Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:3 - ಕನ್ನಡ ಸಮಕಾಲಿಕ ಅನುವಾದ

3 ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ, ದಿಬ್ಬ ಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ನಿನ್ನ ಸುತ್ತಲೂ ದಂಡಿಳಿಸಿ, ನಿನಗೆ ವಿರುದ್ಧವಾಗಿ ಕೋಟೆಗಳನ್ನು ಕಟ್ಟಿ, ದಿಬ್ಬಹಾಕಿ ನಿನ್ನನ್ನು ಮುತ್ತುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ನಿನ್ನ ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೊತ್ತಲ ಕಟ್ಟುವೆನು. ದಿಬ್ಬವನ್ನೆಬ್ಬಿಸಿ ನಿನ್ನನ್ನು ಮುತ್ತುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ನಿನ್ನ ಸುತ್ತಲು ದಂಡಿಳಿಸಿ ನಿನಗೆ ವಿರುದ್ಧವಾಗಿ ಕೊತ್ತಲಕಟ್ಟಿ ದಿಬ್ಬಹಾಕಿ ನಿನ್ನನ್ನು ಮುತ್ತುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನಿನ್ನ ಸುತ್ತಲೂ ನಾನು ಸೈನ್ಯವನ್ನಿಟ್ಟಿದ್ದೇನೆ. ಅರೀಯೇಲೇ, ನಿನಗೆ ವಿರುದ್ಧವಾಗಿ ನಾನು ಯುದ್ಧದ ಬುರುಜನ್ನು ಕಟ್ಟಿಸಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:3
9 ತಿಳಿವುಗಳ ಹೋಲಿಕೆ  

ಅವನ ಬಲಗೈಯಲ್ಲಿ ಯೆರೂಸಲೇಮಿಗಾಗಿ ಶಕುನವು ಇತ್ತು. ಅಲ್ಲಿ ಅವನು ಬಡಿಯುವ ಆಯುಧಗಳನ್ನಿಟ್ಟು, ಬಾಯಿಬಿಟ್ಟು ಸಂಹಾರ ಧ್ವನಿಗೈದು, ಆರ್ಭಟವಿಟ್ಟು ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ದಿಬ್ಬ ಹಾಕಿ, ಒಡ್ಡು ಕಟ್ಟಿದ್ದು ಸೂಚನೆಯಾಗಿದೆ.


ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


“ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “ ‘ಅವನು ಈ ಪಟ್ಟಣದೊಳಗೆ ಬರುವುದಿಲ್ಲ; ಅಲ್ಲಿ ಬಾಣವನ್ನು ಎಸೆಯುವುದಿಲ್ಲ; ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು; ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.


ಅಸ್ಸೀರಿಯದ ಅರಸನು ತನ್ನ ಅತಿ ಪ್ರಮುಖ ಅಧಿಕಾರಿಯನ್ನೂ, ಮುಖ್ಯ ನಾಯಕರನ್ನೂ, ಸೈನ್ಯಾಧಿಕಾರಿಯನ್ನೂ ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನೂ ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡರು.


ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಕಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.


ಚೀಯೋನ್ ಪುತ್ರಿಯು ದ್ರಾಕ್ಷಿ ತೋಟದಲ್ಲಿರುವ ಮನೆಯ ಹಾಗೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಿರುವ ಪಟ್ಟಣದ ಹಾಗೆಯೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು