ಯೆಶಾಯ 30:20 - ಕನ್ನಡ ಸಮಕಾಲಿಕ ಅನುವಾದ20 ಕರ್ತದೇವರು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ, ಇನ್ನೂ ನಿಮ್ಮ ಬೋಧಕರು ನಮಗೆ ಮರೆಯಾಗಿ ಇರುವುದಿಲ್ಲ. ಆದರೆ ನಿನ್ನ ಕಣ್ಣುಗಳು ನಿಮ್ಮ ಬೋಧಕರನ್ನು ನೋಡುತ್ತಿರುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕರ್ತನು ಕಷ್ಟವನ್ನೂ ಶ್ರಮವನ್ನೂ ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಹಿಂದಿನ ದಿವಸಗಳಲ್ಲಿ ನನ್ನ ಒಡೆಯನು ನಿಮಗೆ ದುಃಖವನ್ನೂ ಬೇನೆಯನ್ನೂ ಕೊಟ್ಟನು. ಅದು ನಿಮಗೆ ದಿನನಿತ್ಯ ತಿನ್ನುವಂಥ ರೊಟ್ಟಿಯಂತೆಯೂ ನೀರಿನಂತೆಯೂ ಇತ್ತು. ಆದರೆ ನಿಮ್ಮ ಬೋಧಕನಾದ ದೇವರು ನಿಮ್ಮಿಂದ ಎಂದಿಗೂ ಅಡಗಿಕೊಂಡಿರಲಾರನು. ನಿಮ್ಮ ಬೋಧಕನನ್ನು ನೀವು ಕಣ್ಣಾರೆ ಕಾಣುವಿರಿ. ಅಧ್ಯಾಯವನ್ನು ನೋಡಿ |