Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:4 - ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಅವನ ಪ್ರಧಾನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿಗಳು ಹಾನೇಸಿಗೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಫರೋಹನ ಪ್ರಧಾನರು ಚೋವನಿನಲ್ಲಿದ್ದರೂ, ಅವನ ದೂತರು ಹಾನೇಸಿಗೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಫರೋಹನ ಸಾಮಂತರಾಜರು ಚೊವನಿನಲ್ಲಿದ್ದಾರೆ. ಅವನ ರಾಯಭಾರಿಗಳು ಹಾನೇಸನ್ನು ತಲುಪಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಫರೋಹನ ಸಾಮಂತ ರಾಜರು ಚೋವನಿನಲ್ಲಿದ್ದರೂ ಅವನ ದೂತರು ಹಾನೇಸಿನ ತನಕ ಸೇರಿದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮ್ಮ ಅಧಿಕಾರಿಗಳು ಚೋವನಿಗೆ ಹೋಗಿದ್ದಾರೆ, ನಿಮ್ಮ ರಾಯಭಾರಿಗಳು ಹಾನೇಸಿಗೆ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:4
12 ತಿಳಿವುಗಳ ಹೋಲಿಕೆ  

ಚೋವನ್ ಪಟ್ಟಣದ ಅಧಿಪತಿಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿದೆ. ನೀವು ಫರೋಹನನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ಶಿಷ್ಯನೆಂದು ಹೇಳುವುದು ಹೇಗೆ”?


ಏಕೆಂದರೆ ಅವರು ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ. ಹೀಗೆ ಅವರು ಈಜಿಪ್ಟಿಗೆ ಹೋಗಿ ತಹಪನೇಸಿಗೆ ಬಂದರು.


ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ. ದೂರಕ್ಕೆ ನಿನ್ನ ರಾಯಭಾರಿಗಳನ್ನು ಕಳುಹಿಸಿದ್ದೀ. ಪಾತಾಳದಷ್ಟು ನೀಚಸ್ಥಿತಿಗೆ ಇಳಿದಿದ್ದೀಯೆ.


ಅವರು ಮಹೋನ್ನತನಾದಾತನ ಕಡೆಗೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿನ ಹಾಗೆ ಇದ್ದಾರೆ. ಅವರ ನಾಯಕರು ನಾಲಿಗೆಯ ಹುಚ್ಚು ಕೂಗಾಟದಿಂದ, ಖಡ್ಗದಿಂದ ಬೀಳುವರು. ಇದೇ ಈಜಿಪ್ಟ್ ದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.


ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು.


ನಾನು ಪತ್ರೋಸನ್ನು ನಾಶಮಾಡಿ, ಚೋವನ್ ಪಟ್ಟಣಕ್ಕೆ ಬೆಂಕಿಯಿಡುವೆನು. ತೆಬೆಸ್ ಪಟ್ಟಣವನ್ನು ದಂಡಿಸುವೆನು.


ಆದರೆ ಅಸ್ಸೀರಿಯದ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನೆಂದರೆ, ಹೋಶೇಯನು ಅಸ್ಸೀರಿಯದ ಅರಸನಿಗೆ ವರ್ಷ ವರ್ಷಕ್ಕೂ ಕೊಡುವ ಕಪ್ಪವನ್ನು ಕೊಡದೆ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ದೂತರನ್ನು ಕಳುಹಿಸಿದನು. ಆದ್ದರಿಂದ ಅಸ್ಸೀರಿಯದ ಅರಸನು ಅವನನ್ನು ಕಟ್ಟಿ, ಸೆರೆಮನೆಯಲ್ಲಿ ಬಂಧಿಸಿದನು.


ಅವರು ನೆಗೆವನ್ನು ದಾಟಿ ಹೆಬ್ರೋನಿನವರೆಗೆ ಬಂದರು. ಅಲ್ಲಿ ಅನಾಕನ ಮಕ್ಕಳಾದ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳು ಮೊದಲು ನಿರ್ಮಿಸಲಾಗಿತ್ತು.


ದೇವರು ಪಿತೃಗಳ ಮುಂದೆ ಈಜಿಪ್ಟ್ ದೇಶದಲ್ಲಿ, ಚೋವನ್ ಬೈಲಿನಲ್ಲಿ ಅದ್ಭುತಗಳನ್ನು ಮಾಡಿದರು.


ಯೆಹೋವ ದೇವರಿಂದ ನಾನು ಸುದ್ದಿಯನ್ನು ಕೇಳಿದ್ದೇನೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ; “ನೀವು ಒಟ್ಟುಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ!”


ಓಬದ್ಯನ ದರ್ಶನವು. ಸಾರ್ವಭೌಮ ಯೆಹೋವ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾರೆ: ಯೆಹೋವ ದೇವರಿಂದ ಸುದ್ದಿಯನ್ನು ಕೇಳಿದ್ದೇವೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ: “ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು