Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:19 - ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ, ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳಬೇಕಾಗಿಲ್ಲ. ನೀವು ಕೂಗಿ ದುಃಖಿಸಿದ ಶಬ್ದವನ್ನು ದೇವರು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವರು. ದೇವರು ನಿಮ್ಮ ಸ್ವರವನ್ನು ಕೇಳಿದ ಕೂಡಲೇ ಸದುತ್ತರವನ್ನು ದಯಪಾಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆರೂಸಲೇವಿುನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವದೇ ಇಲ್ಲ; ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಚೀಯೋನ್ ಪರ್ವತದಲ್ಲಿರುವ ಜೆರುಸಲೇಮಿನಲ್ಲಿ ಯೆಹೋವನ ಜನರು ವಾಸಿಸುವರು. ನೀವು ಇನ್ನು ಮೇಲೆ ಅಳುವದಿಲ್ಲ. ಯೆಹೋವನು ನಿಮ್ಮ ಅಳುವಿಕೆಯನ್ನು ನೋಡಿ ನಿಮ್ಮನ್ನು ಆದರಿಸುವನು. ಆತನು ನಿಮ್ಮ ಮೊರೆಯನ್ನು ಕೇಳಿ ನಿಮಗೆ ಸಹಾಯಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:19
42 ತಿಳಿವುಗಳ ಹೋಲಿಕೆ  

ನಿನ್ನ ಸೂರ್ಯನು ಅಸ್ತಮಿಸುವುದಿಲ್ಲ. ನಿನ್ನ ಚಂದ್ರನು ಕಾಣದೆ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನೀನು ದುಃಖಿಸುವ ದಿನಗಳು ಸಮಾಪ್ತಿಯಾಗುವುದು.


ಅವರು ಕರೆಯುವುದಕ್ಕಿಂತ ಮುಂಚೆ ನಾನು ಉತ್ತರಕೊಡುವೆನು. ಅವರು ಇನ್ನೂ ಮಾತನಾಡುತ್ತಿರುವಾಗಲೇ ನಾನು ಕೇಳುವೆನು.


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ಆಗ ನೀನು ಕರೆದರೆ ಯೆಹೋವ ದೇವರು ಉತ್ತರಕೊಡುವರು. ನೀನು ಕೂಗುವೆ, ಆಗ ಅವರು, ‘ನಾನು ಇಲ್ಲಿ ಇದ್ದೇನೆ,’ ಅನ್ನುವರು. “ನೀನು ನಿನ್ನ ಮಧ್ಯದೊಳಗಿಂದ ದಬ್ಬಾಳಿಕೆಯ ನೊಗವನ್ನೂ, ಬೆರಳ ಸನ್ನೆಯನ್ನೂ, ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,


ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ಈಗ ಹಸಿದವರಾದ ನೀವು ಧನ್ಯರು, ನೀವು ತೃಪ್ತಿಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು, ನೀವು ನಗುವಿರಿ.


ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’


ಯಾಕೋಬಿನೊಳಗಿಂದ ಒಂದು ಸಂತಾನವನ್ನೂ, ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನು ಹೊರಗೆ ಬರಮಾಡುವೆನು. ನಾನು ಆಯ್ದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು. ನನ್ನ ಸೇವಕರು ಅದರಲ್ಲಿ ವಾಸವಾಗುವರು.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.


ಆಗ ಸುರುಳಿಯನ್ನು ಬಿಚ್ಚುವುದಕ್ಕಾಗಲಿ, ಅದರಲ್ಲಿ ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು.


ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ


ಹೀಗೆ ಪವಿತ್ರ ವೇದದಲ್ಲಿ ಬರೆದಿರುವಂತೆ, ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು: “ವಿಮೋಚಿಸುವವರು ಒಬ್ಬರು ಚೀಯೋನಿನಿಂದ ಬರುತ್ತಾರೆ, ಅವರು ಯಾಕೋಬನ ಸಂತತಿಯಲ್ಲಿ ದೇವರನ್ನು ಅಲ್ಲಗಳೆಯುವ ಸ್ವಭಾವನ್ನು ತಾವೇ ತೆಗೆದುಹಾಕುವರು.


ಈಗ ಏಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಅಧಿಕಾರಿಯು ನಾಶವಾದನೋ? ಹೆರುವವಳಂತೆ ನಿನಗೆ ವೇದನೆ ಬಂದಿರುವುದೋ?


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇನ್ನೊಂದು ವಿಷಯದಲ್ಲಿ, ಇಸ್ರಾಯೇಲರ ಮತ್ತೊಂದು ಕೋರಿಕೆಯನ್ನು ಆಲಿಸಿ ನೆರವೇರಿಸುವೆನು. ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.


ಅವರು ಚೀಯೋನಿನಲ್ಲಿ ನಮ್ಮ ದೇವರಾದ ಯೆಹೋವ ದೇವರ ಪ್ರತಿದಂಡನೆಯನ್ನೂ, ಆತನ ಆಲಯದ ಪ್ರತಿದಂಡನೆಯನ್ನೂ ತಿಳಿಸುತ್ತಾ, ಬಾಬಿಲೋನಿನ ದೇಶದಿಂದ ತಪ್ಪಿಸಿಕೊಂಡು ಓಡಿ ಹೋಗುವವರ ಸ್ವರವನ್ನು ಕೇಳಿರಿ.


ಒಂದು ದಿನ ಬರುವದು, ಆಗ ಎಫ್ರಾಯೀಮನ ಪರ್ವತಗಳ ಮೇಲಿರುವ ಕಾವಲುಗಾರರು, ‘ಏಳಿರಿ, ಚೀಯೋನಿಗೆ, ನಮ್ಮ ಯೆಹೋವ ದೇವರ ಬಳಿಗೆ ಹೋಗೋಣ,’ ” ಎಂದು ಕೂಗುವರು.


“ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಿನ್ನ ಗಾಯವು ಗುಣವಾಗದಂಥಾದ್ದು. ನಿನ್ನ ಬಾಸುಂಡೆಯು ಅಘೋರವಾದದ್ದು.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರಂತೆ ನಿಮ್ಮನ್ನು ಕೋಲಿನಿಂದ ಹೊಡೆದು, ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಸ್ಸೀರಿಯದವರಿಗೆ ಭಯಪಡಬೇಡಿರಿ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.


“ ‘ಯೆಹೋವ ದೇವರು ನಮ್ಮ ನೀತಿಯನ್ನು ಹೊರಗೆ ತಂದಿದ್ದಾರೆ; ಬನ್ನಿ, ನಮ್ಮ ದೇವರಾದ ಯೆಹೋವ ದೇವರ ಕ್ರಿಯೆಯನ್ನು ಚೀಯೋನಿನಲ್ಲಿ ಸಾರಿ ಹೇಳೋಣ.’


ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಆದರೆ ನಾನು ಸೃಷ್ಟಿಸುವುದರ ವಿಷಯದಲ್ಲಿ ಸಂತೋಷಿಸಿ, ಎಂದೆಂದಿಗೂ ಉಲ್ಲಾಸಪಡಿರಿ. ಏಕೆಂದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸವನ್ನೂ, ನನ್ನ ಜನರಲ್ಲಿ ಸಂತೋಷವನ್ನೂ ಸೃಷ್ಟಿಸುತ್ತೇನೆ.


ಯೆಹೋವ ದೇವರೇ, ನಮ್ಮ ಕಡೆಗೆ ಕೃಪೆ ತೋರಿಸಿರಿ. ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.


ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ, ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ, ಯೆಹೋವನಾದ ನಾನೇ ಅವರಿಗೆ ಉತ್ತರಕೊಡುವೆನು. ಇಸ್ರಾಯೇಲ್ ದೇವರಾಗಿರುವ ನಾನು ಅವರನ್ನು ಕೈಬಿಡೆನು.


ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷ ಪಡುವೆನು. ಅದರಲ್ಲಿ ಅಳುವ ಧ್ವನಿಯೂ, ಪ್ರಲಾಪದ ಧ್ವನಿಯೂ ಇನ್ನು ಕೇಳಿಬರುವುದಿಲ್ಲ.


ಯೆಹೋವ ದೇವರು ಇಂತೆನ್ನುತ್ತಾರೆ: “ನಿನ್ನ ಧ್ವನಿಯು ಗೋಳಾಡದಿರಲಿ; ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು