Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:9 - ಕನ್ನಡ ಸಮಕಾಲಿಕ ಅನುವಾದ

9 ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಸೊದೋಮಿನಂತೆ ಮರೆಮಾಡದೆ ಪ್ರಕಟ ಮಾಡುತ್ತಾರೆ. ಅವರಿಗೆ ಕಷ್ಟ! ಏಕೆಂದರೆ ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ; ತಮ್ಮ ಪಾಪವನ್ನು ಮರೆಮಾಜದೆ ಸೊದೋವಿುನವರಂತೆ ಮೆರೆಯಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನರ ಮುಖಭಾವವೇ ಅವರ ದುಷ್ಕೃತ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:9
30 ತಿಳಿವುಗಳ ಹೋಲಿಕೆ  

ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.


ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ. ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಅವಳ ಕಣ್ಣುಗಳಿಂದ ಅವರನ್ನು ನೋಡಿದಾಗ ತಕ್ಷಣವೇ ಅವರನ್ನು ಮೋಹಿಸಿದಳು. ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿದಳು.


ಕಿರೀಟವು ನಮ್ಮ ತಲೆಯ ಮೇಲಿನಿಂದ ಬಿದ್ದುಹೋಯಿತು. ಅಯ್ಯೋ, ನಾವು ಪಾಪಮಾಡಿದ್ದೇವೆ.


ಆದ್ದರಿಂದ ಮಳೆಗಳು ನಿಂತುಹೋದವು, ಹಿಂಗಾರೇ ಆಗಲಿಲ್ಲ. ವೇಶ್ಯೆಯ ನೋಟ ನಿನಗಿತ್ತು. ನಾಚುವುದನ್ನು ನಿರಾಕರಿಸಿದೆ.


ಇದಲ್ಲದೆ ಯೆಹೋವ ದೇವರು ಇಂತೆನ್ನುತ್ತಾರೆ: “ಚೀಯೋನ್ ಪುತ್ರಿಯರು ಅಹಂಕಾರಿಗಳಾಗಿದ್ದು, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ನಾಜೂಕಿನಿಂದ ಹೆಜ್ಜೆ ಇಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ;


ಅವರ ಕಣ್ಣುಗಳು ಯಾವಾಗಲೂ ಅಹಂಕಾರದಿಂದ ಕೂಡಿರುತ್ತವೆ. ಅವರ ದೃಷ್ಟಿ ಅಸಹ್ಯವಾಗಿದೆ.


ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.


ಯೇಹುವು ಇಜ್ರೆಯೇಲಿಗೆ ಬಂದನು. ಅಲ್ಲಿಗೆ ಅವನು ಬಂದಿದ್ದಾನೆಂದು ಈಜೆಬೆಲಳು ಕೇಳಿ, ಅವಳು ತನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿಕೊಂಡು, ತನ್ನ ತಲೆಯನ್ನು ಶೃಂಗರಿಸಿಕೊಂಡು, ಕಿಟಕಿಯಿಂದ ಇಣಿಕಿ ನೋಡಿದಳು.


ಸಮುಯೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ,” ಎಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ, “ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತು,” ಎಂದುಕೊಂಡನು.


“ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದದರಿಂದ ನಾಶವಾಗಿದ್ದೀ.


ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ, ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲಿಯೇ ಕಣ್ಣುಳ್ಳದ್ದಾಗಿ ಬಡಾಯಿ ಮಾತನಾಡಿದ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇದ್ದ ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನು ತಿಳಿಯಬೇಕೆಂದಿದ್ದೇನೆ.


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಗಳು ಸಾಂಕೇತಿಕವಾಗಿ ಸೊದೋಮ್ ಹಾಗೂ ಈಜಿಪ್ಟ್ ಎಂದೂ ಹೆಸರುಗಳಿರುವುದು. ಇವರ ಒಡೆಯ ಆಗಿರುವವರನ್ನು ಸಹ ಅಲ್ಲಿಯೇ ಶಿಲುಬೆಗೆ ಹಾಕಲಾಗಿತ್ತು.


ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ದೇವರು ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು. ಅವನ ಮುಖವು ಬಾಡಿತು.


ಶಿಸ್ತನ್ನು ನಿರಾಕರಿಸುವವನು, ತನಗೆ ತಾನೆ ಹಾನಿ ತಂದುಕೊಳ್ಳುತ್ತಾನೆ, ಆದರೆ ಗದರಿಕೆಗೆ ಕಿವಿಗೊಡುವವನು ವಿವೇಕವನ್ನು ಪಡೆಯುತ್ತಾನೆ.


ಸೊದೋಮಿನ ಅಧಿಪತಿಗಳೇ, ನೀವು ಯೆಹೋವ ದೇವರ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳೇ! ನಮ್ಮ ದೇವರ ನಿಯಮಕ್ಕೆ ಕಿವಿಗೊಡಿರಿ.


ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ, ಮೈಲಿಗೆಯನ್ನೂ ಕಾರುವಂಥ ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿದ್ದಾರೆ.


ಏಕೆಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ. ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ. ನಮ್ಮ ದ್ರೋಹಗಳು ನಮ್ಮ ಸಂಗಡ ಇವೆ. ನಮ್ಮ ಅಕ್ರಮಗಳನ್ನು ನಾವೇ ಬಲ್ಲೆವು.


ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.


“ ‘ನೀನು ನಾಚಿಕೆಯಿಲ್ಲದ ವೇಶ್ಯೆಯಂತೆ ವರ್ತಿಸಿದಾಗ ನಾನು ಕೋಪದಿಂದ ತುಂಬಿದೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.


ಮರುದಿನ ಹಿರಿಯವಳು ಚಿಕ್ಕವಳಿಗೆ, “ಕಳೆದ ರಾತ್ರಿ ತಂದೆಯ ಸಂಗಡ ನಾನು ಮಲಗಿಕೊಂಡೆನು. ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ, ನೀನು ಹೋಗಿ ಅವನ ಸಂಗಡ ಮಲಗಿಕೋ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.


ಇಸ್ರಾಯೇಲಿನ ಗರ್ವವು ಅವರ ಮುಖದ ಮುಂದೆ ಸಾಕ್ಷಿಕೊಡುತ್ತದೆ. ಇಸ್ರಾಯೇಲು ಮತ್ತು ಎಫ್ರಾಯೀಮು ತಮ್ಮ ಪಾಪದಲ್ಲಿ ಎಡವಿ ಬೀಳುವವು. ಯೆಹೂದವು ಸಹ ಅವರೊಂದಿಗೆ ಬೀಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು