Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:24 - ಕನ್ನಡ ಸಮಕಾಲಿಕ ಅನುವಾದ

24 ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ನಡುಪಟ್ಟಿಗೆ ಬದಲಾಗಿ ಹಗ್ಗ, ಜಡೆಯ ಬದಲಾಗಿ ಬೋಳುತಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಬರೆ, ಇವೆಲ್ಲ ಅವರಿಗೆ ಬಂದೊದಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ, ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದಲ್ಲದೆ ಸುಗಂಧಕ್ಕೆ ಬದಲಾಗಿ ದುರ್ಗಂಧ, ನಡುಪಟ್ಟಿಗೆ ಬದಲಾಗಿ ಹುರಿಹಗ್ಗ, ಜಡೆದಲೆಗೆ ಬದಲಾಗಿ ಬೋಳುದಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಬೆಡಗಿಗೆ ಬದಲಾಗಿ ಬೆತ್ತಲೆ, ಇಂಥ ಗತಿ ಅವರಿಗೆ ಬಂದೊದಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮತ್ತು ಸುಗಂಧಕ್ಕೆ ಬದಲಾಗಿ ಕೊಳೆ, ನಡುಪಟ್ಟಿಯಿದ್ದಲ್ಲಿ ಹಗ್ಗ, ಅಂದವಾಗಿ ಸೆಕ್ಕಿದ ಜಡೆಯ ಸ್ಥಾನದಲ್ಲಿ ಬೋಡು, ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀಪಟ್ಟಿ, ಬೆಡಗಿಗೆ ಬದಲಾಗಿ ಬರೆ, ಇವು ಆಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟಕಲೆಗಳೇ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:24
28 ತಿಳಿವುಗಳ ಹೋಲಿಕೆ  

ನಿನಗಾಗಿ ತಲೆ ಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.


ಚೀಯೋನಿನ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಶಬ್ದವಾಗಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳು ಹಾಕಿಕೊಂಡಿದ್ದಾರೆ. ಅವರು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಯೆರೂಸಲೇಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬಗ್ಗಿಸಿಕೊಂಡಿದ್ದಾರೆ.


ನಿನ್ನ ಮುದ್ದುಮಕ್ಕಳಿಗೋಸ್ಕರ ತಲೆ ಬೋಳಿಸಿಕೊಂಡು ಕ್ಷೌರಮಾಡಿಸಿಕೋ. ನಿನ್ನ ಬೋಳುತನವನ್ನು ಹದ್ದಿನಂತೆ ಮಾಡಿಕೋ. ಏಕೆಂದರೆ ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗುವರು.


ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು.


ಅವರು ತಮ್ಮ ಬೀದಿಗಳಲ್ಲಿ ಗೋಣಿತಟ್ಟನ್ನು ತಾವೇ ಸುತ್ತಿಕೊಳ್ಳುವರು. ಪ್ರತಿಯೊಬ್ಬನು ತನ್ನ ಮನೆಯ ಮೇಲೆಯೂ, ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕದಿಂದ ಗೋಳಾಡುವನು.


ವಿಚಿತ್ರವಾಗಿ ಜಡೆ ಹೆಣೆದುಕೊಳ್ಳುವುದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವುದೂ ಇಲ್ಲವೆ ತುಂಬಾ ಬೆಲೆಯ ಉಡಿಗೆಗಳನ್ನು ಧರಿಸಿಕೊಳ್ಳುವುದೂ ಇವೇ ನಿಮ್ಮ ಅಲಂಕಾರವಾಗಿರಬಾರದು.


ನಿಮ್ಮ ಹಬ್ಬಗಳನ್ನು ದುಃಖಕ್ಕೂ, ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು. ಎಲ್ಲರೂ ಸೊಂಟಗಳಿಗೆ ಗೋಣಿತಟ್ಟನ್ನು ಕಟ್ಟಿಕೊಂಡು, ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು. ಒಬ್ಬನೇ ಮಗನಿಗಾಗಿ ಗೋಳಾಡುವ ಸಮಯದಂತೆ ಮಾಡುವೆನು. ಅದರ ಅಂತ್ಯವು ಕಹಿಯಾದ ದಿನದಂತಿರುವುದು.


ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಸುಗಂಧ ತೈಲದಿಂದಲೂ ಆರು ತಿಂಗಳು ಸೌಂದರ್ಯವರ್ಧಕ ಸಾಧನಗಳಿಂದಲೂ ಕನ್ಯೆಯರ ಲೇಪನಕಾಲದ ಪ್ರಕಾರ ಹನ್ನೆರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇರೋಷನ ಬಳಿಗೆ ಪ್ರತಿಯೊಬ್ಬ ಕನ್ಯೆಯು ಹೋಗಲು ಅವರವರ ಸರದಿ ಬರುತ್ತಿತ್ತು.


ನಾನು ಸಹ ಇದನ್ನು ನಿಮಗೆ ಮಾಡುವೆನು: ನಿಮ್ಮ ಮೇಲೆ ಭೀತಿಯನ್ನು ಉಂಟುಮಾಡುವ, ಕಣ್ಣುಗಳನ್ನು ಕ್ಷೀಣಿಸುವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗುವಂತೆಯೂ ಮಾಡುವ ಕ್ಷಯರೋಗವನ್ನೂ ಚಳಿಜ್ವರವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ಬೀಜವನ್ನು ಬಿತ್ತುವಿರಿ. ಏಕೆಂದರೆ ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.


“ಆಕೆಯೊಂದಿಗೆ ಜಾರತ್ವ ಮಾಡಿರುವ ಭೂರಾಜರು, ಆಕೆಯ ದಹನದಿಂದ ಏರುವ ಹೊಗೆಯನ್ನು ಕಂಡಾಗೆಲ್ಲಾ ಆಕೆಗಾಗಿ ಅಳುತ್ತಾ ಗೋಳಾಡುವರು.


ಮನುಷ್ಯರು ಬಲವಾದ ಕಾವಿನಿಂದ ಕಂದಿ ಹೋದಾಗ್ಯೂ, ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದರು. ಆದರೆ ಅವರು ದೇವರಿಗೆ ಮಹಿಮೆಯನ್ನು ಸಲ್ಲಿಸುವ ಹಾಗೆ ಪಶ್ಚಾತ್ತಾಪ ಪಡಲಿಲ್ಲ.


ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”


ಯೌವನದ ಗಂಡನಿಗೋಸ್ಕರ ಗೋಣಿತಟ್ಟು ಧರಿಸಿ, ಕನ್ಯೆಯ ಹಾಗೆ ಪ್ರಲಾಪಿಸು.


ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡುವುದು. ಎಲ್ಲಾ ಮುಖಗಳ ಮೇಲೆ ನಾಚಿಕೆಯೂ, ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವುವು.


ಏಕೆಂದರೆ ಎಲ್ಲಾ ತಲೆಗಳು ಬೋಳಾಗುವುವು; ಎಲ್ಲಾ ಗಡ್ಡಗಳು ಕ್ಷೌರವಾಗುವುವು; ಎಲ್ಲಾ ಕೈಗಳ ಮೇಲೆ ಗಾಯಗಳು, ಸೊಂಟಗಳ ಮೇಲೆ ಗೋಣಿತಟ್ಟು ಇರುವುವು.


ಓ ನನ್ನ ಮಗಳೇ, ನನ್ನ ಪ್ರಜೆಗಳೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು. ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ, ಬಹು ಕಠಿಣವಾದ ಗೋಳಾಟವನ್ನು ಮಾಡು. ನಾಶ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.


ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.


ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ. ದೂರಕ್ಕೆ ನಿನ್ನ ರಾಯಭಾರಿಗಳನ್ನು ಕಳುಹಿಸಿದ್ದೀ. ಪಾತಾಳದಷ್ಟು ನೀಚಸ್ಥಿತಿಗೆ ಇಳಿದಿದ್ದೀಯೆ.


ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ. ಆಕೆಯು ನಡುಕಟ್ಟುಗಳನ್ನು ತಯಾರಿಸಿ ವರ್ತಕರಿಗೆ ಒದಗಿಸುತ್ತಾಳೆ.


ರಕ್ತಬೋಳ, ಅಗರು, ಲವಂಗ, ಚಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆಗೊಳಿಸಿದ್ದೇನೆ.


“ನಾನು ಗೋಣಿತಟ್ಟು ಹೊಲಿದು ನನ್ನ ಮೈಮೇಲೆ ಹಾಕಿಕೊಂಡಿದ್ದೇನೆ; ನನ್ನ ಗೌರವವನ್ನು ಧೂಳಿನಲ್ಲಿ ಮರೆಮಾಡಿದ್ದೇನೆ.


ಅವರು ಹಸಿವೆಯಿಂದ ಬಳಲಿ ಹೋಗುವರು, ಜ್ವಾಲೆಯಿಂದಲೂ ಕಠಿಣ ವ್ಯಾಧಿಯಿಂದಲೂ ಬೀಳುವರು. ಕಾಡುಮೃಗಗಳನ್ನೂ ಧೂಳಿನಲ್ಲಿರುವ ವಿಷಸರ್ಪಗಳನ್ನೂ ಅವರಿಗೆ ವಿರೋಧವಾಗಿ ಕಳುಹಿಸುವೆನು.


ಯೆಹೋವ ದೇವರು ಕ್ಷಯರೋಗದಿಂದಲೂ, ಚಳಿಜ್ವರದಿಂದಲೂ, ಉರಿವಾತದಿಂದಲೂ, ಉಷ್ಣಜ್ವರದಿಂದಲೂ ಕುಗ್ಗಿಸಿ, ದೇಶವನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಯಿಂದಲೂ ಬಾಧಿಸುವರು. ನೀವು ನಾಶವಾಗುವ ತನಕ ಅವು ನಿಮ್ಮನ್ನು ಹಿಂದಟ್ಟಿಬರುವವು.


“ಹೆಷ್ಬೋನೇ ಗೋಳಾಡು; ಏಕೆಂದರೆ ಆಯಿ ಎಂಬ ನಗರ ಹಾಳಾಯಿತು; ರಬ್ಬಾದ ನಿವಾಸಿಗಳೇ ಗೋಳಾಡಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆ, ಅವನ ಯಾಜಕರು, ಅವನ ಪ್ರಧಾನರು ಒಟ್ಟಾಗಿ ಸೆರೆಗೆ ಹೋಗುವರು.


ಯೆಹೋವ ದೇವರು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಪುತ್ರಿಯರ ಕಲ್ಮಷವನ್ನು ತೊಳೆದು, ಯೆರೂಸಲೇಮಿನ ಮೇಲಿನ ರಕ್ತದ ಕಲೆಗಳನ್ನು ತೆಗೆದುಹಾಕುವರು.


ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.


ದೀಬೋನ್ ಊರಿನವರು ಅಳುವುದಕ್ಕಾಗಿ ಎತ್ತರವಾದ ಪೂಜಾಸ್ಥಳಕ್ಕೆ ಹೋಗಿದ್ದಾರೆ; ನೆಬೋ ಹಾಗೂ ಮೇದೆಬ ಪಟ್ಟಣದವರಿಗಾಗಿ ಮೋವಾಬ್ಯರು ಗೋಳಾಡುತ್ತಾರೆ. ಪ್ರತಿಯೊಬ್ಬರ ತಲೆಯು ಬೋಳು, ಪ್ರತಿಯೊಬ್ಬರ ಗಡ್ಡವೂ ವಿಕಾರವಾಗಿ ಕತ್ತರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು