ಯೆಶಾಯ 29:13 - ಕನ್ನಡ ಸಮಕಾಲಿಕ ಅನುವಾದ13 ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ. ಅಧ್ಯಾಯವನ್ನು ನೋಡಿ |