನ್ನು ತಿಳಿದುಕೊಳ್ಳುವ ಹಾಗೆ ಮಾಡುತ್ತಾನೆ? ಆಗತಾನೇ ಹಾಲು ಬಿಟ್ಟ ಕೂಸುಗಳಿಗೋ, ಎಳೆಯ ಮಕ್ಕಳಿಗೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇವರು ನನ್ನನ್ನು ಕುರಿತು : “ಇವನ ಜ್ಞಾನೋಪದೇಶ ಯಾರಿಗೆ? ಇವನು ಸಾರುವ ಸಂದೇಶ ಯಾರಿಗೆ? ಮೊಲೆಬಿಟ್ಟ ಕೂಸುಗಳಿಗೋ? ಎದೆಬಿಟ್ಟ ಮಕ್ಕಳಿಗೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 [ಇವರು ಹರಟಿಕೊಳ್ಳುವದೇನಂದರೆ] - ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಮಾತನ್ನು ತಿಳಿಯಪಡಿಸುತ್ತಾನೆ? ಮೊಲೆ ಬಿಟ್ಟ ಕೂಸುಗಳಿಗೋ? ಎದೆಬಿಟ್ಟ ಮಕ್ಕಳಿಗೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನು ಜನರಿಗೆ ಪಾಠ ಕಲಿಸಲು ಪ್ರಯತ್ನಿಸುತ್ತಿದ್ದಾನೆ. ತನ್ನ ಬೋಧನೆಯನ್ನು ತನ್ನ ಜನರು ಅರಿತುಕೊಳ್ಳಲೆಂದು ಯೆಹೋವನು ಪ್ರಯತ್ನಿಸುತ್ತಿದ್ದಾನೆ. ಆದರೆ ಜನರು ಇನ್ನೂ ತಾಯಿ ಹಾಲು ಕುಡಿಯುವ ಚಿಕ್ಕ ಕೂಸುಗಳಿಂತಿದ್ದಾರೆ. ಅಧ್ಯಾಯವನ್ನು ನೋಡಿ |