ಯೆಶಾಯ 30:33 - ಕನ್ನಡ ಸಮಕಾಲಿಕ ಅನುವಾದ33 ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು. ಅಧ್ಯಾಯವನ್ನು ನೋಡಿ |