ಯೆಶಾಯ 29:21 - ಕನ್ನಡ ಸಮಕಾಲಿಕ ಅನುವಾದ21 ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅಪಸಾಕ್ಷಿಯಿಂದ ತಪ್ಪು ಹೊರಿಸುವವರೂ ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ ನ್ಯಾಯವಂತನ ನ್ಯಾಯವನ್ನು ಸುಮ್ಮಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲಾ ನಿರ್ಮೂಲರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 (ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.) ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.