ಯೆಶಾಯ 30:29 - ಕನ್ನಡ ಸಮಕಾಲಿಕ ಅನುವಾದ29 ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಆದಂತೆ ನಿಮಗೆ ಹಾಡು ಇರುವುದು. ಯೆಹೋವ ದೇವರ ಪರ್ವತವಾಗಿರುವ ಇಸ್ರಾಯೇಲಿನ ಬಂಡೆಯ ಬಳಿಗೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ. ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನೀವಾದರೋ ಹಾಡುವಿರಿ ಹಬ್ಬದ ರಾತ್ರಿಯಲ್ಲೋ ಎಂಬಂತೆ ಹೃದಯಾನಂದ ಪಡುವಿರಿ, ಇಸ್ರಯೇಲರ ರಕ್ಷಣೆಯ ಕೋಟೆಗೆ, ಸರ್ವೇಶ್ವರನ ಶಿಖರಕ್ಕೆ ಕೊಳಲನೂದುತ ಹೋಗುವವರಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೀವೋ ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ; ಇಸ್ರಾಯೇಲ್ಯರ ಶರಣನ ಸಾನ್ನಿಧ್ಯವನ್ನು ಬಯಸಿ ಯೆಹೋವನ ಪರ್ವತಕ್ಕೆ ಪಿಳ್ಳಂಗೋವಿಯ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆ ಸಮಯದಲ್ಲಿ ನೀವು ಹರ್ಷಗಾನ ಹಾಡುವಿರಿ. ಅದು ಹಬ್ಬದ ರಾತ್ರಿಯ ಸಮಯದಂತಿರುವದು. ದೇವರ ಪರ್ವತದಲ್ಲಿ ನಡೆಯುತ್ತಿರುವಾಗ ನೀವು ಅತ್ಯಂತ ಸಂತೋಷಪಡುವಿರಿ. ಇಸ್ರೇಲಿನ ಬಂಡೆಯಾಗಿರುವ ಯೆಹೋವನನ್ನು ಆರಾಧಿಸಲು ಹೋಗುವಾಗ ಕೊಳಲಿನ ಗಾನವನ್ನು ಕೇಳಿ ಸಂತೋಷಿಸುವಿರಿ. ಅಧ್ಯಾಯವನ್ನು ನೋಡಿ |
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.