Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:1 - ಕನ್ನಡ ಸಮಕಾಲಿಕ ಅನುವಾದ

1 ಇಗೋ, ಕರ್ತನೂ ಸರ್ವಶಕ್ತನೂ ಆಗಿರುವ ಯೆಹೋವ ದೇವರೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಗೋ, ಪ್ರಭುವೂ ಸೇನಾಧೀಶ್ವರ ಆದ ಸರ್ವೇಶ್ವರಸ್ವಾಮಿ ಜೆರುಸಲೇಮ್ ಮತ್ತು ಜುದೇಯದ ಜನರ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲ ತೆಗೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಗೋ, ಕರ್ತನೂ ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಜೀವನಕ್ಕೆ ಆಧಾರಕೋದ್ಧಾರಕವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇವಿುನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಹೇಳುವದನ್ನೆಲ್ಲಾ ಮನದಟ್ಟುಮಾಡಿಕೊಳ್ಳಿರಿ: ನಮ್ಮ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಯೆಹೂದ ಮತ್ತು ಇಸ್ರೇಲಿನ ಆಧಾರಗಳನ್ನೆಲ್ಲಾ ತೆಗೆದುಬಿಡುವನು. ಆತನು ಅವರ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:1
19 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.


“ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.


ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.


“ನನ್ನ ಒಡೆಯನಾದ ಅರಸನೇ, ಈ ಮನುಷ್ಯರು ಬಾವಿಯಲ್ಲಿ ಹಾಕಿದ ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; ಏಕೆಂದರೆ ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ,” ಎಂದನು.


ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು.


ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ, ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನಾನು ನಿನ್ನ ಕೈಯೊಳಗಿಂದ ತತ್ತರಿಸುವಂಥ ಪಾತ್ರೆಯನ್ನೂ, ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ. ಇನ್ನು ಮೇಲೆ ನೀನು ಅದನ್ನು ತಿರುಗಿ ಕುಡಿಯುವುದೇ ಇಲ್ಲ.


ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋದರು; ಅವರ ಘನವಂತರು ಹಸಿವಿನಿಂದ ಸಾಯುವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವುದು.


ಉಸಿರು ಇರುವವರೆಗೆ ಬದುಕುವ ನರಮಾನವನ ಮೇಲಿನ ಭರವಸೆಯನ್ನು ಬಿಟ್ಟುಬಿಡಿರಿ. ಏಕೆಂದರೆ ಅವನ ಗಣನೆ ಎಷ್ಟರವರೆಗೆ?


ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು.


ಇದಲ್ಲದೆ ಯೆಹೋವ ದೇವರು ಇಂತೆನ್ನುತ್ತಾರೆ: “ಚೀಯೋನ್ ಪುತ್ರಿಯರು ಅಹಂಕಾರಿಗಳಾಗಿದ್ದು, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ನಾಜೂಕಿನಿಂದ ಹೆಜ್ಜೆ ಇಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ;


ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು, ಅವನು ಎಡಗಡೆಯಲ್ಲಿರುವುದನ್ನು ತಿಂದರೂ ಅವು ಅವನನ್ನು ತೃಪ್ತಿಪಡಿಸಲಾರವು. ಒಬ್ಬೊಬ್ಬನೂ ತನ್ನ ನೆರೆಯವನನ್ನು ಹಾನಿ ಮಾಡುತ್ತಿದ್ದಾನೆ.


ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.


ನಾವು ನಮ್ಮ ನೀರನ್ನು ಹಣಕೊಟ್ಟು ಕುಡಿಯಬೇಕಾಗಿದೆ. ನಮ್ಮ ಸೌದೆಯು ನಮಗೇ ಮಾರಲಾಗಿದೆ.


“ಪ್ರತಿಯೊಂದು ಪಟ್ಟಣದಲ್ಲಿ ಬರಿದಾದ ಹೊಟ್ಟೆಗಳನ್ನು ನಿಮಗೆ ಕೊಟ್ಟಿದ್ದೇನೆ. ಪ್ರತಿಯೊಂದು ಪಟ್ಟಣದಲ್ಲಿ ಆಹಾರದ ಕೊರತೆಯಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಈಗ ಏಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಅಧಿಕಾರಿಯು ನಾಶವಾದನೋ? ಹೆರುವವಳಂತೆ ನಿನಗೆ ವೇದನೆ ಬಂದಿರುವುದೋ?


ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು