Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:27 - ಕನ್ನಡ ಸಮಕಾಲಿಕ ಅನುವಾದ

27 ಇಗೋ, ಯೆಹೋವ ದೇವರ ನಾಮವು ದೂರದಿಂದ ಬರುತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇಳುವ ಹೊಗೆಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ಆತನ ನಾಲಿಗೆಯು ದಹಿಸುವ ಅಗ್ನಿಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇಗೋ, ಸರ್ವೇಶ್ವರ ನಾಮಧೇಯನು ಬರುತಿಹನು ದೂರದಿಂದ; ಭುಗಿಲೇರುತಿದೆ ಆತನ ಕೋಪ ಏಳುತಿದೆ ದಟ್ಟವಾದ ಧೂಮ ಅದರಿಂದ. ದಹಿಸುವ ಅಗ್ನಿಯಂತಿದೆ ಆತನ ನಾಲಗೆ. ಭರಿತವಾಗಿದೆ ಆತನ ತುಟಿಗಳು ರೋಷದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇಗೋ, ಯೆಹೋವನಾಮಧೇಯನು ದೂರದಿಂದ ಬರುತ್ತಾನೆ; ಆತನ ಕೋಪವು ಉರಿಯುತ್ತಿದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇಗೋ, ಯೆಹೋವನ ನಾಮವು ಬಹುದೂರದಿಂದ ಬರುವದು. ಆತನ ಕೋಪವು ದಟ್ಟವಾದ ಹೊಗೆಯೊಂದಿಗೆ ಇರುವ ಬೆಂಕಿಯೋಪಾದಿಯಲ್ಲಿರುವದು. ಯೆಹೋವನ ಬಾಯಿ ಕೋಪದಿಂದಲೂ ನಾಲಿಗೆಯು ಸುಡುವ ಬೆಂಕಿಯಂತೆಯೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:27
26 ತಿಳಿವುಗಳ ಹೋಲಿಕೆ  

ಏಕೆಂದರೆ ನಮ್ಮ, “ದೇವರು ದಹಿಸುವ ಅಗ್ನಿಯಾಗಿದ್ದಾರೆ.”


ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು.


ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.


“ನಾನು ನೋಡುತ್ತಿದ್ದ ಹಾಗೆಯೇ, “ಸಿಂಹಾಸನಗಳನ್ನು ಜೋಡಿಸಿದರು. ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ, ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ, ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ, ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.


ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.


ಆಗ ಪಶ್ಚಿಮದ ಕಡೆಯವರು ಯೆಹೋವ ದೇವರ ಹೆಸರಿಗೂ, ಸೂರ್ಯೋದಯದ ಕಡೆಯವರು ದೇವರ ಘನಕ್ಕೂ ಭಯಪಡುವರು. ವೈರಿಯು ಪ್ರಳಯದಂತೆ ಬರುವಾಗ, ಯೆಹೋವ ದೇವರ ಆತ್ಮವು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವರು.


ಎದೋಮಿನ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವುವು. ಅದರ ಧೂಳು ಗಂಧಕವಾಗುವುದು, ದೇಶವು ಉರಿಯುವ ಡಾಂಬರಿನಂತೆ ಇರುವುದು.


ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವುವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿ ಹಚ್ಚಿದಂತಾಗುವುದು.”


“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.


ಯುದ್ಧವೀರರ ಪ್ರತಿ ಯುದ್ಧವು ಗಲಿಬಿಲಿಯ ಗದ್ದಲದಿಂದ ರಕ್ತದಲ್ಲಿ ಹೊರಳಾಡಿಸಿದ ವಸ್ತ್ರಗಳು ಆಗಿರುತ್ತವೆ. ಆದರೆ ಇವು ಬೆಂಕಿಗೆ ಆಹುತಿಯಾಗುತ್ತವೆ. ಅದು ಬೆಂಕಿಗೆ ಇಂಧನವಾಗಿರುತ್ತದೆ.


ಯೆಹೋವ ದೇವರೇ ಎಷ್ಟರವರೆಗೆ ಕೋಪಗೊಂಡಿರುವಿರಿ? ಸತತವೂ ನೀವು ಕೋಪದಿಂದಿರುವಿರೋ? ಎಷ್ಟರವರೆಗೆ ನಿಮ್ಮ ರೋಷವು ಬೆಂಕಿಯಂತೆ ಉರಿಯುವುದು?


“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.


ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, ಅದರ ಫಲವನ್ನೂ ತಿಂದು ಬಿಟ್ಟು, ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು.


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ದಹಿಸುವ ಅಗ್ನಿಯೂ, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರೂ ಆಗಿದ್ದಾರೆ.


ಯೆಹೋವ ದೇವರು ಮತ್ತು ಅವರ ರೋಷಕ್ಕೆ ಆಯುಧಗಳಾದವರು ದೂರದೇಶದಿಂದ ಎಂದರೆ, ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”


ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.


ಯೆಹೋವ ದೇವರು ಬೆಂಕಿಯೊಡನೆ ಬರುವರು. ಅವರ ರಥಗಳು ಬಿರುಗಾಳಿಯ ಹಾಗೆ ಇರುವುವು. ಕಠಿಣವಾದ ತಮ್ಮ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತಮ್ಮ ಗದರಿಕೆಯನ್ನೂ ಸಲ್ಲಿಸುವುದಕ್ಕಾಗಿಯೇ ಬರುವರು.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು