Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:25 - ಕನ್ನಡ ಸಮಕಾಲಿಕ ಅನುವಾದ

25 ಮಹಾ ಸಂಹಾರದ ದಿವಸದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು ನೀರಿನ ಕಾಲುವೆಗಳೂ ಹರಿಯುತ್ತಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬುರುಜುಗಳು ಬಿದ್ದುಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪ್ರತಿಯೊಂದು ಬೆಟ್ಟದಲ್ಲಿಯೂ ಪರ್ವತದಲ್ಲಿಯೂ ಹರಿಯುವ ನೀರಿನ ತೊರೆಗಳಿರುವವು. ಇವೆಲ್ಲಾ ಅನೇಕ ಜನರು ಕೊಲ್ಲಲ್ಪಟ್ಟ ನಂತರವೂ ಬುರುಜುಗಳು ಕೆಡವಲ್ಪಟ್ಟ ನಂತರವೂ ಸಂಭವಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:25
22 ತಿಳಿವುಗಳ ಹೋಲಿಕೆ  

ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ನಾವು ಹೋರಾಡುವಾಗ ಉಪಯೋಗಿಸುವ ಆಯುಧಗಳು ಲೋಕದವುಗಳಲ್ಲ. ಅವುಗಳಿಗೆ ಕೋಟೆಗಳನ್ನೇ ಕೆಡವಿ ಹಾಕುವ ದೈವಿಕ ಶಕ್ತಿ ಇದೆ.


ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು,” ಎಂದು ಕೂಗಿ ಹೇಳಿದರು.


ನಿನ್ನ ಕೋಟೆಗಳೆಲ್ಲಾ ಮೊದಲನೆಯ ಮಾಗಿದ ಹಣ್ಣುಳ್ಳ ಅಂಜೂರದ ಗಿಡಗಳ ಹಾಗಿರುವುವು. ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವುದು.


ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವಾದವನ್ನಾಗಿ ಮಾಡುವೆನು. ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು. ದಿವ್ಯಾಶೀರ್ವಾದದ ಮಳೆಯಾಗುವುದು.


ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳನ್ನು ಸ್ವಂತ ದೇಶಕ್ಕೆ ತರುವೆನು. ಅವುಗಳನ್ನು ಇಸ್ರಾಯೇಲಿನ ಪರ್ವತಗಳ ಮೇಲೆ ಹಳ್ಳಗಳಲ್ಲಿ ನಿವಾಸಿಗಳುಳ್ಳ ಎಲ್ಲಾ ದೇಶಗಳಲ್ಲಿಯೂ ಮೇಯಿಸುವೆನು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು. ಇದರ ತುದಿಯಲ್ಲಿರುವ ಎಳೆಯದಾದ ಕೊಂಬೆಯನ್ನು ಕತ್ತರಿಸಿ, ಎತ್ತರವಾದ ಪರ್ವತದ ಮೇಲೆ ನಾಟುವೆನು.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ. ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು. ದೇವರು ಬಂಡೆಯನ್ನು ಸೀಳಲು, ನೀರು ರಭಸದಿಂದ ಹೊರಗೆ ಬಂತು.


ಆ ಮನುಷ್ಯನು ನನ್ನನ್ನು ಮತ್ತೆ ಆಲಯದ ಬಾಗಿಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು, ಏಕೆಂದರೆ ಆಲಯದ ಮುಂಭಾಗದಲ್ಲಿ ನೀರು ಇತ್ತು. ಆ ನೀರು ಆಲಯದ ದಕ್ಷಿಣಕ್ಕೆ ಕೆಳಗಡೆ ಹರಿಯಿತು.


ಆ ದಿವಸದಲ್ಲಿ ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವುವು. ಗುಡ್ಡಗಳು ಹಾಲಿನಿಂದ ಹರಿಯುವುವು. ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವುವು. ಯೆಹೋವ ದೇವರ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ಕಣಿವೆಗೆ ಜಲ ಕೊಡುವುದು.


ಅವರ ತೊಟ್ಟಿಗಳಿಂದ ನೀರು ಹರಿಯುವಂತೆ ಮಾಡುವರು. ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. “ಅವರ ಅರಸನು ಅಗಾಗ್ ರಾಜನಿಗಿಂತಲೂ ಉನ್ನತವಾಗಿರುವನು. ಅವರ ರಾಜ್ಯವು ಅಭಿವೃದ್ಧಿ ಹೊಂದುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು