Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:22 - ಕನ್ನಡ ಸಮಕಾಲಿಕ ಅನುವಾದ

22 ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ ಎರಕದ ನಿಮ್ಮ ಬೊಂಬೆಗಳ ಬಂಗಾರದ ಮುಲಾಮನ್ನೂ ನೀವು ಹೊಲಸು ಮಾಡಿ ಆ ವಿಗ್ರಹಗಳನ್ನು - ತೊಲಗಿ ಎಂದು ಹೊಲೆಯಂತೆ ಬಿಸಾಟುಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:22
24 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ನಿಮ್ಮ ಸ್ವಂತ ಕೈಗಳು ಪಾಪಕ್ಕೋಸ್ಕರ ಮಾಡಿದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.


“ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.


ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆ ಮಾಡುವರು.


ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”


ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾಗಿರುವ ಸ್ತ್ರೀಯನ್ನು ಸಮೀಪಿಸದೆ,


ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ. ಅವಳನ್ನು ಆದರಿಸುವವನು ಒಬ್ಬನೂ ಇಲ್ಲ. ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ. ಯೆರೂಸಲೇಮ್ ಅವರ ಮಧ್ಯದಲ್ಲಿ ಅಶುದ್ಧ ವಸ್ತುವಿನಂತಿದೆ.


ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.


ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.


ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ. ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.


“ ‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.


“ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ.


ಆದ್ದರಿಂದ ಅವನು ಆ ಉಡುಪುಗಳನ್ನು ಅಂದರೆ ಅದು ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಎಲ್ಲಿ ಬೂಜಿದೆಯೋ ಅದನ್ನು ಸುಡಬೇಕು. ಏಕೆಂದರೆ ಅದು ನಾಶಕರವಾದ ಬೂಜುರೋಗವಾಗಿದೆ. ಅದನ್ನು ಬೆಂಕಿಯಿಂದ ಸುಡಬೇಕು.


ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ಅವುಗಳ ಮೇಲಿರುವ ಬೆಳ್ಳಿಬಂಗಾರವನ್ನು ಆಶಿಸಿ ನೀವು ತೆಗೆದುಕೊಳ್ಳಬಾರದು. ಅದು ನಿಮಗೆ ಉರುಲಾದೀತು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.


ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು