Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:16 - ಕನ್ನಡ ಸಮಕಾಲಿಕ ಅನುವಾದ

16 ಆದರೆ ನೀವು, ‘ಬೇಡವೇ ಬೇಡ. ಏಕೆಂದರೆ ನಾವು ಕುದುರೆಗಳ ಮೇಲೆ ಓಡುವೆವು,’ ಎಂದುಕೊಂಡಿದ್ದರಿಂದ ನೀವು ಓಡಿಹೋಗುವಿರಿ, ನಾವು ವೇಗವಾಗಿ ಸವಾರಿ ಮಾಡುವೆವು, ಎಂದುಕೊಂಡಿದ್ದರಿಂದ ಆ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬದಲಿಗೆ, “ಬೇಡ ಬೇಡ, ನಾವು ಕುದುರೆಗಳ ಮೇಲೆ ಓಡಿಹೋಗುತ್ತೇವೆ,” ಎಂದುಕೊಂಡಿರಿ. ಅಂತೆಯೇ ಓಡಿಹೋಗುವಿರಿ.” ನಾವು ದೌಡೋಡುವ ಕುದುರೆಗಳ ಮೇಲೆ ಸವಾರಿಮಾಡುತ್ತೇವೆ,” ಎಂದುಕೊಂಡಿರಿ. ಅಂತೆಯೇ ದೌಡೋಡುವವರೇ ನಿಮ್ಮನ್ನು ಅಟ್ಟಿಕೊಂಡುಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು - ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು ಎಂದುಕೊಂಡದರಿಂದ ಓಡೇ ಹೋಗುವಿರಿ; ನೀವು - ವೇಗವಾಗಿ ಸವಾರಿಮಾಡುವೆವು ಎಂದುಕೊಂಡದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿ ಬಿಡುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವು, “ನಮಗೆ ಸಹಾಯ ಬೇಡ. ಓಡಿಹೋಗಲು ಕುದುರೆಗಳು ಬೇಕು” ಎಂದು ಹೇಳುವಿರಿ. ಅದು ಸರಿಯಾದ ಮಾತು. ನೀವು ಕುದುರೆಗಳ ಮೂಲಕವೇ ಓಡುವಿರಿ. ಆದರೆ ಶತ್ರುಗಳು ನಿಮ್ಮನ್ನು ಹಿಂದಟ್ಟುವರು. ಅವರು ನಿಮ್ಮ ಕುದುರೆಗಳಿಗಿಂತ ವೇಗಶಾಲಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:16
20 ತಿಳಿವುಗಳ ಹೋಲಿಕೆ  

ಸಹಾಯಕ್ಕಾಗಿ ಈಜಿಪ್ಟನ್ನು ಸೇರಿ, ಅಶ್ವಬಲವನ್ನು, ಆಶ್ರಯಿಸುವವರಿಗೆ ಕಷ್ಟ! ಏಕೆಂದರೆ ರಥಗಳು ಬಹಳವೆಂದೂ, ಅವರ ನಂಬಿಕೆಯು ರಥಗಳ ಮೇಲೆ ಏಕೆಂದರೆ ಅವರು ಅನೇಕರು, ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವುದಿಲ್ಲ. ಇಲ್ಲವೆ ಯೆಹೋವ ದೇವರಿಂದ ಸಹಾಯವನ್ನು ಬಯಸುವುದಿಲ್ಲ.


ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿಯೂ, ಸಂಜೆಯ ತೋಳಗಳಿಗಿಂತ ಚುರುಕಾಗಿಯೂ ಇವೆ. ಅವರ ಅಶ್ವಸೈನ್ಯ ಎರಗುವುದು. ಅವರ ಕುದುರೆ ಸವಾರರು ದೂರದಿಂದ ಬರುವರು; ನುಂಗುವುದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿ ಬರುವರು.


ಲಾಕೀಷಿನ ನಿವಾಸಿಗಳೇ, ಕುದುರೆಗಳನ್ನು ರಥಕ್ಕೆ ಕಟ್ಟಿರಿ, ಚೀಯೋನ್ ಮಗಳ ಪಾಪವು ನಿನ್ನಿಂದ ಪ್ರಾರಂಭವಾಯಿತು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿ ಬಂದವು.


ಕರ್ತದೇವರು ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ನಾನು ಕಂಡೆನು. ಅವರು ಹೇಳಿದ್ದೇನೆಂದರೆ: “ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು, ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದುಬಿಡು. ಅವರಲ್ಲಿ ಉಳಿದವರನ್ನು ಖಡ್ಗದಿಂದ ಕೊಲ್ಲುವೆನು. ಅವರಲ್ಲಿ ಓಡಿಹೋಗುವವನು ಓಡಿಹೋಗಲಾಗುವುದಿಲ್ಲ.


ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರವಾಗಿದ್ದಾರೆ. ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ, ಅರಣ್ಯದಲ್ಲಿ ಹೊಂಚು ಹಾಕಿದರು.


ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ಇಗೋ, ಮೇಘಗಳ ಹಾಗೆ ಏರಿ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವುವು. ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮ್ಮ ಗತಿಯನ್ನು ಏನು ಹೇಳೋಣ, ಏಕೆಂದರೆ ಹಾಳಾದೆವು.


ಕುದುರೆಯ ಶಕ್ತಿಯಲ್ಲಿ ಅವರಿಗೆ ಇಷ್ಟವಿಲ್ಲ; ಶೂರನ ಕಾಲ್ಬಲವನ್ನು ಮೆಚ್ಚುವುದಿಲ್ಲ.


ಬಿಡುಗಡೆಗೆ ಕುದುರೆಯ ಬಲ ವ್ಯರ್ಥವಾಗಿದೆ; ಅದಕ್ಕೆ ಮಹಾಶಕ್ತಿ ಇದ್ದರೂ ಅದು ರಕ್ಷಿಸಲಾರದು.


ಯೆಹೋವ ದೇವರು ದೂರದಿಂದ ಅಂದರೆ, ಭೂಮಿಯ ಕೊನೆಯಿಂದ ರಣಹದ್ದು ಹೇಗೆ ಹಾರಿಬರುವುದೋ ಹಾಗೆಯೇ, ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವನ್ನು ನಿಮ್ಮ ಮೇಲೆ ಬರುವಂತೆ ಮಾಡುವರು.


ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.


ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಅವನನ್ನು ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.


ಅವರ ದೇಶವು ಬೆಳ್ಳಿ ಬಂಗಾರಗಳಿಂದ ತುಂಬಿದೆ. ಅವರ ಬೊಕ್ಕಸಗಳಿಗೆ ಮಿತಿಯಿಲ್ಲ. ಅವರ ದೇಶವು ಕುದುರೆಗಳಿಂದ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.


ಇವರನ್ನು ನೋಡಿ ಯೆಹೂದದ ಅರಸನಾದ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


“ವೇಗಶಾಲಿಗಳು ಓಡಿ ಹೋಗದಿರಲಿ; ಪರಾಕ್ರಮಶಾಲಿಯು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿಬೀಳುವರು.


ಅದರ ಶಕ್ತಿ ಹೆಚ್ಚಾಗಿರುವುದರಿಂದ ನೀನು ಕೆಲಸಕ್ಕಾಗಿ ಅದನ್ನೇ ನಂಬಿರುವೆಯಾ? ನಿನ್ನ ಭಾರವಾದ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು