ಯೆಶಾಯ 29:1 - ಕನ್ನಡ ಸಮಕಾಲಿಕ ಅನುವಾದ1 ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ವಾಸಿಸಿದ ಪಟ್ಟಣವೇ! ವರುಷಕ್ಕೆ ವರುಷವನ್ನು ಕೂಡಿಸಿರಿ. ನಿಮ್ಮ ಹಬ್ಬಗಳ ಚಕ್ರ ಮುಂದುವರಿಯಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಯ್ಯೋ, ಅರೀಯೇಲೇ, ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹೆಚ್ಚಾಗಿ ಬರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರೀಯೇಲೇ, ಅರೀಯೇಲೇ, ದಾವೀದನು ದಂಡಿಳಿದ ಪಟ್ಟಣವೇ, ನಿನಗೆ ಧಿಕ್ಕಾರ ! ಒಂದೆರಡು ವರ್ಷ ತುಂಬಲಿ. ಹಬ್ಬಹುಣ್ಣಿಮೆಗಳು ಕಳೆಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ಸೈನ್ಯಸಮೇತನಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರುಷಕ್ಕೆ ಮುಂದಿನ ವರುಷವನ್ನು ಸೇರಿಸಿರಿ; ಹಬ್ಬಗಳು ಸುತ್ತಿಬರಲಿ; ಆಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಿಚಾಟ ಕಿರಿಚಾಟವಾಗುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರು ಹೇಳುವುದೇನೆಂದರೆ, “ಅರೀಯೇಲನ್ನು ನೋಡು. ಅಲ್ಲಿ ದಾವೀದನು ಪಾಳೆಯಮಾಡಿಕೊಂಡಿದ್ದನು. ಆಕೆಯ ಹಬ್ಬಗಳು ಪ್ರತಿ ವರ್ಷವೂ ನಡೆಯುತ್ತಿವೆ. ಅಧ್ಯಾಯವನ್ನು ನೋಡಿ |
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.