Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:23 - ಕನ್ನಡ ಸಮಕಾಲಿಕ ಅನುವಾದ

23 ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ನೀವು ಹೊಲದಲ್ಲಿ ಬೀಜಬಿತ್ತುವದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡದೊಡ್ಡ ಕಾವಲುಗಳಲ್ಲಿ ಮೇಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಸಮಯದಲ್ಲಿ ಯೆಹೋವನು ನಿಮಗಾಗಿ ಮಳೆ ಸುರಿಸುವನು. ನೀವು ಭೂಮಿಯಲ್ಲಿ ಬೀಜಬಿತ್ತಿದ್ದಾಗ ಫಸಲನ್ನು ಹೊಂದುವಿರಿ. ನಿಮಗೆ ಬಹುದೊಡ್ಡ ಸುಗ್ಗಿ ಆಗುವದು. ಹೊಲದಲ್ಲಿ ನಿಮ್ಮ ಪಶುಗಳಿಗೆ ಬೇಕಾದಷ್ಟು ಹುಲ್ಲು ಇರುವದು. ಮೇಯಲು ನಿಮ್ಮ ಕುರಿಗಳಿಗೆ ಬೇಕಾದಷ್ಟು ಬಯಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:23
33 ತಿಳಿವುಗಳ ಹೋಲಿಕೆ  

ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ.


ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.


ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರಿಂದ ಹಿಂಗಾರು ಮಳೆಯ ಕಾಲದಲ್ಲಿ, ಮಳೆಯನ್ನು ಬೇಡಿಕೊಳ್ಳಿರಿ. ಹೀಗೆ ಯೆಹೋವ ದೇವರು ಮಿಂಚುವ ಮೋಡಗಳನ್ನು ಮಾಡಿ, ಅವರಿಗೆ ಸಮೃದ್ಧಿಯಾದ ಮಳೆಯನ್ನೂ, ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವರು.


ಯೆಹೋವ ದೇವರು ನಿನ್ನನ್ನು ನಿತ್ಯವೂ ನಡೆಸುತ್ತಾ, ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ, ನಿನ್ನ ಎಲುಬುಗಳನ್ನು ಬಲಪಡಿಸುವರು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಇರುವೆ. ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ


ನಿಮ್ಮ ಆಲಯದ ಸಮೃದ್ಧಿಯಿಂದ ಅವರು ಸಂತೃಪ್ತಿ ಹೊಂದುವರು; ನಿಮ್ಮ ಹರ್ಷ ನದಿಯಿಂದ ಅವರಿಗೆ ಕುಡಿಯಲು ಕೊಡುವಿರಿ.


ಆಗ ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನೈಲ್ ನದಿಯೊಳಗಿಂದ ಏರಿಬಂದು, ಆಪುಹುಲ್ಲುಗಾವಲಲ್ಲಿ ಮೇಯುತ್ತಿದ್ದವು.


ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.


ಆ ಏಳು ಒಳ್ಳೆಯ ಹಸುಗಳು ಏಳು ವರ್ಷಗಳು; ಏಳು ಒಳ್ಳೆಯ ತೆನೆಗಳೂ, ಏಳು ವರ್ಷಗಳೇ. ಇವೆರಡು ಕನಸುಗಳ ಅರ್ಥ ಒಂದೇ.


ಹಠಮಾರಿ ಹಸುವಿನ ಹಾಗೆ ಇಸ್ರಾಯೇಲು ಹಟಮಾರಿಯಾಗಿದೆ. ಈಗ ಯೆಹೋವ ದೇವರು ಹುಲ್ಲುಗಾವಲಲ್ಲಿರುವ ಕುರಿಮರಿಯ ಹಾಗೆ ಅವರನ್ನು ಹೇಗೆ ಮೇಯಿಸುವರು?


ಆ ದೇಶವು ಸುಭಿಕ್ಷದ ಏಳು ವರ್ಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.


ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವುದು ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.


ಇದಲ್ಲದೆ ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು.


ಭೂಮಿಯು ತನ್ನ ಫಲವನ್ನು ಕೊಡುವುದು. ನೀವು ತಿಂದು ತೃಪ್ತರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.


“ ‘ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು, ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳಂತೆ ನಡೆದರೆ,


ಕಣ ತುಳಿಸುವ ಕೆಲಸವು ದ್ರಾಕ್ಷಿ ಬೆಳೆಯುವವರೆಗೂ ದ್ರಾಕ್ಷಿ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿಯನ್ನು ತಿಂದು, ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.


ನೀವು ನಿಮ್ಮ ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೂಡಿಸುವಂತೆ ದೇವರು ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ, ಮುಂಗಾರು ಹಿಂಗಾರುಗಳನ್ನೂ ಕೊಡುವರು.


ದೇವರು ನಮ್ಮನ್ನು ಆಶೀರ್ವದಿಸುವರು. ಭೂಮಿಯಲ್ಲಿರುವ ಎಲ್ಲರೂ ದೇವರಲ್ಲಿ ಭಯಭಕ್ತಿಯುಳ್ಳವರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು