Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:19 - ಕನ್ನಡ ಸಮಕಾಲಿಕ ಅನುವಾದ

19 ದೀನರ ಸಂತೋಷವು ಯೆಹೋವ ದೇವರಲ್ಲಿ ಹೆಚ್ಚಾಗುವುವು. ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೀನರು ಯೆಹೋವನಲ್ಲಿ ಹೆಚ್ಚುಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲ್ಯರ ಸದಮಲಸ್ವಾವಿುಯಲ್ಲಿ ಉಲ್ಲಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೀನರನ್ನು ಯೆಹೋವನು ಸಂತೋಷಿಸುವಂತೆ ಮಾಡುವನು. ಬಡವರು ಇಸ್ರೇಲರ ಪರಿಶುದ್ಧನಲ್ಲಿ ಉಲ್ಲಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:19
37 ತಿಳಿವುಗಳ ಹೋಲಿಕೆ  

ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ಸಾತ್ವಿಕರು ಧನ್ಯರು, ಅವರು ಭೂಮಿಗೆ ಬಾಧ್ಯರಾಗುವರು.


ದೀನರನ್ನು ನ್ಯಾಯ ಮಾರ್ಗದಲ್ಲಿ ನಡೆಸಿ, ದೀನರಿಗೆ ತಮ್ಮ ಮಾರ್ಗವನ್ನು ಬೋಧಿಸುತ್ತಾರೆ.


ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ.


“ಆತ್ಮದಲ್ಲಿ ಬಡವರಾಗಿರುವವರು ಧನ್ಯರು, ಪರಲೋಕ ರಾಜ್ಯವು ಅವರದು.


ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು. ದೀನರು ಬಹಳ ಸಮಾಧಾನವನ್ನೂ ಸಮೃದ್ಧಿಯನ್ನು ಅನುಭವಿಸುವರು.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು.


“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”


ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ನೀವು ಸಂಪೂರ್ಣ ದೀನತ್ವದಿಂದಲೂ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.


ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ.


ನಾನು ಯೆಹೋವ ದೇವರಲ್ಲಿ ಉಲ್ಲಾಸಿಸುವೆನು. ನನ್ನ ರಕ್ಷಕರಾದ ದೇವರಲ್ಲಿ ಆನಂದಿಸುವೆನು.


ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”


ಬಡವರಲ್ಲಿ ಬಡವರಾದವರು ಆಹಾರ ಕಂಡುಕೊಳ್ಳುವರು. ಕೊರತೆಯಲ್ಲಿರುವವರು ಸುರಕ್ಷಿತವಾಗಿ ನಿದ್ರಿಸುವರು. ಆದರೆ ನಿನ್ನ ಸಂತಾನದವರೋ ಕ್ಷಾಮದಿಂದ ಹತರಾಗುವರು. ನಿನ್ನಲ್ಲಿ ಉಳಿದವರನ್ನು ಅದು ಹತಮಾಡುವುದು.


ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ.


ಆದರೆ ದೇವರು ಬಡವರನ್ನು ಎಂದೆಂದಿಗೂ ಮರೆಯುವುದಿಲ್ಲ; ಕುಗ್ಗಿದವರ ನಿರೀಕ್ಷೆ ಎಂದೆಂದಿಗೂ ನಾಶವಾಗುವುದಿಲ್ಲ.


ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.


ನೀವು ನನ್ನ ಪ್ರಜೆಯನ್ನು ಹೊಡೆದು, ಚೂರುಗಳನ್ನಾಗಿ ಮಾಡಿ, ಬಡವರ ಮುಖಗಳನ್ನು ಹಿಂಡುವುದರ ಅರ್ಥವೇನು?” ಎಂದು ಸರ್ವಶಕ್ತ ದೇವರಾದ ಯೆಹೋವ ದೇವರು ವಾದಿಸುತ್ತಾರೆ.


ನೀವು ದೀನರಿಗೆ ಕೋಟೆಯೂ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ, ಭೀಕರರ ಶ್ವಾಸವು ಬಿಸಿಲಿಗೆ ನೆರಳೂ, ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ.


ಕಾಲು, ಬಡವರ ಕಾಲುಗಳೂ, ದೀನರ ಪಾದಗಳೂ ಅದನ್ನು ತುಳಿಯುವುವು.


ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.


ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು