Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:12 - ಕನ್ನಡ ಸಮಕಾಲಿಕ ಅನುವಾದ

12 ಆದಕಾರಣ ಇಸ್ರಾಯೇಲರ ಪರಿಶುದ್ಧನು ಹೇಳುವುದೇನೆಂದರೆ, “ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲಾತ್ಕಾರ, ಕುಯುಕ್ತಿಗಳನ್ನು ನಂಬಿ, ಅವುಗಳನ್ನೇ ಆಧಾರ ಮಾಡಿಕೊಂಡದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದಕಾರಣ, ಇಸ್ರಯೇಲಿನ ಪರಮಪಾವನ ಸ್ವಾಮಿ ಹೀಗೆನ್ನುತ್ತಾರೆ : “ನೀವು ನನ್ನ ಮಾತನ್ನು ತಿರಸ್ಕರಿಸಿ ಹಿಂಸೆ ಕುತಂತ್ರಗಳನ್ನೇ ನೆಚ್ಚಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದಕಾರಣ ಇಸ್ರಾಯೇಲ್ಯರ ಸದಮಲಸ್ವಾವಿುಯು ಹೀಗನ್ನುತ್ತಾನೆ - ನೀವು ಈ ಮಾತನ್ನು ಅಸಡ್ಡೆಮಾಡಿ ಬಲಾತ್ಕಾರಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಸ್ರೇಲಿನ ಪರಿಶುದ್ಧನು ಹೇಳುವುದೇನೆಂದರೆ, “ಯೆಹೋವನಿಂದ ಬರುವ ಸಂದೇಶವನ್ನು ಅಂಗೀಕರಿಸಲು ನೀವು ನಿರಾಕರಿಸುತ್ತೀರಿ. ನೀವು ನಿಮ್ಮ ಯುದ್ಧಗಳಿಂದಲೂ ಸುಳ್ಳಾಡುವದರಿಂದಲೂ ನಿಮಗೆ ಸಹಾಯ ಸಿಗುವದೆಂದು ಭರವಸೆಯಿಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:12
23 ತಿಳಿವುಗಳ ಹೋಲಿಕೆ  

ಏಕೆಂದರೆ ಅವರು ಸೇನಾಧೀಶ್ವರ ಯೆಹೋವ ದೇವರ ನಿಯಮವನ್ನು ನಿರಾಕರಿಸಿದ್ದರಿಂದಲೂ, ಇಸ್ರಾಯೇಲಿನ ಪರಿಶುದ್ಧರ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿ ಬಿಡುವ ಹಾಗೆಯೂ, ಜ್ವಾಲೆಯು ಒಣಹುಲ್ಲನ್ನು ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆಯುವಂತೆಯೂ, ಚಿಗುರು ಅದರ ಧೂಳಿನಂತೆಯೂ ಏರಿ ಹೋಗುವುವು.


ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದದವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಯೆಹೋವ ದೇವರ ನಿಯಮವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳು ದೇವರುಗಳೇ, ಇವರನ್ನು ದಾರಿ ತಪ್ಪುವವರನ್ನಾಗಿ ಮಾಡಿವೆ.


ಏಕೆಂದರೆ ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆ ಇಟ್ಟು, ‘ನನ್ನನ್ನು ಯಾರೂ ನೋಡುವುದಿಲ್ಲ’ ಎಂದು ಹೇಳಿದೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ದಾರಿ ತಪ್ಪಿಸಿದ್ದರಿಂದ, ನಿನ್ನ ಹೃದಯದಲ್ಲಿ: ‘ಈಗ ಇರುವವಳು ನಾನೇ. ನನ್ನ ಹೊರತು ಇನ್ನು ಯಾರೂ ಇಲ್ಲ,’ ಎಂದುಕೊಂಡೆ.


“ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು.


ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನನ್ನನ್ನು ಮರೆತುಬಿಟ್ಟು, ಸುಳ್ಳು ದೇವರುಗಳಲ್ಲಿ ಭರವಸೆಯಿಟ್ಟಿದ್ದೀಯೇ.


ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ. ಆದ್ದರಿಂದ ನಾನು ಅವಳಿಗೆ ಇದನ್ನು ಕುರಿತು ಅವರ ಬಲವು ನಿಂತು ಹೋಗಿದೆ ಎಂದು ನಾನು ಕೂಗಿದ್ದೇನೆ.


“ದ್ರೋಹಿಗಳಾದ ಮಕ್ಕಳಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಆಲೋಚನೆಯನ್ನು ಮಾಡುತ್ತಾರೆ ಆದರೆ ನನ್ನಿಂದಲ್ಲ. ನನ್ನ ಆತ್ಮ ಪ್ರೇರಿತರಾಗದೆ ಉಪಾಯಗಳನ್ನು ಮಾಡುತ್ತಾರೆ, ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.


“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ?


ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.


ಅನ್ಯಾಯದ ಸುಲಿಗೆಯಲ್ಲಿ ಭರವಸೆ ಇಡಬೇಡಿರಿ. ಸೂರೆಮಾಡಿದ್ದರಲ್ಲಿ ಗರ್ವಪಡಬೇಡಿರಿ. ಆಸ್ತಿಯು ಹೆಚ್ಚಾದರೆ ಅದರ ಮೇಲೆ ಮನಸ್ಸಿಡಬೇಡಿರಿ.


“ಇಗೋ, ದೇವರನ್ನು ತನ್ನ ಬಲವನ್ನಾಗಿ ಮಾಡಿಕೊಳ್ಳದೆ, ತನ್ನ ಅಧಿಕ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡು ಇತರರನ್ನು ನಾಶಮಾಡಿದ ಮನುಷ್ಯನು ಇವನೇ!”


ಏಕೆಂದರೆ ಅವರ ಹೃದಯವು ಹಿಂಸೆಯನ್ನು ಯೋಜಿಸುತ್ತದೆ; ಅವರ ತುಟಿಗಳು ಹಾನಿಯನ್ನು ಪ್ರಸ್ತಾಪಿಸುತ್ತವೆ.


ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.


ನೀವು ನನ್ನ ಪ್ರಜೆಯನ್ನು ಹೊಡೆದು, ಚೂರುಗಳನ್ನಾಗಿ ಮಾಡಿ, ಬಡವರ ಮುಖಗಳನ್ನು ಹಿಂಡುವುದರ ಅರ್ಥವೇನು?” ಎಂದು ಸರ್ವಶಕ್ತ ದೇವರಾದ ಯೆಹೋವ ದೇವರು ವಾದಿಸುತ್ತಾರೆ.


ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.”


“ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ ರೆಮಲ್ಯನ ಮಗನನ್ನೂ ನೆಚ್ಚಿಕೊಂಡು ಮೆರೆದಿದ್ದರಿಂದ,


ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.


ನೀತಿಗೋಸ್ಕರ ಕರೆಯುವವನು ಯಾವನೂ ಇಲ್ಲ, ಸತ್ಯಕ್ಕೋಸ್ಕರ ನ್ಯಾಯ ವಿಚಾರಿಸುವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡುತ್ತಾರೆ. ಸುಳ್ಳನ್ನು ಮಾತನಾಡುತ್ತಾರೆ. ಕೇಡನ್ನು ಗರ್ಭಧರಿಸಿ, ಅಕ್ರಮವನ್ನು ಹೆರುತ್ತಾರೆ.


ದ್ರೋಹಮಾಡಿದ್ದೇವೆ, ಯೆಹೋವ ದೇವರಿಗೆ ಸುಳ್ಳಾಡಿದ್ದೇವೆ. ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ. ಬಲಾತ್ಕಾರದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತನಾಡಿದ್ದೇವೆ. ಸುಳ್ಳು ಮಾತುಗಳಿಂದ ಬಸುರಾಗಿ ಅವುಗಳನ್ನು ಹೃದಯದಿಂದ ನುಡಿದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು