Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:13 - ಕನ್ನಡ ಸಮಕಾಲಿಕ ಅನುವಾದ

13 ಎತ್ತರವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿ ಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಎತ್ತರವಾದ ಗೋಡೆಯ ಒಂದು ಭಾಗವು ಬೊಗ್ಗುತ್ತಾ ತಟ್ಟನೆ ಕ್ಷಣ ಮಾತ್ರದಲ್ಲಿ ಕವಚಿಕೊಳ್ಳುವ ಹಾಗೆ ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ತಪ್ಪಿತಸ್ಥರಾಗಿದ್ದೀರಿ. ನೀವು ಬಿರುಕು ಬಿಟ್ಟಿರುವ ಎತ್ತರದ ಗೋಡೆಯಂತಿದ್ದೀರಿ. ಆ ಗೋಡೆಯು ಇದ್ದಕ್ಕಿದ್ದಂತೆ ನೆಲಕ್ಕುರುಳಿ ಚೂರುಚೂರಾಗುವದು. ಒಳ್ಳೆಯ ಸಮಯವು ಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:13
19 ತಿಳಿವುಗಳ ಹೋಲಿಕೆ  

ಅದೂ ಅಲ್ಲದೆ ನಿನ್ನ ವೈರಿಗಳ ಗುಂಪು ಸೂಕ್ಷ್ಮವಾದ ಧೂಳಿನಂತಾಗುವುದು. ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರುವುದು. ಹೌದು, ಅದು ಕ್ಷಣಮಾತ್ರದಲ್ಲಿ ಫಕ್ಕನೆ ಆಗುವುದು.


ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.


ಹಾನಿಮಾಡುವವರೇ, ಎಷ್ಟರವರೆಗೆ ನೀವು ದಾಳಿಮಾಡುವಿರಿ. ಬಾಗುವ ಗೋಡೆಯಂತೆಯೂ, ಅಲ್ಲಾಡುವ ಬೇಲಿಯಂತೆಯೂ ನನ್ನನ್ನು ಕೆಡವಲು ಯತ್ನಿಸುವಿರಾ?


ಮಿಕ್ಕಾದವರು ಅಫೇಕೆಂಬ ಪಟ್ಟಣದೊಳಗೆ ಓಡಿಹೋದರು. ಅಲ್ಲಿ ಒಂದು ಗೋಡೆ ಉಳಿದುಕೊಂಡವರಲ್ಲಿ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿದ್ದಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.


ಆದರೆ ನನ್ನ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದೆ ಇರುವವರು, ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೆ ಕಟ್ಟಿದವರಿಗೆ ಹೋಲಿಕೆಯಾಗಿದ್ದಾರೆ. ಪ್ರವಾಹವು ಆ ಮನೆಗೆ ಅಪ್ಪಳಿಸಿದಾಗ, ಕೂಡಲೇ ಅದು ಕುಸಿದು ಬಿತ್ತು. ಹೀಗೆ ಆ ಮನೆಯು ಸರ್ವನಾಶವಾಯಿತು.”


ಮಳೆಯು ಸುರಿದು, ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆಗ ಆ ಮನೆ ಕುಸಿದು ಬಿತ್ತು. ಅದರ ಬೀಳುವಿಕೆಯು ಭಯಂಕರವಾಗಿತ್ತು,” ಎಂದರು.


ಯಾರೂ ನಿನ್ನನ್ನು ಸಂಪತ್ತಿನಿಂದ ಆಕರ್ಷಿಸದಂತೆ ಜಾಗರೂಕನಾಗಿರು; ದೊಡ್ಡ ಲಂಚತನವು ನಿನ್ನನ್ನು ವಂಚಿಸಬಾರದು.


ಅವರು ನನ್ನನ್ನು ಉನ್ನತ ಸ್ಥಾನದಿಂದ ದಬ್ಬುವುದಕ್ಕೆ ಆಲೋಚಿಸುತ್ತಿದ್ದಾರೆ. ಅವರು ಸುಳ್ಳನ್ನು ಇಷ್ಟಪಡುತ್ತಾರೆ; ತಮ್ಮ ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುತ್ತಾರೆ.


ಆದ್ದರಿಂದ ಅವನಿಗೆ ವಿಪತ್ತು ಬೇಗ ಬರುವುದು; ಯಾವ ಪರಿಹಾರವಿಲ್ಲದೆ ಅವನು ತಟ್ಟನೆ ನಾಶವಾಗುವನು.


ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದು ಏನೆಂದರೆ: “ನಿಶ್ಚಯವಾಗಿ ಈ ದುಷ್ಕೃತ್ಯಗಳನ್ನು ನೀವು ಸಾಯುವ ತನಕ ಮನ್ನಿಸುವುದೇ ಇಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳಿದ್ದಾರೆ.


ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.


ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.


ಆದ್ದರಿಂದ ನಿನ್ನ ಮಂತ್ರಕ್ಕೂ ಮೀರಿದ ಕೇಡು ನಿನ್ನ ಮೇಲೆ ಬರುವುದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನಿನಗೆ ತಿಳಿಯದ ನಾಶನವು ಫಕ್ಕನೆ ನಿನ್ನ ಮೇಲೆ ಬರುವುದು.”


ಪೂರ್ವಕಾಲದಲ್ಲೇ ಹಳೆಯ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತಿಳಿಸಿದ್ದೇನೆ. ನಾನು ತಟ್ಟನೆ ನಡೆಸಲು, ಅವು ನೆರವೇರಿದವು.


ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು. ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳನ್ನು ನೀನು ಎಬ್ಬಿಸುವೆ. ಬಿದ್ದ ಗೋಡೆಯನ್ನು ಎಬ್ಬಿಸುವ ದೇಶ ಎಂದೂ, ನಿವಾಸಿಗಳಿಗಾಗಿ ನಡೆದಾಡಲು ಹಾದಿಗಳನ್ನು ಉಂಟುಮಾಡುವ ದೇಶ ಎಂದೂ ನಿನಗೆ ಬಿರುದು ಬರುವುದು.


ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು, ಗುಡ್ಡಗಳ ಮೇಲೆ ನನ್ನನ್ನು ಪರಿಹಾಸ್ಯ ಮಾಡಿದರಲ್ಲಾ. ಹೀಗಿರುವುದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಮಡಿಲಲ್ಲಿ ಅಳೆದು ಸುರಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು