Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:15 - ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ಇಸ್ರಾಯೇಲಿನ ಪರಿಶುದ್ಧನಾದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು. ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ : “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲ್ಯರ ಸದಮಲಸ್ವಾವಿುಯಾಗಿರುವ ಕರ್ತನಾದ ಯೆಹೋವನು - ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವದು; ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಒಡೆಯನೂ ದೇವರೂ ಇಸ್ರೇಲಿನ ಪರಿಶುದ್ಧನೂ ಹೇಳುವುದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.” ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:15
26 ತಿಳಿವುಗಳ ಹೋಲಿಕೆ  

ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಆದರೂ ನೀವು ಜೀವವನ್ನು ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಇಷ್ಟವಿಲ್ಲ.


ಇವರು ಅವರಿಗೆ ವಿರೋಧವಾಗಿ ಸಹಾಯ ಹೊಂದಿದ್ದರಿಂದ, ಹಗ್ರೀಯರೂ, ಅವರ ಸಂಗಡ ಕೂಡಿದ್ದವರೆಲ್ಲರೂ ಇವರ ಕೈವಶವಾದರು. ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು, ಅವರಲ್ಲಿ ಭರವಸೆ ಇಟ್ಟಿದ್ದರಿಂದ, ದೇವರು ಅವರ ಮನವಿಯನ್ನು ಕೇಳಿದರು.


ಕೂಷನವರೂ, ಲಿಬಿಯದವರೂ ಮಹಾ ಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ, ರಾಹುತರೂ ಇದ್ದರಲ್ಲವೇ? ಆಗ ನೀನು ಯೆಹೋವ ದೇವರನ್ನು ಆತುಕೊಂಡದ್ದರಿಂದ ದೇವರು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದರು.


ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.


ಅವನಿಗೆ, ಈ ಪ್ರಕಾರ ಹೇಳಬೇಕು: ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರು, ಮತ್ತು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ. ಆದ್ದರಿಂದ ನಾನು ಅವಳಿಗೆ ಇದನ್ನು ಕುರಿತು ಅವರ ಬಲವು ನಿಂತು ಹೋಗಿದೆ ಎಂದು ನಾನು ಕೂಗಿದ್ದೇನೆ.


ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ಆದರೆ ಅವರು ಬರಲು ಒಪ್ಪಲಿಲ್ಲ.


‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.


“ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗದಿಂದ ತೊಲಗಿರಿ. ಇಸ್ರಾಯೇಲರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ,” ಎಂದು ಹೇಳುತ್ತಾರೆ.


ಯೆಹೋವ ದೇವರು ನಿಮಗೋಸ್ಕರ ಯುದ್ಧಮಾಡುವರು, ಆದರೆ ನೀವು ವಿಶ್ರಾಂತಿಯಿಂದಿರಿ,” ಎಂದನು.


ನನ್ನ ಮನವೇ, ನೀನು ವಿಶ್ರಾಂತಿಯಿಂದಿರು; ಏಕೆಂದರೆ ಯೆಹೋವ ದೇವರು ನಿನಗೆ ಉಪಕಾರಿಯಾಗಿದ್ದಾರೆ.


ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ. ನಿಮಗೆ ಅನುಕೂಲವಾದ ಉಪಶಮನ ಇದೇ,” ಎಂದು ಹೇಳಿದಾಗಲೂ ಅವರು ಕೇಳಲಿಲ್ಲ.


ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ, ಭದ್ರವಾದ ಸ್ಥಳಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪಮಾಡಿದೆವು? ಅದು ಯೆಹೋವ ದೇವರಿಗೆ ವಿರೋಧವಾಗಿಯಲ್ಲವೇ. ಏಕೆಂದರೆ ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ನಿಯಮಕ್ಕೆ ಅವಿಧೇಯರಾದರು.


“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು