Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 31:2 - ಕನ್ನಡ ಸಮಕಾಲಿಕ ಅನುವಾದ

2 ಆದರೂ ಅವರು ಜ್ಞಾನಿ, ಕೇಡನ್ನು ಬರಮಾಡುವರು. ಅವರು ತಮ್ಮ ಮಾತನ್ನು ಹಿಂದೆಗೆಯುವುದಿಲ್ಲ. ಆದರೆ ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದರೆ ಸರ್ವೇಶ್ವರ ಸ್ವಾಮಿ ಬುದ್ಧಿವಂತರು, ಆಡಿದ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳದವರು, ಕೇಡನ್ನು ಬರಮಾಡಬಲ್ಲವರು. ಕೆಡುಕರ ಕೊಂಪೆಗೂ ದುರುಳರ ಸಹಾಯಕರಿಗೂ ವಿರುದ್ಧವಾಗಿ ನಿಲ್ಲಬಲ್ಲವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಗೋ, ಆತನೂ ವಿವೇಕಿ, ತನ್ನ ಮಾತುಗಳನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು; ಕೆಡುಕರ ಮನೆತನಕ್ಕೂ ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಯೆಹೋವನು ಜ್ಞಾನವಂತನಾಗಿದ್ದಾನೆ. ಆತನೇ ಅವರಿಗೆ ವಿರುದ್ಧವಾಗಿ ಸಂಕಟಗಳನ್ನು ಬರಮಾಡುವನು. ದೇವರ ಆಜ್ಞೆಯನ್ನು ಜನರು ಬದಲಾಯಿಸಲಾಗುವದಿಲ್ಲ. ಯೆಹೋವನು ಎದ್ದು ದುಷ್ಟಜನರ (ಯೆಹೂದ) ವಿರುದ್ಧ ಯುದ್ಧ ಮಾಡುವನು. ಅವರಿಗೆ ಸಹಾಯ ಕೊಡುವವರ (ಈಜಿಪ್ಟ್) ವಿರುದ್ಧವಾಗಿಯೂ ಯುದ್ಧ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 31:2
37 ತಿಳಿವುಗಳ ಹೋಲಿಕೆ  

ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.


ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್.


ಶಕ್ತರಾಗಿರುವ ಒಬ್ಬರೇ ಜ್ಞಾನವಂತರಾಗಿರುವ ದೇವರಿಗೆ ಕ್ರಿಸ್ತ ಯೇಸುವಿನ ಮೂಲಕ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.


ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ಆಗ ಎಲ್ಲಾ ಈಜಿಪ್ಟಿನ ನಿವಾಸಿಗಳು ನಾನೇ ಯೆಹೋವನೆಂದು ತಿಳಿಯುವರು. “ ‘ಅವರು ಇಸ್ರಾಯೇಲರ ಮನೆತನದವರಿಗೆ ದಂಟಿನ ಊರುಗೋಲಾಗಿದ್ದರು.


ಆಗ ಯೆರೆಮೀಯನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗ ಲೇಖಕನಾದ ಬಾರೂಕನಿಗೆ ಕೊಟ್ಟನು. ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಸುರುಳಿಯ ವಾಕ್ಯಗಳನ್ನೆಲ್ಲಾ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು. ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲಾದವು.


ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.


ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.


ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ಆದರೆ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯೂ, ಈಜಿಪ್ಟ್ ನೆರಳಿನ ಭರವಸೆಯಿಂದ ನಿಮಗೆ ನಿಂದೆಯೂ ಉಂಟಾಗುವುದು.


ಯೆಹೋವ ದೇವರು ಪೆರಾಚೀಮ್ ಪರ್ವತದಲ್ಲಿ ಎದ್ದಂತೆ ಏಳುವರು. ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ, ಅಪರೂಪವಾದ ತಮ್ಮ ಕೆಲಸವನ್ನು ನಡಿಸಿ, ಅಪೂರ್ವವಾದ ತಮ್ಮ ಕಾರ್ಯವನ್ನು ನೆರವೇರಿಸುವನು.


ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದು ಏನೆಂದರೆ: “ನಿಶ್ಚಯವಾಗಿ ಈ ದುಷ್ಕೃತ್ಯಗಳನ್ನು ನೀವು ಸಾಯುವ ತನಕ ಮನ್ನಿಸುವುದೇ ಇಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳಿದ್ದಾರೆ.


“ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡದಿರಲಿ. ಏಕೆಂದರೆ ಯೆಹೋವ ದೇವರು ತಿಳುವಳಿಕೆಯುಳ್ಳ ದೇವರು. ಅವರು ಮನುಷ್ಯರ ಕಾರ್ಯಗಳನ್ನು ತೂಗಿನೋಡುವರು.


ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಒಳ್ಳೆಯ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ


ಇದಲ್ಲದೆ ಮಂಜೂಷವು ಹೊರಡುವಾಗ ಮೋಶೆಯು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಎದ್ದೇಳಿರಿ, ನಿಮ್ಮ ಶತ್ರುಗಳು ಚದರಿಹೋಗಲಿ. ನಿಮ್ಮನ್ನು ಹಗೆ ಮಾಡುವವರು ನಿಮ್ಮ ಎದುರಿನಿಂದ ಓಡಿಹೋಗಲಿ.”


ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುತ್ತಾರೆ, ಮತ್ತು ಕುತಂತ್ರಿಯ ಯೋಜನೆಗಳನ್ನು ನಿರರ್ಥಕಮಾಡುತ್ತಾರೆ.


ಅಯ್ಯೋ ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ! ದುಷ್ಟ ಸಂತತಿಯೇ, ಭ್ರಷ್ಟರಾದ ಮಕ್ಕಳೇ! ಯೆಹೋವ ದೇವರನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧರನ್ನು ತಿರಸ್ಕರಿಸಿದ್ದಾರೆ ಅವರಿಂದ ದೂರವಾಗಿದ್ದಾರೆ.


ಹೀಗಿರಲು ಕರ್ತದೇವರು ಅವರ ಯೌವನಸ್ಥರಲ್ಲಿ ಆನಂದಿಸುವುದಿಲ್ಲ. ಅವರ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಏಕೆಂದರೆ, ಪ್ರತಿಯೊಬ್ಬನು ಕಪಟಿಯೂ, ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದ್ದರಿಂದ ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ನೀನು ಆ ರಾಜರಂತೆ ಸಮಾಧಿಗೆ ಸೇರದಿರುವಿ. ಏಕೆಂದರೆ ನಿನ್ನ ದೇಶವನ್ನು ನೀನು ನಾಶಮಾಡಿ, ನಿನ್ನ ಜನರನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ನಿರಂತರವೂ ನಿರ್ನಾಮವಾಗಲಿ.


ಈ ವಿವೇಕವು ಸಹ ಅತಿಶಯ ಆಲೋಚನಾಪರರೂ, ಕಾರ್ಯಸಾಧಕ ಜ್ಞಾನ ಶ್ರೇಷ್ಠರೂ ಆಗಿರುವ ಸೇನಾಧೀಶ್ವರ ಯೆಹೋವ ದೇವರಿಂದಲೇ ಹೊರಡುತ್ತದೆ.


“ಜ್ಞಾನವೂ, ಶಕ್ತಿಯೂ ದೇವರಲ್ಲಿವೆ; ಸಮಾಲೋಚನೆಯೂ, ಗ್ರಹಿಕೆಯೂ ದೇವರವೇ.


ಬಲವೂ, ಜ್ಞಾನವೂ ದೇವರಲ್ಲಿವೆ; ವಂಚಕ ಹಾಗು ವಂಚಿತ ದೇವರಿಗೆ ಒಳಪಟ್ಟವರು.


ಬಿಲ್ಲುಗಾರರಲ್ಲಿ ಕೆಲವರೂ, ಕೇದಾರಿನ ಬಲಿಷ್ಠರಲ್ಲಿ ಕೆಲವರು ಮಾತ್ರ ಉಳಿಯುವರು,” ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ನುಡಿದಿದ್ದಾರೆ.


ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ. ಆದ್ದರಿಂದ ನಾನು ಅವಳಿಗೆ ಇದನ್ನು ಕುರಿತು ಅವರ ಬಲವು ನಿಂತು ಹೋಗಿದೆ ಎಂದು ನಾನು ಕೂಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು